ಇನ್ಫಿನಿಕ್ಸ್ ನೋಟ್ 7 ಮತ್ತು ನೋಟ್ 7 ಲೈಟ್ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ ಬಿಡುಗಡೆಯ ಭರಾಟೆ ನಡೆಯುತ್ತಲೇ ಇರುತ್ತೆ. ಪ್ರತಿನಿತ್ಯ ಹೊಸ ಸ್ಮಾರ್ಟ್‌ಫೋನ್‌ಗಳ ಘೋಷಣೆ, ಬಿಡುಗಡೆ, ವಿನ್ಯಾಸದ ಮಾಹಿತಿ ಎಲ್ಲವೂ ನಡೆಯುತ್ತಲೇ ಇರುತ್ತದೆ. ಇನ್ನು ಈಗಾಗಲೇ ಹಲವಾರು ಕಂಪೆನಿಗಳು ಸ್ಮಾರ್ಟ್ ವಲಯದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿವೆ. ಸ್ಮಾರ್ಟ್‌ಫೋನ್‌ ಪ್ರಿಯರ ಮನಸ್ಸನ್ನ ಗೆದ್ದಿವೆ. ಇವುಗಳಲ್ಲಿ ಇನ್ಫಿನಿಕ್ಸ್‌ ಕಂಪೆನಿ ಕೂಡ ಒಂದಾಗಿದ್ದು, ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಜೆಟ್‌ ಬೆಲೆಯಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ಗಳ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು

ಹೌದು, ಸ್ಮಾರ್ಟ್‌ಫೋನ್‌ ವಲಯದಲ್ಲಿ ವಿಭಿನ್ನ ಹಾಗೂ ವಿಶೇಷ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳಿಗೆ ಇನ್ಫಿನಿಕ್ಸ್‌ ಹೆಸರುವಾಸಿ ಆಗಿದೆ. ಸದ್ಯ ಈ ಕಂಪೆನಿ ತನ್ನ ಬಜೆಟ್‌ ಬೆಲಯ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ. ಇದೀಗ ತನ್ನ ಹೊಸ ಮಾದರಿಯ ನೋಟ್‌ ಸರಣಿಯಲ್ಲಿ ಇನ್ಫಿನಿಕ್ಸ್ ನೋಟ್ 7 ಮತ್ತು ನೋಟ್ 7 ಲೈಟ್ ಸ್ಮಾರ್ಟ್‌ಫೋನ ಬಗ್ಗೆ ಘೋಷಣೆ ಮಾಡಿದೆ. ಸದ್ಯ ಕಂಪೆನಿ ನೀಡಿರುವ ಮಾಹಿತಿ ಪ್ರಕಾರ ಈ ಎರಡು ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಮಾಹಿತಿ ಇದ್ದು, ಬಿಡುಗಡೆಯ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹಾಗಾದ್ರೆ ಕಂಪೆನಿಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಇನ್‌ಫಿನಿಕ್ಸ್‌ ನೋಟ್‌ 7 ಡಿಸ್‌ಪ್ಲೇ

ಇನ್‌ಫಿನಿಕ್ಸ್‌ ನೋಟ್‌ 7 ಡಿಸ್‌ಪ್ಲೇ

ಇನ್ನು ಇನ್‌ಫಿನಿಕ್ಸ್‌ ನೋಟ್‌ 7 ಸ್ಮಾರ್ಟ್‌ಫೋನ್‌ 720 x 1640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.95-ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಐಪಿಎಸ್ ಎಲ್ಸಿಡಿ ಇನ್ಫಿನಿಟಿ-ಒ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಪ್ಲಸ್‌ ರೆಸಲ್ಯೂಶನ್‌ ಹೊಂದಿದ್ದು, 20.5: 9 ರಚನೆಯ ಅನುಪಾತವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 580 ನಿಟ್ಸ್ ಬ್ರೈಟ್‌ನೆಶ್‌ ಅನ್ನು ಹೊಂದಿದ್ದು, 91.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೊ G70 SoC ಪ್ರೊಸೆಸರ್‌ ಹೊಂದಿದ್ದು,ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನು ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್‌ಫಿನಿಕ್ಸ್‌ ನೋಟ್‌7 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 25mm 2ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ ಕಡಿಮೆ ಬೆಳಕಿನ ವಿಡಿಯೋ ಕ್ಯಾಮೆರಾವನ್ನ ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಪಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಇನ್‌ಫಿನಿಕ್ಸ್‌ ನೋಟ್‌ 7 ಲೈಟ್‌ ಸ್ಮಾರ್ಟ್‌ಫೋನ್‌

ಇನ್‌ಫಿನಿಕ್ಸ್‌ ನೋಟ್‌ 7 ಲೈಟ್‌ ಸ್ಮಾರ್ಟ್‌ಫೋನ್‌

ಇನ್ಫಿನಿಕ್ಸ್ ನೋಟ್ 7 ಲೈಟ್ ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.6-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇದು ಐಪಿಎಸ್ ಎಲ್ಸಿಡಿ ಇನ್ಫಿನಿಟಿ ಒ- ಡಿಸ್‌ಪ್ಲೇ ಆಗಿದ್ದು, 20: 9 ರಚನೆಯ ಅನುಪಾತವನ್ನ ಹೊಂದಿದೆ. ಹಾಗೇಯೇ ಬಾಡಿ ಟು ಸ್ಕ್ರೀನ್‌ 90.5% ಅನುಪಾತವನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಿಲಿಯೊP 22 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 128GB ಆಂತರಿಕ ಸಂಗ್ರಹವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, 48-ಮೆಗಾಪಿಕ್ಸೆಲ್ + 2-ಮೆಗಾಪಿಕ್ಸೆಲ್ + 2-ಮೆಗಾಪಿಕ್ಸೆಲ್ + ಕಡಿಮೆ ಬೆಳಕಿನ ವಿಡಿಯೋ ಲೆನ್ಸ್ ಕ್ವಾಡ್ ಕ್ಯಾಮೆರಾ ವ್ಯವಸ್ಥೆಯನ್ನ ಒಳಗೊಂಡಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿವೆ. ಇದರಲ್ಲಿ ಇನ್‌ಫಿನಿಕ್ಸ್‌ ನೋಟ್ 7, 18W ಫಾಸ್ಟ್‌ ಚಾರ್ಜಿಂಗ್‌ ಬೆಂಬಲಿಸಿದರೆ, ನೋಟ್ 7 ಲೈಟ್ 10W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇವುಗಳನ್ನ ಒಮ್ಮೆ ಚಾರ್ಜ್ ಮಾಡಿದರೆ ಸ್ಮಾರ್ಟ್‌ಫೋನ್‌ ಬ್ಯಾಟರಿ 4 ದಿನಗಳವರೆಗೆ ಇರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ಗಳನ್ನು ಹೊಂದಿವೆ. ಸದ್ಯ ಇನ್ಫಿನಿಕ್ಸ್ ನೋಟ್ 7 ಮತ್ತು ನೋಟ್ 7 ಲೈಟ್‌ನ ಸಂಪೂರ್ಣ ವಿವರಣೆಯನ್ನು ಅಧಿಕೃತ ಸೈಟ್‌ನಲ್ಲಿ ಕಂಪೆನಿ ಘೋಷಿಸಿದೆ ಆದರೂ, ಇವುಗಳ ಬೆಲೆ ಮತ್ತು ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿಯನ್ನ ಬಿಟ್ಟುಕೊಟ್ಟಿಲ್ಲ.

Best Mobiles in India

English summary
Infinix has unveiled the Infinix Note 7 and Note 7 Lite smartphones. The Infinix Note 7 comes with a trendy round-shaped camera module that houses four cameras and it features a punch-hole display. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X