Home
ಸುದ್ದಿಜಾಲ

Infinix S5 Pro: ಇನ್ಫಿನಿಕ್ಸ್ ನಿಂದ ಬರಲಿದೆ ಪಾಪ್ಆಪ್‌ ಸೆಲ್ಫಿ ಕ್ಯಾಮೆರಾ ಫೋನ್‌!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನ ಬಜೆಟ್‌ ಬೆಲೆ ಸ್ಮಾರ್ಟ್‌ಫೊನ್‌ಗಳ ಮೂಲಕ ಸೈ ಎನಿಸಿಕೊಂಡಿರುವ ಇನ್‌ಫಿನಿಕ್ಸ್‌ ಸ್ಮಾರ್ಟ್‌ಫೋನ್‌ ಕಂಪೆನಿ ಇದೀಗ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ ಆಗಿರಲಿದೆ ಎನ್ನಲಾಗ್ತಿದೆ. ಅಲ್ಲದೆ ಫೆಬ್ರವರಿ 18 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಹೌದು

ಹೌದು, ಇನ್ಫಿನಿಕ್ಸ್ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್‌ ಎಸ್ 5 ಪ್ರೊ, ಇದೇ ಫೆಬ್ರವರಿ 18 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗ್ತಿದ್ದು, ಈ ಸ್ಮಾರ್ಟ್‌ಫೋನ್‌ ಪಾಪ್-ಅಪ್‌-ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಅನ್ನೊದು ಬಜೆಟ್‌ ಬೆಲೆಯಲ್ಲಿ ಖರೀದಿಸುವ ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಬಾರಿ ನಿರೀಕ್ಷೆಯನ್ನ ಹುಟ್ಟುಹಾಕಿದೆ. ಈಗಾಗ್ಲೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 720 x 1600 ರೆಸಲ್ಯೂಶನ್‌ ಹೊಂದಿರುವ 6.6 ಇಂಚಿನ ಬೆಜಲ್‌ ಲೆಸ್‌ ಡಿಸ್‌ಪ್ಲೇ ಯನ್ನ ಹೊಂದಿದ್ದು,ಇದು ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌ ಹೊಂದಿದೆ. ಪಂಚ್‌ ಹೋಲ್‌ ಡಿಸ್‌ಪ್ಲೇ ಕ್ಯಾಮೆರಾ ಮಾದರಿಯನ್ನ ಹೊಂದಿದೆ. ಟಚ್‌ ಸ್ಕ್ರೀನ್‌ ಕ್ಯಾಪಸಿಟಿಯ ಜೊತೆಗೆ ಮಲ್ಟಿ ಟಚ್‌ ಅನ್ನ ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 266 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ಫಿನಿಕ್ಸ್ ಎಸ್ 5 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್, 2 GHz,ಮೀಡಿಯಾ ಟೆಕ್ ಹೆಲಿಯೊ ಪಿ 22 ಚಿಪ್‌ಸೆಟ್‌ ಹೊಂದಿರುವ ಕಾರ್ಟೆಕ್ಸ್ A53 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ವಿ 9.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಶೇಖರಣಾ ಸಾಮರ್ಥ್ಯವನ್ನ ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ 256GB ವರೆಗೂ ಸ್ಟೋರೇಜ್‌ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದ್ದು ಮೊದಲನೇ ಕ್ಯಾಮೆರಾ 16ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಕ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಇದು ಪಾಪ್‌ ಆಪ್‌ ಸೆಲ್ಫಿ ಕ್ಯಾಮೆರಾ ಮಾದರಿಯನ್ನ ಒಳಗೊಂಡಿದ್ದು 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಜೊತೆಗೆ ಡಿಜಿಟಲ್‌ ಜೂಮ್‌,ಆಟೋ ಫ್ಲಾಷ್‌, ಫೇಸ್‌ ಡಿಟೆಕ್ಷನ್‌,ಟಚ್‌ ದಿ ಫೋಕಸ್‌ಫೀಚರ್ಸ್‌ಗಳನ್ನ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,000mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿರಲಿದೆ ಎಂದು ಹೇಳಲಾಗ್ತಿದ್ದು, ವೇಗದ ಚಾರ್ಜಿಂಗ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್‌, ಹಾಟ್‌ಸ್ಪಾಟ್‌,ಯುಎಸ್‌ಬಿ ಚಾರ್ಜಿಂಗ್‌, ಹಾಗೂ 4G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಬೆಲೆ ನಿಖರವಾಗಿ ತಿಳಿದಿಲ್ಲವಾದರೂ 10,000 ರೂ,ಒಳಗೆ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Infinix S5 Pro will debut as the cheapest smartphone with a pop-up selfie camera.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+