'ಇನ್‌ಫಿನಿಕ್ಸ್ S5 ಲೈಟ್' ಸ್ಮಾರ್ಟ್‌ಫೋನ್ ಬಿಡುಗಡೆ!..ಬೆಲೆ ಜಸ್ಟ್ 7,999ರೂ!
ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಕಂಪನಿಗಳಲ್ಲಿ 'ಇನ್‌ಫಿನಿಕ್ಸ್' ಕೂಡಾ ಒಂದಾಗಿದೆ. ಈ ಕಂಪನಿಯ ಬಹುನಿರೀಕ್ಷಿತ 'ಇನ್‌ಫಿನಿಕ್ಸ್ ಎಸ್5 ಲೈಟ್' ಸ್ಮಾರ್ಟ್‌ಫೋನ್ ಇದೀಗ ಬಿಡುಗಡೆ ಆಗಿದ್ದು, ಪಂಚ್ ಹೋಲ್‌ಕ್ಯಾಮೆರಾ ಮತ್ತು ತ್ರಿವಳಿ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ. ನಿರೀಕ್ಷೆಯಂತೆಯೇ ಈ ಸ್ಮಾರ್ಟ್‌ಫೋನ್ ಅಗ್ಗದ ಪ್ರೈಸ್‌ಟ್ಯಾಗ್ ಪಡೆದುಕೊಂಡಿದೆ.

ಹೌದು, ಇನ್‌ಫಿನಿಕ್ಸ್ ಕಂಪನಿಯು ಇಂದು (ನವೆಂಬರ್ 15) ಹೊಸದಾಗಿ 'ಇನ್‌ಫಿನಿಕ್ಸ್ ಎಸ್5 ಲೈಟ್'(Infinix S5 Lite) ಸ್ಮಾರ್ಟ್‌ಫೋನ್ ಲಾಂಚ್ ಮಾಡದೆ. 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿರುವ ಈ ಸ್ಮಾರ್ಟ್‌ಫೋನ್ ಪ್ರೊಸೆಸರ್ ಮತ್ತು ಕ್ಯಾಮೆರಾ ಫೀಚರ್ಸ್‌ಗಳಿಂದಲೂ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬೆಲೆಯು 7,999ರೂ.ಗಳಾಗಿದ್ದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಖರೀದಿಗೆ ಲಭ್ಯವಿದೆ.

ಪಂಚ್ ಹೋಲ್ ಡಿಸ್‌ಪ್ಲೇ ಡಿಸೈನ್ ಪಡೆದಿರುವ ಈ ಫೋನ್ ಸೂಪರ್ ಸಿನಿಮಾ ಡಿಸ್‌ಪ್ಲೇ ಮಾದರಿಯಲ್ಲಿದೆ. ಹಾಗೆಯೇ 4,000mAh ಬ್ಯಾಟರಿ ಲೈಫ್ ಪಡೆದಿದ್ದು, ಮೀಡಿಯಾ ಟೆಕ್ ಹಿಲಿಯೊ ಪಿ22 ಪ್ರೊಸೆಸರ್ ಜೊತೆಗೆ ಆಂಡ್ರಾಯ್ಡ್ 9 ಪೈ ಓಎಸ್ ಒಳಗೊಂಡಿದೆ. ಇನ್ನುಳಿದಂತೆ 'ಇನ್‌ಫಿನಿಕ್ಸ್ ಎಸ್5 ಲೈಟ್' ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಇನ್‌ಫಿನಿಕ್ಸ್ ಎಸ್5 ಲೈಟ್ ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಇನ್‌ಫಿನಿಟಿ O ಮಾದರಿಯ ಡಿಸ್‌ಪ್ಲೇ ಇದಾಗಿದ್ದು, ಡಿಸ್‌ಪ್ಲೇಯು 20:9 ಅನುಪಾತದಲ್ಲಿದೆ. ಹಾಗೆಯೇ ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು 90.5% ಪರ್ಸೆಂಟ್ ಅಂತರವನ್ನು ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ
ಇನ್‌ಫಿನಿಕ್ಸ್ ಎಸ್5 ಲೈಟ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ ಪಿ22 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದರೊಂದಿಗೆ ಆಂಡ್ರಾಯ್ಡ್ 9 ಪೈ ಓಎಸ್ ಬೆಂಬಲ ಪಡೆದಿದೆ. 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದ್ದು, ಇದರೊಂದಿಗೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 256GB ವರೆಗೂ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್‌ಫಿನಿಕ್ಸ್ ಎಸ್5 ಲೈಟ್ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾವು QVGA ಮಾದರಿಯಲ್ಲಿದೆ. ಹಾಗೆಯೇ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಪಡೆದಿದ್ದು, 4-ಇನ್-1 ಸೂಪರ್ ಪಿಕ್ಸಲ್ ತಂತ್ರಜ್ಞಾನದೊಂದಿಗೆ 3D ಫೇಸ್ ಬ್ಯೂಟಿ, AR ಇಮೋಜಿ ಆಯ್ಕೆಗಳಿವೆ.

ಬ್ಯಾಟರಿ ಲೈಫ್
ಇನ್‌ಫಿನಿಕ್ಸ್ ಎಸ್5 ಲೈಟ್ ಸ್ಮಾರ್ಟ್‌ಫೋನ್ 4,000mAh ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿದೆ. ಇದರೊಂದಿಗೆ ಎಕ್ಸ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಸಹ ಪಡೆದಿದೆ. ಹಾಗೆಯೇ ಈ ಫೋನ್ ಮೈಕ್ರೋ ಯುಎಸ್‌ಬಿ ಪೋರ್ಟ್, ವೈಫೈ, ಬ್ಲೂಟೂತ್, 3.5ಎಂಎಂ ಆಡಿಯೊ ಜಾಕ್, ಎಐ 3D ಫೇಸ್‌ಬ್ಯುಟಿ ಫೀಚರ್ ಸೇರಿದಂತೆ ಅಗತ್ಯ ಸೌಲಭ್ಯಗಳು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಇನ್‌ಫಿನಿಕ್ಸ್ ಎಸ್5 ಲೈಟ್ ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಗೆ ಬಿಡುಗಡೆ ಆಗಿದ್ದು, 4GB RAM ಮತ್ತು 64GB ಸ್ಟೋರೇಜ್ ಒಂದೇ ವೇರಿಯಂಟ್ ಆಯ್ಕೆ ಹೊಂದಿದೆ. ಈ ಫೋನ್ ಬೆಲೆಯು 7,999ರೂ.ಗಳ ಆಗಿದ್ದು, ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಎರಡು ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದ.


Click it and Unblock the Notifications








