ಅಗ್ಗದ ಬೆಲೆಗೆ 'ಇನ್‌ಫಿನಿಕ್ಸ್ 5s ಪ್ರೊ' ಲಾಂಚ್!.ಪಾಪ್-ಅಪ್ ಸೆಲ್ಫಿ ಇದೆ!
ಹಾಂಗ್ ಕಾಂಗ್ ಮೂಲದ ಇನ್‌ಫಿನಿಕ್ಸ್ ಸಂಸ್ಥೆಯು ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಲಾಂಚ್ ಮಾಡಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಸಂಸ್ಥೆಯು ಇಂದು (ಮಾ.6) ಇನ್‌ಫಿನಿಕ್ಸ್ S5 ಪ್ರೊ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯನ್ನು ಹೊಂದಿದ್ದು, ಆದರೂ ಆಕರ್ಷಕ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ.

ಹೌದು, ಇನ್‌ಫಿನಿಕ್ಸ್ ಸಂಸ್ಥೆಯು ಇಂದು ಭಾರತದಲ್ಲಿ ಇನ್‌ಫಿನಿಕ್ಸ್ 5s ಪ್ರೊ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್, ಪಾಪ್ ಅಪ್ ಸೆಲ್ಫಿ ಕ್ಯಾಮೆರಾ, ಹಿಂಬದಿ 48ಎಂಪಿ ಕ್ಯಾಮೆರಾ, ಆಂಡ್ರಾಯ್ಡ್ 10 ಓಎಸ್ ಮತ್ತು 4,000 mAh ಬ್ಯಾಟರಿಗಳಂತಹ ಇತ್ತೀಚಿನ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ. ಇನ್ನು ಈ ಫೋನ್ ಇದೇ ಮಾರ್ಚ್ 13ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಆರಂಭಿಸಲಿದೆ. ಆರಂಭಿಕ ಬೆಲೆಯು 9,999ರೂ.ಗಳು. ಇನ್‌ಫಿನಿಕ್ಸ್ 5S ಪ್ರೊ ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
ಇನ್‌ಫಿನಿಕ್ಸ್ 5s ಪ್ರೊ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಅನುಪಾತವು 19.5:9 ರಷ್ಟಾಗಿದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 395ppi ಆಗಿದೆ.

ಪ್ರೊಸೆಸರ್ ಕಾರ್ಯ
ಇನ್‌ಫಿನಿಕ್ಸ್ 5s ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಇನ್ನು ಈ ಫೋನ್ 4GB RAM + 64GB ಆಂತರಿಕ ಸ್ಟೋರೋಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 256GB ವರೆಗೂ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಕ್ಯಾಮೆರಾ ವಿಶೇಷ
ಇನ್‌ಫಿನಿಕ್ಸ್ 5s ಪ್ರೊ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್ ನಲ್ಲಿದೆ. ಹಾಗೂ ತೃತೀಯ ಕ್ಯಾಮೆರಾವು 2ಎಂಪಿಯ ಡೆಪ್ತ್ ಸೆನ್ಸಾರ್ ಪಡೆದಿದೆ. ಜೊತೆಗೆ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್ ಸೌಲಭ್ಯಗಳು ಇವೆ.

ಬ್ಯಾಟರಿ ಲೈಫ್
ಇನ್‌ಫಿನಿಕ್ಸ್ 5s ಪ್ರೊ ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಇದರೊಂದಿಗೆ 10W ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಹಾಗೂ ವೈಫೈ, ಬ್ಲೂಟೂತ್, ಜಿಪಿಎಸ್, ನಂತಹ ಫೀಚರ್ಸ್‌ಗಳನ್ನು ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ
ಇನ್‌ಫಿನಿಕ್ಸ್ 5s ಪ್ರೊ ಸ್ಮಾರ್ಟ್‌ಫೋನ್ 4GB RAM + 64GB ವೇರಿಯಂಟ್ ಆಯ್ಕೆಯನ್ನು ಹೊಂದಿದ್ದು, ಬೆಲೆಯು 9,999ರೂ. ಆಗಿದೆ. ಇನ್ನು ಈ ಫೋನ್ ಇದೇ ಮಾರ್ಚ್ 13ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಆರಂಭಿಸಲಿದೆ. ವೈಲೇಟ್ ಮತ್ತು ಫಾರೆಸ್ಟ್ ಗ್ರೀನ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ.


Click it and Unblock the Notifications








