Home
ಸುದ್ದಿಜಾಲ

ಬಿಡುಗಡೆಗೆ ಸಿದ್ಧವಾದ ಇನ್‌ಫಿನಿಕ್ಸ್‌ S5ಪ್ರೊ ಸ್ಮಾರ್ಟ್‌ಫೋನ್‌!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿರುವ ಇನ್‌ಫಿನಿಕ್ಸ್‌ ಕಂಪೆನಿ ಇದೀಗ ಹೊಸ ಆವೃತ್ತಿಯ ಸ್ಮಾರ್ಟ್‌ಫೊನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗಲಿರುವ ಪಾಪ್‌ ಹಾಪ್‌ ಸೆಲ್ಫಿ ಯನ್ನು ಹೊಂದಿರುವ ಸ್ಮಾರ್ಟ್‌ಫೋನ್‌ ಇದಾಗಿರಲಿದ್ದು, ಇದೇ ಮಾರ್ಚ್‌ 6ರಂದು ಮಾರುಕಟ್ಟೆಗೆ ಬಿಡುಗಡೆ ಆಗಲಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಹೌದು

ಹೌದು, ಇನ್‌ಫಿನಿಕ್ಸ್‌ ಕಂಪೆನಿ ತನ್ನ ಹೊಸ ಆವೃತ್ತಿಯ ಇನ್‌ಫಿನಿಕ್ಸ್‌ S5 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಇದೇ ಮಾರ್ಚ್‌ 6ಕ್ಕೆ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ S5 ಆವೃತ್ತಿಯ ಮುಂದುವರೆದ ಸರಣಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪಾಫ್‌ ಹಾಪ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.53 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಕ್ಯಾಪಸಿಟಿವಿ ಟಚ್‌ಸ್ಕ್ರೀನ್‌ ಹಾಗೂ ಮಲ್ಟಿ ಟಚ್‌ಸ್ಕ್ರೀನ್‌ ಅನ್ನು ಒಳಗೊಂಡಿದೆ. ಅಲ್ಲದೆ ಇದು 395 ppi ಪಿಕ್ಸೆಲ್‌ ರೆಸಲ್ಯೂಶನ್‌ ಸಾಂದ್ರತೆ ಯನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಿನ್ಯಾಸ ಉತ್ತಮವಾಗಿದ್ದು ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್‌ಫಿನಿಕ್ಸ್‌ S5 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಇಂಟರ್‌ ಸ್ಟೋರೆಜ್‌ ಅನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌

ಕ್ಯಾಮೆರಾ ಸೆಟ್‌ಅಪ್‌

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಪಾಪ್‌ ಹಾಪ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲಾಶ್‌, ಫೇಸ್‌ ಡಿಟೇಕ್ಷನ್‌, ಟಚ್‌ ದಿ ಫೋಕಸ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್‌ ಹೊಂದಿದ್ದು, ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌ v5.0, ಯುಎಸ್‌ಬಿ ಚಾರ್ಜಿಂಗ್‌, GPS, 4G VOLTE, 3.5mm ಆಡಿಯೋ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸೆಲೆರೋಮೀಟರ್‌, ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಪಾಪ್‌ ಹಾಪ್‌ ಸೆಲ್ಫಿ ಕ್ಯಾಮೆರಾ ಸ್ಮಾರ್ಟ್‌ಫೊನ್‌ ಆಗಿದ್ದು, ಇದು 10,000 ರೂ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗ್ರೀನ್‌ ಕಲರ್‌ ಆಯ್ಕೆಯಲ್ಲಿ ಸಿಗಲಿದ್ದು, ಇದೇ ಮಾರ್ಚ್‌ 6ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Infinix S5 Pro will debut as the cheapest smartphone with pop-up selfie camera in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+