ಇಂದು 'ಇನ್‌ಫಿನಿಕ್ಸ್‌ S5 ಲೈಟ್‌' ಫೋನಿನ ಮೊದಲ ಸೇಲ್‌!

|

ಅಗ್ಗದ ಸ್ಮಾರ್ಟ್‌ಫೋನ್‌ಗಳಿಂದ ಗ್ರಾಹಕರಿಗೆ ಚಿರಪರಿಚಿತವಾಗಿರುವ 'ಇನ್‌ಫಿನಿಕ್ಸ್‌' ಸಂಸ್ಥೆಯು ಇತ್ತೀಚಿಗೆ 'ಇನ್‌ಫಿನಿಕ್ಸ್‌ ಎಸ್‌5 ಲೈಟ್‌' ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಇಂದು ಆ ಸ್ಮಾರ್ಟ್‌ಫೋನಿನ ಮೊದಲ ಸೇಲ್ ನಡೆಯಲಿದೆ. ಪಂಚ್‌ಹೋಲ್ ಡಿಸ್‌ಪ್ಲೇ ಮಾದರಿಯನ್ನು ಒಳಗೊಂಡಿರುವ ಜತೆಗೆ 4,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಬೆಲೆಯು 7,999ರೂ.ಗಳಾಗಿದೆ.

ಇನ್‌ಫಿನಿಕ್ಸ್‌ ಎಸ್‌5 ಲೈಟ್‌

ಹೌದು, ಇನ್‌ಫಿನಿಕ್ಸ್‌ ಕಂಪನಿಯ ಹೊಸ 'ಇನ್‌ಫಿನಿಕ್ಸ್‌ ಎಸ್‌5 ಲೈಟ್‌'(Infinix S5 Lite) ಸ್ಮಾರ್ಟ್‌ಫೋನ್‌ ಇಂದು (ನವೆಂಬರ್ 22) ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಫಸ್ಟ್‌ ಸೇಲ್ ಆರಂಭಿಸಲಿದೆ. ಎಚ್‌ಡಿಎಫ್‌ಸಿ ಕಾರ್ಡ್‌ ಬಳಕೆದಾರರಿಗೆ ಶೇ.10% ಇನ್‌ಸ್ಟಂಟ್ ಡಿಸ್ಕೌಂಟ್‌ ಸಿಗಲಿದೆ. ಹಾಗೆಯೇ ಆಕ್ಸಿಸ್‌ ಬ್ಯಾಂಕ್‌ ಕಾರ್ಡ್‌ ಮೂಲಕ ಖರೀದಿಸಿದರೇ ಶೇ.5% ರಿಯಾಯಿತಿ ಸಿಗಲಿದೆ. ಹಾಗೂ ಇಎಮ್‌ಐ ಸೌಲಭ್ಯ ಸಹ ದೊರೆಯಲಿದೆ. ಹಾಗಾದರೆ 'ಇನ್‌ಫಿನಿಕ್ಸ್‌ ಎಸ್‌5 ಲೈಟ್‌' ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಇನ್‌ಫಿನಿಕ್ಸ್‌ ಎಸ್‌5 ಲೈಟ್‌ ಸ್ಮಾರ್ಟ್‌ಫೋನ್‌ 1600 x 720 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಇನ್‌ಫಿನಿಟಿ O ಮಾದರಿಯ ಡಿಸ್‌ಪ್ಲೇ ಇದಾಗಿದ್ದು, ಡಿಸ್‌ಪ್ಲೇಯು 20:9 ಅನುಪಾತದಲ್ಲಿದೆ. ಹಾಗೆಯೇ ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು 90.5% ಪರ್ಸೆಂಟ್‌ ಅಂತರವನ್ನು ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇನ್‌ಫಿನಿಕ್ಸ್‌ ಎಸ್‌5 ಲೈಟ್‌ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೊ ಪಿ22 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದರೊಂದಿಗೆ ಆಂಡ್ರಾಯ್ಡ್‌ 9 ಪೈ ಓಎಸ್‌ ಬೆಂಬಲ ಪಡೆದಿದೆ. 4GB RAM ಮತ್ತು 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಹೊಂದಿದ್ದು, ಇದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 256GB ವರೆಗೂ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್‌ಫಿನಿಕ್ಸ್‌ ಎಸ್‌5 ಲೈಟ್‌ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾವು QVGA ಮಾದರಿಯಲ್ಲಿದೆ. ಹಾಗೆಯೇ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್‌ ಪಡೆದಿದ್ದು, 4-ಇನ್‌-1 ಸೂಪರ್‌ ಪಿಕ್ಸಲ್‌ ತಂತ್ರಜ್ಞಾನದೊಂದಿಗೆ 3D ಫೇಸ್‌ ಬ್ಯೂಟಿ, AR ಇಮೋಜಿ ಆಯ್ಕೆಗಳಿವೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಇನ್‌ಫಿನಿಕ್ಸ್‌ ಎಸ್‌5 ಲೈಟ್‌ ಸ್ಮಾರ್ಟ್‌ಫೋನ್‌ 4,000mAh ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿದೆ. ಇದರೊಂದಿಗೆ ಎಕ್ಸ್‌ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ತಂತ್ರಜ್ಞಾನವನ್ನು ಸಹ ಪಡೆದಿದೆ. ಹಾಗೆಯೇ ಈ ಫೋನ್‌ ಮೈಕ್ರೋ ಯುಎಸ್‌ಬಿ ಪೋರ್ಟ್‌, ವೈಫೈ, ಬ್ಲೂಟೂತ್, 3.5ಎಂಎಂ ಆಡಿಯೊ ಜಾಕ್‌ ಸೇರಿದಂತೆ ಅಗತ್ಯ ಸೌಲಭ್ಯಗಳು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್‌ಫಿನಿಕ್ಸ್‌ ಎಸ್‌5 ಲೈಟ್‌ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಸ್ಟೋರೇಜ್‌ ಒಂದೇ ವೇರಿಯಂಟ್ ಆಯ್ಕೆ ಹೊಂದಿದ್ದು, ಬೆಲೆಯು 7,999ರೂ.ಗಳ ಆಗಿದೆ. ಈ ಸ್ಮಾರ್ಟ್‌ಫೋನ್‌ ಇಂದು ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್‌ ಆರಂಭಿಸಲಿದೆ.

Best Mobiles in India

English summary
Infinix S5 Lite is an entry-level smartphone offering a punch-hole display, triple rear camera setup and a 4,000mAh battery. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X