Home
ಸುದ್ದಿಜಾಲ

ಭಾರತದಲ್ಲಿ ಇನ್ಫಿನಿಕ್ಸ್‌ ನೋಟ್‌ 40 ಸರಣಿ ಲಾಂಚ್; ಬೊಂಬಾಟ್‌ ಚಾರ್ಜಿಂಗ್‌ ಆಯ್ಕೆ!

ಭಾರತೀಯ ಮೊಬೈಲ್‌ ಮಾರುಕಟ್ಟೆಗೆ ಹೊಸದಾಗಿ ಇನ್ಫಿನಿಕ್ಸ್‌ ಸಂಸ್ಥೆಯ ಇನ್ಫಿನಿಕ್ಸ್‌ ನೋಟ್‌ 40 ಮೊಬೈಲ್‌ ಸರಣಿ ಲಾಂಚ್‌ ಆಗಿದೆ. ಈ ಸರಣಿಯು ಇನ್ಫಿನಿಕ್ಸ್‌ ನೋಟ್‌ 40 ಪ್ರೊ 5G ಮತ್ತು ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮಾಡೆಲ್‌ಗಳನ್ನು ಒಳಗೊಂಡಿದ್ದು, ಈ ಫೋನ್‌ಗಳು ಆಪಲ್‌ ನ MagSafe ಅನ್ನು ಹೋಲುವ MagCharge ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯ ಪಡೆದಿವೆ.

ಹೌದು, ಇನ್ಫಿನಿಕ್ಸ್‌ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ಇಂದು ಇನ್ಫಿನಿಕ್ಸ್‌ ನೋಟ್‌ 40 ಪ್ರೊ 5G ಮತ್ತು ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ಗಳನ್ನು ಪರಿಚಯಿಸಿದೆ. ಇನ್ಫಿನಿಕ್ಸ್‌ ನೋಟ್‌ 40 ಪ್ರೊ 5G ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ 4600mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ.

ಭಾರತದಲ್ಲಿ ಇನ್ಫಿನಿಕ್ಸ್‌ ನೋಟ್‌ 40 ಸರಣಿ ಲಾಂಚ್; ಬೊಂಬಾಟ್‌ ಚಾರ್ಜಿಂಗ್‌ ಆಯ್ಕೆ!

ಹಾಗೆಯೇ ನೋಟ್‌ 40 ಪ್ರೊ 5G ಫೋನ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ ಅನ್ನು ಪಡೆದಿದ್ದು, ನೋಟ್‌ 40 ಪ್ರೊ+ 5G ಫೋನ್‌ 12GB + 256GB ಸ್ಟೋರೇಜ್‌ ಆಯ್ಕೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಬ್ಲ್ಯಾಕ್‌, ಗೋಲ್ಡ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಇನ್ಫಿನಿಕ್ಸ್‌ ಇನ್ಫಿನಿಕ್ಸ್‌ ನೋಟ್‌ 40 ಮೊಬೈಲ್‌ ಸರಣಿ ಫೋನ್‌ಗಳ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G - ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 1,080 x 2,436 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 3D ಕರ್ವ್ಡ್ AMOLED ಡಿಸ್‌ಪ್ಲೇ ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇಯು 2160 PWM ಡಿಮ್ಮಿಂಗ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಭಾರತದಲ್ಲಿ ಇನ್ಫಿನಿಕ್ಸ್‌ ನೋಟ್‌ 40 ಸರಣಿ ಲಾಂಚ್; ಬೊಂಬಾಟ್‌ ಚಾರ್ಜಿಂಗ್‌ ಆಯ್ಕೆ!

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 14 ಆಧಾರಿತ XOS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಇದರೊಂದಿಗೆ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಇರಲಿದ್ದು, ವರ್ಚುವಲ್‌ ಆಗಿ 24GB RAM ವರೆಗೆ ವಿಸ್ತರಿಸುವ ಆಯ್ಕೆ ಲಭ್ಯ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ ಮುಂಭಾಗದಲ್ಲಿ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಇದ್ದು, ಇದಕ್ಕೆ ಪೂರಕವಾಗಿ 100W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಹಾಗೂ 20W MagCharge ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಇದೆ.

ಇನ್ಫಿನಿಕ್ಸ್‌ ನೋಟ್‌ 40 ಪ್ರೊ 5G ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G ಮೊಬೈಲ್‌ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 1,080 x 2,436 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 14 ಆಧಾರಿತ XOS 14 ಓಎಸ್‌ ಸಪೋರ್ಟ್‌ ಪಡೆದಿದೆ.

ಹಾಗೆಯೇ ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ ಮುಂಭಾಗದಲ್ಲಿ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಇದೆ. ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಲಭ್ಯ.

ಬೆಲೆ ಹಾಗೂ ಲಭ್ಯತೆ

ಇನ್ಫಿನಿಕ್ಸ್‌ ನೋಟ್‌ 40 ಪ್ರೊ 5G - 8GB+256GB ಬೆಲೆ 21,999ರೂ
ಇನ್ಫಿನಿಕ್ಸ್‌ ನೋಟ್‌ 40 ಪ್ರೊ+ 5G - 12GB+256GB ಬೆಲೆ 24,999ರೂ
ಫ್ಲಿಪ್‌ಕಾರ್ಟ್‌ ತಾಣದಲ್ಲಿ ಗ್ರಾಹಕರು ಖರೀದಿ ಮಾಡಬಹುದಾಗಿದೆ.

Best Mobiles in India

English summary
Infinix Note 40 Pro Series Launched in India. Check Sale Date, Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+