ಇನ್ಫಿನಿಕ್ಸ್ ಸ್ಮಾರ್ಟ್ 5 ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಇನ್ಫಿನಿಕ್ಸ್ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸುಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಇನ್ಪಿನಿಕ್ಸ್ ಸ್ಮಾರ್ಟ್ 5 ಅನ್ನು ಭಾರತದಲ್ಲಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 11 ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆಯಾಗಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 2020 ರ ನವೆಂಬರ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾದ ಇನ್ಫಿನಿಕ್ಸ್ ಸ್ಮಾರ್ಟ್ 4 ರ ಉತ್ತರಾಧಿಕಾರಿಯಾಗಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ತನ್ನ ಹೊಸ ಇನ್ಫಿನಿಕ್ಸ ಸ್ಮಾರ್ಟ್ 5 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ದಿನಾಂಕ ಗೊತ್ತು ಪಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.60 ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದ್ದು, ಜೊತೆಗೆ ಇದು ಮೀಡಿಯಾ ಟೆಕ್ ಹಿಲಿಯೋ A20 ಪ್ರೊಸೆಸರ್ ಅನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಇನ್ಫಿನಿಕ್ಸ್ ಸ್ಮಾರ್ಟ್ 5 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.60 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 86.63% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 266PPI ಪಿಕ್ಸೆಲ್ ಸಾಂಧ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಮಿಡಿಯಾ ಟೆಕ್ ಹಿಲಿಯೋA20 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4G, ಜಿಪಿಎಸ್, ಬ್ಲೂಟೂತ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸದ್ಯ ಈ ಸ್ಮಾರ್ಟ್‌ಫೋನ್ ಫೆಬ್ರವರಿ 11 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ಪತ್ರಿಕಾ ಪ್ರಕಟಣೆ ಮೂಲಕ ಪ್ರಕಟಿಸಿದೆ. ಮೀಸಲಾದ ಫ್ಲಿಪ್‌ಕಾರ್ಟ್ ಪುಟವನ್ನು ಸಹ ಲೈವ್ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಬೆಲೆ ಏನು ಅನ್ನೊದು ಇನ್ನು ಕೂಡ ನಿಗದಿ ಆಗಿಲ್ಲ.


Click it and Unblock the Notifications








