Home
ಸುದ್ದಿಜಾಲ

ಇಂದು 3D ಕರ್ವ್ಡ್‌ ಡಿಸ್‌ಪ್ಲೇ ಇರುವ ಈ ಫೋನಿನ ಸೇಲ್‌!..ಆಫರ್‌ ಬೆಲೆ ಎಷ್ಟು?

ಜನಪ್ರಿಯ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಇನ್ಫಿನಿಕ್ಸ್‌ ಸಂಸ್ಥೆಯ ನೂತನವಾಗಿ ಪರಿಚಯಿಸಿರುವ ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಸ್ಮಾರ್ಟ್‌ಫೋನ್‌ ಸ್ಟೈಲಿಶ್‌ ಡಿಸೈನ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್‌ ಇಂದು (ಏಪ್ರಿಲ್‌ 25 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ.
.
ಇನ್ಫಿನಿಕ್ಸ್‌ ಕಂಪನಿಯ ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಇಂದು ಅಧಿಕೃತವಾಗಿ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಸೇಲ್‌ ಪ್ರಾರಂಭ ಮಾಡಲಿದೆ. ಈ ಫೋನ್‌ ಮೂರು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸರ್‌ ಆಯ್ಕೆ ಅನ್ನು ಇದು ಇದೆ.

ಇಂದು 3D ಕರ್ವ್ಡ್‌ ಡಿಸ್‌ಪ್ಲೇ ಇರುವ ಈ ಫೋನಿನ ಸೇಲ್‌!..ಆಫರ್‌ ಬೆಲೆ ಎಷ್ಟು?

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ 12GB RAM ಮತ್ತು 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಅಲ್ಲದೇ ಇದು 4,600mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೇ ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,080 x 2,436 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 3D ಕರ್ವ್ಡ್ AMOLED ಡಿಸ್‌ಪ್ಲೇ ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ ಆಕ್ಟಾ ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಬಲ್ ಹೊಂದಿದ್ದು, ಇದು ಆಂಡ್ರಾಯ್ಡ್‌ 14 ಆಧಾರಿತ XOS 14 ನಲ್ಲಿ ಕೆಲಸ ನಿರ್ವಹಿಸುತ್ತದೆ. ಅಲ್ಲದೇ 12GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಅನ್ನು ಪಡೆದಿದ್ದು, ಹಾಗೆಯೇ 24GB ವರೆಗೆ ವರ್ಚುವಲ್‌ RAM ಲಭ್ಯವಾಗಲಿದೆ. ಇದರ ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ 2 TB ವರೆಗೆ ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಸಹ ಒದೆ. ಇದಲ್ಲದೆ ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಕರೆಗಾಗಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದ್ದು, ಇದು 20W ವೈರ್‌ಲೆಸ್ ಮ್ಯಾಗ್‌ಚಾರ್ಜ್‌ಗೆ ಸಪೋರ್ಟ್‌ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, GPS, NFC, ಬ್ಲೂಟೂತ್ ಮತ್ತು ವೈ ಫೈ ಆಯ್ಕೆಗಳು ಸೇರಿವೆ. ಇದರ ಜೊತೆಗೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ.

Best Mobiles in India

English summary
Infinix Note 40 Pro+ 5G sale starts from Today via flipkart. check offer price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+