Home
ಸುದ್ದಿಜಾಲ

ಭಾರತದಲ್ಲಿ ಅಗ್ಗದ ಬೆಲೆಗೆ ಮತ್ತೆ ಹೊಸ ಫೋನ್‌ ಲಾಂಚ್‌ ಮಾಡಿದ ಇನ್ಫಿನಿಕ್ಸ್‌!

ಹಾಂಗ್-ಕಾಂಗ್ ಮೂಲದ ಇನ್ಫಿನಿಕ್ಸ್ ಮೊಬೈಲ್‌ ಸಂಸ್ಥೆಯು ಬಜೆಟ್‌ ಮತ್ತು ಅಗ್ಗದ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಗಟ್ಟಿ ಸ್ಥಾನ ಪಡೆದಿದೆ. ಇದೀಗ ನೂತನವಾಗಿ ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸಹ ಅಗ್ಗದ ಪ್ರೈಸ್‌ ಟ್ಯಾಗ್‌ ಅನ್ನು ಹೊಂದಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್‌ ಪ್ಲಸ್‌ ಪಾಯಿಂಟ್‌ ಆಗಿದೆ.

ಮೀಡಿಯಾ

ಹೌದು, ಇನ್ಫಿನಿಕ್ಸ್‌ ಕಂಪೆನಿ ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಹಾಗೆಯೇ ಮೀಡಿಯಾ ಟೆಕ್‌ ಹಿಲಿಯೋ G25 SoC ಪ್ರೊಸೆಸರ್‌, AI ಫೇಸ್‌ ಅನ್‌ಲಾಕ್‌, ವರ್ಚುವಲ್ RAM ನಂತಹ ಸೌಲಭ್ಯಗಳನ್ನು ಈ ಫೋನ್‌ ಒಳಗೊಂಡಿದೆ.

ಮಿರಾಕಲ್‌

ಇನ್ನು ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ 3GB RAM ಮತ್ತು 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ. ಈ ಫೋನ್ ಮಿರಾಕಲ್‌ ಬ್ಲ್ಯಾಕ್‌ ಹಾಗೂ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಹಾಗಾದರೇ ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ 6.82 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, 1600 x 720 ಪಿಕ್ಸಲ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇಯು 20.5:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 60Hz ರಿಫ್ರೇಶ್‌ ರೇಟ್‌ ಅನ್ನು ಪಡೆದಿದೆ. ಉತ್ತಮ ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G25 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 (Go ಆವೃತ್ತಿ) ಸಪೋರ್ಟ್‌ ಸಹ ಪಡೆದಿದೆ. ಸ್ಮಾರ್ಟ್‌ಫೋನ್‌ 3GB RAM ಮತ್ತು 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇನ್ನೊಂದು ಕ್ಯಾಮೆರಾ ಬೇಸಿಕ್ ಸೆನ್ಸಾರ್ ಹೊಂದಿದ್ದು, ಜೊತೆಗೆ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳು 4G LTE, Wi-Fi, ಬ್ಲೂಟೂತ್ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಒಳಗೊಂಡಿವೆ. ಹಿಂಬಾಗದಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಭದ್ರತೆಗಾಗಿ ಫೇಸ್ ಅನ್‌ಲಾಕ್ ಫೀಚರ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಪ್ಲಸ್ ಸ್ಮಾರ್ಟ್‌ಫೋನ್‌ 3GB RAM + 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 7,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಅಗಷ್ಟ 3 ರಿಂದ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ರಿಸ್ಟಲ್ ವೈಲೆಟ್, ಟ್ರ್ಯಾಂಕ್ವಿಲ್ ಸೀ ಬ್ಲೂ ಮತ್ತು ಮಿರಾಕಲ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 266 ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 (Go ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2 GB RAM + 32 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 2GB ವರ್ಚುವಲ್ RAM ಅನ್ನು ಕೂಡ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಪೋರ್ಟ್ರೇಟ್‌

ಇನ್ಫಿನಿಕ್ಸ್‌ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ ಡ್ಯುಯಲ್ AI ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ AI HDR, ಬ್ಯೂಟಿ ಮತ್ತು ಪೋರ್ಟ್ರೇಟ್‌ ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಟಾಕ್ ಟೈಮ್ ಜೊತೆಗೆ 31 ಗಂಟೆಗಳ ಬ್ಯಾಟರಿ ಬಾಳಿಕೆ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಬ್ಯಾಟರಿ ಬಾಳಿಕೆಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌ v5.0 ಅನ್ನು ಬೆಂಬಲಿಸುತ್ತದೆ. ಇದಲ್ಲದೆ DTS-HD ಸರೌಂಡ್ ಸೌಂಡ್ ಮತ್ತು ವರ್ಧಿತ ಆಡಿಯೊ ಅನುಭವಕ್ಕಾಗಿ ಬೀಜ್ 2.0 ಅನ್ನು ಸಹ ಒಳಗೊಂಡಿದೆ.

Best Mobiles in India

English summary
Infinix Smart 6 Plus will be available for purchase via Flipkart. It is priced under Rs 8,000 and comes in a single storage option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+