Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಸ್ಮಾರ್ಟ್‌ಫೋನ್‌ ಬಿಡುಗಡೆ!

ಹಾಂಗ್ ಕಾಂಗ್ ಮೂಲದ ಇನ್ಫಿನಿಕ್ಸ್ ಕಂಪೆನಿಯು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಇನ್ಫಿನಿಕ್ಸ್‌, ಇದೀಗ ಹೊಸದಾಗಿ ಇನ್ಫಿನಿಕ್ಸ್ ಸ್ಮಾರ್ಟ್ 5A ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೋ A20 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಇ-ಕಾಮರ್ಸ್‌ ತಾಣದ ಮೂಲಕ ನೂತನ ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದೊಂದು ಅಗ್ಗದ ಸ್ಮಾರ್ಟ್‌ಫೋನ್‌ ಆಗಿದ್ದು, 2GB RAM ಮತ್ತು 32GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಹಾಗಾದರೇ ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಸ್ಮಾರ್ಟ್‌ಫೋನ್‌ 6.52 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 1560×720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಫೋನಿನ ಡಿಸ್‌ಪ್ಲೇಯ ಅನುಪಾತವು 20:9 ರಷ್ಟಾಗಿದೆ. ಹಾಗೆಯೇ ಡಿಸ್‌ಪ್ಲೇಯು AGC AS2 ಗ್ಲಾಸ್‌ನಿಂದ ಸಂರಕ್ಷಿತವಾಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ A20 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಗೋ ಓಎಸ್‌ ಸಪೋರ್ಟ್‌ ನೀಡಲಾಗಿದೆ. ಹಾಗೆಯೇ ಈ ಫೋನ್ 2GB RAM ಮತ್ತು 32GB ಇಂಟರ್ನಲ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಅದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ.

ಡ್ಯುಯಲ್ ಕ್ಯಾಮೆರಾ ರಚನೆ

ಡ್ಯುಯಲ್ ಕ್ಯಾಮೆರಾ ರಚನೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದು, ದ್ವಿತೀಯ ಕ್ಯಾಮೆರಾವು ಡೆಪ್ತ್ ಸೆನ್ಸಾರ್ ಸಪೋರ್ಟ್‌ ಪಡೆದಿದೆ. ಹಾಗೆಯೇ 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಜೊತೆಗೆ ಹಿಂಬದಿ ಮತ್ತು ಸೆಲ್ಫಿಗಾಗಿ ಎಲ್‌ಡಿಇ ಫ್ಲ್ಯಾಶ್‌ ಸಹ ಇದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ ಬ್ಯಾಟರಿಯು 35 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ತಲುಪಿಸುತ್ತದೆ ಎಂದು ಹೇಳಲಾಗಿದೆ. 4G ಟಾಕ್‌ಟೈಮ್‌ನ 33 ಗಂಟೆಗಳವರೆಗೆ ಫೋನ್ ಇರುತ್ತದೆ ಎಂದು ಇನ್ಫಿನಿಕ್ಸ್ ಹೇಳುತ್ತದೆ. ಹಾಗೆಯೇ 13 ಗಂಟೆಗಳ ಗೇಮಿಂಗ್ ಸಮಯ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE , ವೈ-ಫೈ ಮತ್ತು ಬ್ಲೂಟೂತ್ ವಿ 5.0 ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 5A ಸ್ಮಾರ್ಟ್‌ಫೋನ್‌ ಭಾರತದಲ್ಲಿ 2 GB RAM + 32GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 7,999ರೂ,ಬೆಲೆಯನ್ನು ಹೊಂದಿದೆ. ಇನ್ನು ಈ ಫೊನ್ ಇದೇ ಅಗಷ್ಟ್ 9ರಂದು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಾಗಲಿದೆ. ಆರಂಭಿಕ ಕೊಡುಗೆಯಾಗಿ ಮೊದಲ ದಿನ ಮಾತ್ರ ಜಸ್ಟ್‌ 6,499ರೂ.ಗಳಿಗೆ ಫ್ಲಿಪ್‌ಕಾರ್ಟ್ ಲಭ್ಯವಾಗಲಿದೆ. ಮಿಡ್ನೈಟ್ ಬ್ಲಾಕ್, ಓಷನ್ ವೇವ್ ಮತ್ತು ಕ್ವೆಟ್ಜಾಲ್ ಸಯಾನ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Infinix Smart 5A Launched In India With A Competitive Introductory Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+