Home
ಸುದ್ದಿಜಾಲ

ಇಂದು ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌! ಆಫರ್‌ ಏನು?

ಇನ್ಫಿನಿಕ್ಸ್‌ ಮೊಬೈಲ್ ಕಂಪನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಫೆ.18) ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಫಸ್ಟ್‌ ಸೇಲ್ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಬೆಲೆಯು 7,199 ರೂ.ಗಳು ಆಗಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ನಡೆಯಲಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ, ಅಲ್ಟ್ರಾ-ಪವರ್ ಮ್ಯಾರಥಾನ್ ತಂತ್ರಜ್ಞಾನ ಬೆಂಬಲಿತ 6,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ 6.82-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90.66% ಸ್ಕ್ರೀನ್-ಟು-ಬಾಡಿ ಅನುಪಾತ ಹೊಂದಿದ್ದು, 20: 5: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 440 ನಿಟ್ಸ್‌ ಗರಿಷ್ಠ ಬ್ರೈಟ್‌ನೆಶ್‌ ಮತ್ತು 1500: 1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು 2.0GHz ವರೆಗಿನ ಗಡಿಯಾರದ ವೇಗವನ್ನು ನೀಡುತ್ತದೆ. ಇದು ಆಂಡ್ರಾಯ್ಡ್ 10 ನಲ್ಲಿ ಕಂಪನಿಯ XOS 7 UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM + 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಸ್ಲಾಟ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಎರಡೂ ಕ್ಯಾಮೆರಾಗಳು 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಕ್ಯಾಮೆರಾದಲ್ಲಿ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 50 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ತಲುಪಿಸುತ್ತದೆ ಎಂದು ಹೇಳಲಾಗಿದೆ. 4G ಟಾಕ್‌ಟೈಮ್‌ನ 53 ಗಂಟೆಗಳವರೆಗೆ ಫೋನ್ ಇರುತ್ತದೆ ಎಂದು ಇನ್ಫಿನಿಕ್ಸ್ ಹೇಳುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE , ವೈ-ಫೈ ಮತ್ತು ಬ್ಲೂಟೂತ್ ವಿ 5.0 ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್ ಸ್ಮಾರ್ಟ್ 5 ಭಾರತದಲ್ಲಿ 2 GB RAM + 32GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 7,199.ರೂ,ಬೆಲೆಯನ್ನು ಹೊಂದಿದ್ದು, ಭಾರತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್ಕಾರ್ಟ್‌ನಲ್ಲಿ ಮಾರಾಟವಾಗಲಿದೆ. ಇದು ಏಜಿಯನ್ ಬ್ಲೂ, ಮೊರಾಂಡಿ ಗ್ರೀನ್, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು 7° ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಬಿಡುಗಡೆ ಆಫರ್‌ಗಳಲ್ಲಿ ರಿಲಯನ್ಸ್ ಜಿಯೋದಿಂದ 4,000 ರೂ. ಮೌಲ್ಯದ ಲಾಭಗಳು, 2,000 ರೂ ಮೌಲ್ಯದ ಬ್ರಾಂಡ್ ಕೂಪನ್‌ಗಳು ಮತ್ತು 2,000 ರೂ ಮೌಲ್ಯದ 40 ಜಿಯೋ ಕ್ಯಾಶ್‌ಬ್ಯಾಕ್ ವೋಚರ್‌ಗಳು ಲಭ್ಯವಾಗಲಿವೆ.

Best Mobiles in India

English summary
Infinix Smart 5 first sale today via flipkart: price, specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+