ಅಗ್ಗದ ಬೆಲೆಯ ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ ಲಾಂಚ್‌!

|

ಹಾಂಗ್-ಕಾಂಗ್ ಮೂಲದ ಇನ್ಫಿನಿಕ್ಸ್ ಕಂಪೆನಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ದಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಇನ್ಫಿನಿಕ್ಸ್‌, ಇದೀಗ ತನ್ನ ಇನ್ಫಿನಿಕ್ಸ್ ಸ್ಮಾರ್ಟ್ 5 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದ್ದು, ಡ್ಯುಯೆಲ್‌ ರಿಯರ್‌ ಎಐ ಕ್ಯಾಮೆರಾಗಳನ್ನು ಹೊಂದಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು 6.82 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 50 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಇನ್ಫಿನಿಕ್ಸ್ ಸ್ಮಾರ್ಟ್ 5 ಭಾರತದಲ್ಲಿ 2 GB RAM + 32GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 7,199.ರೂ,ಬೆಲೆಯನ್ನು ಹೊಂದಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಫೆಬ್ರವರಿ 18 ರಿಂದ ಖರೀದಿಗೆ ಲಭ್ಯವಿರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ 6.82-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90.66% ಸ್ಕ್ರೀನ್-ಟು-ಬಾಡಿ ಅನುಪಾತ ಹೊಂದಿದ್ದು, 20: 5: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 440 ನಿಟ್ಸ್‌ ಗರಿಷ್ಠ ಬ್ರೈಟ್‌ನೆಶ್‌ ಮತ್ತು 1500: 1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು 2.0GHz ವರೆಗಿನ ಗಡಿಯಾರದ ವೇಗವನ್ನು ನೀಡುತ್ತದೆ. ಇದು ಆಂಡ್ರಾಯ್ಡ್ 10 ನಲ್ಲಿ ಕಂಪನಿಯ XOS 7 UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM + 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಸ್ಲಾಟ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಎರಡೂ ಕ್ಯಾಮೆರಾಗಳು 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಕ್ಯಾಮೆರಾದಲ್ಲಿ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 50 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ತಲುಪಿಸುತ್ತದೆ ಎಂದು ಹೇಳಲಾಗಿದೆ. 4G ಟಾಕ್‌ಟೈಮ್‌ನ 53 ಗಂಟೆಗಳವರೆಗೆ ಫೋನ್ ಇರುತ್ತದೆ ಎಂದು ಇನ್ಫಿನಿಕ್ಸ್ ಹೇಳುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE , ವೈ-ಫೈ ಮತ್ತು ಬ್ಲೂಟೂತ್ ವಿ 5.0 ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್ ಸ್ಮಾರ್ಟ್ 5 ಭಾರತದಲ್ಲಿ 2 GB RAM + 32GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 7,199.ರೂ,ಬೆಲೆಯನ್ನು ಹೊಂದಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಫೆಬ್ರವರಿ 18 ರಿಂದ ಖರೀದಿಗೆ ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಏಜಿಯನ್ ಬ್ಲೂ, ಮೊರಾಂಡಿ ಗ್ರೀನ್, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು 6 ° ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Infinix Smart 5 With 6,000mAh Battery Launched in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X