ಅತೀ ಕಡಿಮೆ ಬೆಲೆಗೆ ಲಗ್ಗೆ ಇಟ್ಟ 'ಇನ್ಫಿನಿಕ್ಸ್ ಸ್ಮಾರ್ಟ್ 6 HD' ಫೋನ್!
ಇನ್ಫಿನಿಕ್ಸ್ ಕಂಪೆನಿಯು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಹೆಸರುವಾಸಿಯಾಗಿದೆ. ಇನ್ಫಿನಿಕ್ಸ್ ಸ್ಮಾರ್ಟ್ ಸರಣಿಯಲ್ಲಿ ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 6 HD ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೊ A22 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 2GB RAM ಮತ್ತು 32GB ಆಂತರೀಕ ಸ್ಟೋರೇಜ್ ಸಂಗ್ರಹವನ್ನು ಒಳಗೊಂಡಿದೆ. ಹೆಚ್ಚುವರಿ ಮೆಮೊರಿ ಅಗತ್ಯತೆಗಾಗಿ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೂ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಪಡೆದಿದೆ.

ಇನ್ನು 6.6 ಇಂಚಿನ ಹೆಚ್ ಡಿಸ್‌ಪ್ಲೇ ಹೊಂದಿರುವುದು ಈ ಸ್ಮಾರ್ಟ್‌ಫೋನಿನ ಹೈಲೈಟ್ ಅಂಶವಾಗಿ ಕಾಣಿಸಿಕೊಂಡಿದೆ. ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಮತ್ತೊಂದು ಪ್ಲಸ್ ಪಾಯಿಂಟ್ ಎನಿಸಿದೆ. ಹಾಗಾದರೇ ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 500 ನಿಟ್ಸ್ ಬ್ರೈಟ್‌ನೆಸ್ ಮತ್ತು 60Hz ರಿಫ್ರೇಶ್ ರೇಟ್ ಸಾಮರ್ಥ್ಯವನ್ನು ಇದು ಪಡೆದುಕೊಂಡಿದೆ.

ಪ್ರೊಸೆಸರ್ ಪವರ್ ಯಾವುದು?
ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 (Go ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 2 GB RAM + 32 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ರಚನೆ
ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್ ಚೌಕಾಕಾರದ ರಚನೆಯನ್ನು ಹೊಂದಿದ್ದು, ನೋಡಲು ತ್ರಿಪಲ್ ಕ್ಯಾಮೆರಾ ರಚನೆಯ ತರಹ ಕಾಣಿಸುತ್ತದೆ. ಆದರೆ ಈ ಫೋನ್ LED ಫ್ಲ್ಯಾಷ್‌ನೊಂದಿಗೆ ಸಿಂಗಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದಲ್ಲದೆ ವಾಟರ್‌ಡ್ರಾಪ್ ನಾಚ್ ಮಾದರಿಯ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 5W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್ v5.0 ಅನ್ನು ಬೆಂಬಲಿಸುತ್ತದೆ. ಇದಲ್ಲದೆ DTS HD ಸರೌಂಡ್ ಸೌಂಡ್ ಮತ್ತು ವರ್ಧಿತ ಆಡಿಯೊ ಅನುಭವಕ್ಕಾಗಿ ಬೀಜ್ 2.0 ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್ ಒಂದೇ ಶೇಖರಣಾ ಆಯ್ಕೆಯೊಂದಿಗೆ ಭಾರತಕ್ಕೆ ಬರುತ್ತದೆ. ಈ ಫೋನ್ 2GB RAM ಮತ್ತು 32 GB ಆಂತರಿಕ ಸಂಗ್ರಹಣೆಯನ್ನು ಹೊಂದಿದೆ. ಇದರ ಬೆಲೆ 6,799 ರೂ. ಆಗಿದೆ. ಈ ಫೋನ್ ಮೂರು ಬಣ್ಣಗಳ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ ಆಕ್ವಾ ಸ್ಕೈ, ಫೋರ್ಸ್ ಬ್ಲ್ಯಾಕ್ ಮತ್ತು ಒರಿಜಿನ್ ಬ್ಲೂ ಆಗಿವೆ.

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ ಫೀಚರ್ಸ್:
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 266 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 500 ನಿಟ್ಸ್ ಬ್ರೈಟ್‌ನೆಸ್ ಮತ್ತು 89% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 (Go ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2 GB RAM + 32 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 2 GB ವರ್ಚುವಲ್ RAM ಅನ್ನು ಕೂಡ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ ಡ್ಯುಯಲ್ AI ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇನ್ನು ರಿಯರ್ ಕ್ಯಾಮೆರಾ AI HDR, ಬ್ಯೂಟಿ ಮತ್ತು ಪೋರ್ಟ್ರೇಟ್‌ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಟಾಕ್ ಟೈಮ್ ಜೊತೆಗೆ 31 ಗಂಟೆಗಳ ಬ್ಯಾಟರಿ ಬಾಳಿಕೆ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಬ್ಯಾಟರಿ ಬಾಳಿಕೆಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್ v5.0 ಅನ್ನು ಬೆಂಬಲಿಸುತ್ತದೆ. ಇದಲ್ಲದೆ DTS HD ಸರೌಂಡ್ ಸೌಂಡ್ ಮತ್ತು ವರ್ಧಿತ ಆಡಿಯೊ ಅನುಭವಕ್ಕಾಗಿ ಬೀಜ್ 2.0 ಅನ್ನು ಸಹ ಒಳಗೊಂಡಿದೆ.


Click it and Unblock the Notifications








