Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
ಇನ್ಫಿನಿಕ್ಸ್ ಸಂಸ್ಥೆಯ ಹೊಸ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಸ್ಮಾರ್ಟ್‌ಫೋನ್ ಈಗಾಗಲೇ ಫೀಚರ್ಸ್ ಹಾಗೂ ಸ್ಟೈಲಿಶ್ ಲುಕ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ನಾಳೆ (ಏಪ್ರಿಲ್ 25 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ.
.
ಇನ್ಫಿನಿಕ್ಸ್ ಕಂಪನಿಯ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ನಾಳೆ ಅಧಿಕೃತವಾಗಿ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಸೇಲ್ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯದಲ್ಲಿ ಇದೆ.

ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಮೊಬೈಲ್ 12GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಇದು 4,600mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಹಾಗಾದರೇ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಇನ್ಫಿನಿಕ್ಸ್ ನೋಟ್ 40 ಪ್ರೊ+ 5G - ಫೀಚರ್ಸ್
ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಮೊಬೈಲ್ 6.78 ಇಂಚಿನ ಫುಲ್ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,080 x 2,436 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 3D ಕರ್ವ್ಡ್ AMOLED ಡಿಸ್‌ಪ್ಲೇ ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಪಡೆದಿದೆ.
ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಮೊಬೈಲ್ ಆಕ್ಟಾ ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ಪವರ್ ಹೊಂದಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ XOS 14 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256 GB ಇಂಟರ್ ಸ್ಟೋರೇಜ್ ಅನ್ನು ಪಡೆದಿದ್ದು, ಹಾಗೆಯೇ 24GB ವರೆಗೆ ವರ್ಚುವಲ್ RAM ಲಭ್ಯವಾಗಲಿದೆ. ಇದರ ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ 2 TB ವರೆಗೆ ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಮೊಬೈಲ್ ಮೂರು ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಸಹ ಪಡೆದಿದೆ. ಇದಲ್ಲದೆ ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಕರೆಗಾಗಿ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 20W ವೈರ್‌ಲೆಸ್ ಮ್ಯಾಗ್‌ಚಾರ್ಜ್‌ಗೆ ಸಪೋರ್ಟ್ ನೀಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, GPS, NFC, ಬ್ಲೂಟೂತ್ ಮತ್ತು ವೈ ಫೈ ಆಯ್ಕೆಗಳು ಸೇರಿವೆ. ಇದರ ಜೊತೆಗೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.


Click it and Unblock the Notifications








