ಇನ್ಫಿನಿಕ್ಸ್ ನೋಟ್ 8 ಮತ್ತು ನೋಟ್ 8I ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಇನ್ಫಿನಿಕ್ಸ್‌ ಸಂಸ್ಥೆ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಇನ್ಫಿನಿಕ್ಸ್ ಇದೀಗ ತನ್ನ ಹೊಸ ಇನ್ಫಿನಿಕ್ಸ್‌ ನೋಟ್ 8 ಮತ್ತು ನೋಟ್ 8I ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳನ್ನ ತನ್ನ ವರ್ಚುವಲ್ ಈವೆಂಟ್‌ನಲ್ಲಿ ಜಾಗತಿಕ ಮಾರುಕಟ್ಟೆಗೆ ಪರಿಚಯಿಸಿದೆ. ಇನ್ನು ಈ ಎರಡೂ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G80SoC ಪ್ರೊಸೆಸರ್‌ ಅನ್ನು ಹೊಂದಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಸಂಸ್ಥೆ ತನ್ನ ಹೊಸ ಇನ್ಫಿನಿಕ್ಸ್ ನೋಟ್ 8 ಮತ್ತು ನೋಟ್ 8I ಅನ್ನು ಪರಿಚಯಿಸಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಡಿಟಿಎಸ್ ಆಡಿಯೋ ಸಂಸ್ಕರಣೆಯೊಂದಿಗೆ ಬರುತ್ತವೆ. ಇನ್ಫಿನಿಕ್ಸ್ ನೋಟ್ 8 ಸ್ಟಿರಿಯೊ ಆಡಿಯೊವನ್ನು ನೀಡಲು ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ. ಇನ್ನು ಇನ್ಫಿನಿಕ್ಸ್‌ ನೋಟ್‌ 8 ಸ್ಮಾರ್ಟ್‌ಫೋನ್‌ 6.95 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದರೆ, ನೋಟ್‌ 8I 6.78 ಇಂಚಿನ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ನೋಟ್ 8 ಡಿಸ್‌ಪ್ಲೇ

ಇನ್ಫಿನಿಕ್ಸ್ ನೋಟ್ 8 ಡಿಸ್‌ಪ್ಲೇ

ಇನ್ಫಿನಿಕ್ಸ್‌ ನೋಟ್‌ 8 ಸ್ಮಾರ್ಟ್‌ಫೋನ್‌ 720x1640 ಫಿಕ್ಸೆಲ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 6.95-ಇಂಚಿನ ಹೆಚ್‌ಡಿ + IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 20.5:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಎಕ್ಸ್‌ಒಎಸ್ 7.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಆಟೋಫೋಕಸ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಎಐ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟಪ್ ಹೊಂದಿದ್ದು ಇದು 16 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್‌ ಮತ್ತು ಸೆಕೆಂಡರಿ ಪೋರ್ಟ್ರೇಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ನೋಟ್ 8 ಸ್ಮಾರ್ಟ್‌ಫೋನ್‌ 5,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಇನ್ಫಿನಿಕ್ಸ್ ನೋಟ್ 8i

ಇನ್ಫಿನಿಕ್ಸ್ ನೋಟ್ 8i

ಇನ್ಫಿನಿಕ್ಸ್ ನೋಟ್ 8i ಸ್ಮಾರ್ಟ್‌ಫೋನ್‌ 6.78-ಇಂಚಿನ ಹೆಚ್‌ಡಿ +IPS ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G80SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಎಕ್ಸ್‌ಒಎಸ್ 7.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 6GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಎಐ ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 5,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು ಕಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್ ನೋಟ್ 8 ಸ್ಮಾರ್ಟ್‌ಫೋನ್‌ ಬೆಲೆ ಇನ್ನೂ ಬಹಿರಂಗಗೊಂಡಿಲ್ಲ, ಆದರೂ ಇದು ಸುಮಾರು $ 200 (ಅಂದಾಜು ರೂ. 14,700)ಲಭ್ಯವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಫೋನ್ ಡೀಪ್ಸಿಯಾ ಲಸ್ಟರ್, ಐಸ್ಲ್ಯಾಂಡ್ ಫ್ಯಾಂಟಸಿ, ಸಿಲ್ವರ್ ಡೈಮಂಡ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಅಲ್ಲದೆ ಇನ್ಫಿನಿಕ್ಸ್ ನೋಟ್ 8i ಸ್ಮಾರ್ಟ್‌ಫೋನ್‌ ಬೆಲೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಫೋನ್ ಐಸ್ ಡೈಮಂಡ್, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಟ್ರ್ಯಾಂಕ್ವಿಲ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Infinix Note 8 and Note 8i both come in three distinct colour options to choose from.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X