Home
ಸುದ್ದಿಜಾಲ

ನಾಳೆ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌!

ಮೊಬೈಲ್‌ ಸಂಸ್ಥೆಯು ತನ್ನ ಕೆಲವು ಫೋನ್‌ಗಳ ಮೂಲಕ ಗ್ರಾಹಕರನ್ನು ಅಟ್ರ್ಯಾಕ್ಟ್‌ ಮಾಡಿರುವ ಇನ್ಫಿನಿಕ್ಸ್‌ ಸಂಸ್ಥೆಯು ಈಗ ಹೊಸ ಫೋನ್‌ ಬಿಡುಗಡೆ ಮಾಡಲು ಸಜ್ಜಾಗಿದೆ. ಸಂಸ್ಥೆಯು ನಾಳೆ (ಏಪ್ರಿಲ್‌ 12 ರಂದು) ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಇನ್ಫಿನಿಕ್ಸ್‌ ಸಂಸ್ಥೆಯು ಇನ್ಫಿನಿಕ್ಸ್‌ ನೋಟ್‌ 40 ಮೊಬೈಲ್‌ ಸರಣಿಯನ್ನು ಲಾಂಚ್‌ ಮಾಡಲಿದೆ.

ಹೌದು, ಇನ್ಫಿನಿಕ್ಸ್‌ ಕಂಪನಿಯು ದೇಶಿಯ ಮಾರುಕಟ್ಟೆಗೆ ನಾಳೆ ಇನ್ಫಿನಿಕ್ಸ್‌ ನೋಟ್‌ 40 ಪ್ರೊ 5G ಮತ್ತು ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ಗಳನ್ನು ಪರಿಚಯಿಸಲಿದೆ. ಈ ನೂತನ ಫೋನ್‌ಗಳು ಕರ್ವ್‌ ಡಿಸ್‌ಪ್ಲೇ ರಚನೆ ಪಡೆದಿರಲಿದ್ದು, ಇದರೊಂದಿಗೆ 5000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿರಲಿವೆ.

ನಾಳೆ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌!

ಹಾಗೆಯೇ ಈ ಮೊಬೈಲ್‌ಗಳು ಡ್ಯುಯಲ್‌ ಸ್ಟಿರಿಯೋ ಸ್ಪೀಕರ್ಸ್‌, 108 ಮೆಗಾ ಪಿಕ್ಸಲ್‌ ಕ್ಯಾಮೆರಾ ಸೆಟ್‌ಅಪ್‌ ಹಾಗೂ 120Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇ ಗಳಂತಹ ಆಕರ್ಷಕ ಫೀಚರ್ಸ್‌ ಒಳಗೊಂಡಿರಲಿದೆ. ಹಾಗೆಯೇ ಈ ಫೋನ್‌ ಬ್ಲ್ಯಾಕ್‌, ಗೋಲ್ಡ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆಗಳಲ್ಲಿ ಲಗ್ಗೆ ಇಡುವುದು ಬಹುತೇಕ ಖಚಿತ ಆಗಿದೆ. ಇನ್ನುಳಿದಂತೆ ಇನ್ಫಿನಿಕ್ಸ್‌ ಇನ್ಫಿನಿಕ್ಸ್‌ ನೋಟ್‌ 40 ಮೊಬೈಲ್‌ ಸರಣಿ ಫೋನ್‌ಗಳ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G - ನಿರೀಕ್ಷಿತ ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಅನ್ನು ಪಡೆದಿರಲಿದ್ದು, ಇದು 1,080x2,436 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 3D ಕರ್ವ್ಡ್ AMOLED ಡಿಸ್‌ಪ್ಲೇ ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿರಲಿದೆ. ಇದಲ್ಲದೆ ಡಿಸ್‌ಪ್ಲೇಯು 2160 PWM ಡಿಮ್ಮಿಂಗ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಪಡೆದಿರಲಿದೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಒಳಗೊಂಡಿರಲಿದ್ದು, ಆಂಡ್ರಾಯ್ಡ್‌ 14 ಆಧಾರಿತ XOS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಇದರೊಂದಿಗೆ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಇರಲಿದೆ. ಹೊಂದಿದೆ. ಅಲ್ಲದೇ ವರ್ಚುವಲ್‌ ಆಗಿ 24GB RAM ವರೆಗೆ ವಿಸ್ತರಿಸುವ ಆಯ್ಕೆ ಇರಲಿದೆ ಎನ್ನಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿರಲಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿರಲಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಸಹ ಹೊಂದಿರಲಿದೆ. ಇದಲ್ಲದೆ ಮುಂಭಾಗದಲ್ಲಿ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡುವ ಸಾಧ್ಯತೆ ಇವೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಬಹುತೇಕ ಖಚಿತ ಎನ್ನಲಾಗಿದ್ದು, ಇದಕ್ಕೆ ಪೂರಕವಾಗಿ 20W ವೈರ್‌ಲೆಸ್ ಮ್ಯಾಗ್‌ಚಾರ್ಜ್‌ಗೆ ಸಪೋರ್ಟ್‌ ಇರಲಿದೆ. ಹಾಗೆಯೇ ಈ ಫೋನಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, GPS, NFC, ಬ್ಲೂಟೂತ್ ಮತ್ತು ವೈ-ಫೈ ಇರಲಿವೆ. ಜೊತೆಗೆ IR ಬ್ಲಾಸ್ಟರ್, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ಕಂಪಾಸ್‌, ಗೈರೊಸ್ಕೋಪ್, ಲೈಟ್‌ ಸೆನ್ಸಾರ್, ಸಾರ್ ಸೆನ್ಸಾರ್‌ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಇರಲಿವೆ.

Best Mobiles in India

English summary
Infinix Note 40 Pro series launch tomorrow. Check offer Price, offers and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+