ಇನ್ಫಿನಿಕ್ಸ್ ಸ್ಮಾರ್ಟ್ 5 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಇನ್ಪಿನಿಕ್ಸ್‌ ಸಂಸ್ಥೆ ತನ್ನ ಮತ್ತೊಂದು ಹೊಸ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಭಾರತದಲ್ಲಿ ಸೈಲೆಮಟ್‌ ಆಗಿ ಈ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಇದು ಬಜೆಟ್‌ ಶ್ರೇಣಿಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಇನ್ಫಿನಿಕ್ಸ್ ಸ್ಮಾರ್ಟ್ 5 ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 3GB RAM+64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ತನ್ನ ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಅಲ್ಲದೆ ಇನ್ಫಿನಿಕ್ಸ್ ಇಂಡಿಯಾ ವೆಬ್‌ಸೈಟ್‌ನ ಪ್ರಕಾರ, ಸ್ಮಾರ್ಟ್ 5 ಭಾರತದ ಮಾರುಕಟ್ಟೆಯಲ್ಲಿ 3GB RAM + 64GB ರೂಪಾಂತರದಲ್ಲಿ ಮಾತ್ರ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೊನ್‌ 10,000.ರೂ ಗಳಿಗೆ ಲಭ್ಯವಾಲಿದೆ ಎಂದು ಹೇಳಲಾಗ್ತಿದೆ. ಆದರೆ ಇನ್ಫಿನಿಕ್ಸ್‌ ಕಂಪೆನಿ ಈ ಸ್ಮಾರ್ಟ್‌ಫೋನ್‌ ಬೆಲೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಲಭ್ಯಪಡಿಸಿಲ್ಲ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ಫಿನಿಕ್ಸ್ ಸ್ಮಾರ್ಟ್ 5 ಸ್ಮಾರ್ಟ್‌ಫೋನ್‌ ಎಚ್‌ಡಿ + ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.6-ಇಂಚಿನ IPS ಎಲ್ಸಿಡಿ ಪ್ಯಾನಲ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮೇಲ್ಭಾಗದಲ್ಲಿ ವಿ-ಆಕಾರದ ನಾಚ್‌ ಅನ್ನು ನೀಡಲಾಗಿದೆ. ಇದಲ್ಲದೆ ವಿಡಿಯೋ ಕರೆ ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ನೀಡಲಾಗಿದೆ ಎನ್ನಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ಫಿನಿಕ್ಸ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಈ ಸ್ಮಾರ್ಟ್‌ಫೋನ್ 1.8GHz ಬೇಸ್ ಫ್ರೀಕ್ವೆನ್ಸಿ ಜೊತೆಗೆ ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ನಿಯಂತ್ರಿಸಲ್ಪಡುತ್ತದೆ.ಅಲ್ಲದೆ ಆಂಡ್ರಾಯ್ಡ್‌ 10ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM+64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕಗಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಕ್ಯಾಮೆರಾದಲ್ಲಿ ಬಳಕೆದಾರರು ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ ಫುಲ್‌ ಎಚ್‌ಡಿ ವೀಡಿಯೊಗಳನ್ನು ರೆಕಾರ್ಡ್ ಮಾಡಲು ಸಾಧ್ಯವಾಗುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್ ಸ್ಮಾರ್ಟ್ 5 ಸ್ಮಾರ್ಟ್‌ಫೋನ್‌ 5000mAh ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಬೆಂಬಲದೊಂದಿಗೆ ಡ್ಯುಯಲ್ ಸಿಮ್, ಡ್ಯುಯಲ್-ಬ್ಯಾಂಡ್ ವೈ-ಫೈ ಎಸಿ, ಬ್ಲೂಟೂತ್, ಜಿಪಿಎಸ್ ಅನ್ನು ಒಳಗೊಂಡಿದೆ. ಇನ್ನು ಇದರ ಬೆಲೆಗೆ ಸಂಬಂದಿಸಿದಂತೆ ಯಾವುದೇ ಮಾಹಿತಿ ಲಬ್ಯವಾಗಿಲ್ಲ.

Best Mobiles in India

English summary
Infinix has silently launched an entry-level smartphone in India - the Infinix Smart 5.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X