Home
ಸುದ್ದಿಜಾಲ

ಇನ್ಫಿನಿಕ್ಸ್ 'ಸ್ಮಾರ್ಟ್' 6 ಫೋನ್‌ ಬಿಡುಗಡೆ! ವಿಶೇಷತೆ ಏನು?

ಸ್ಮಾರ್ಟ್‌ಫೋನ್ ವಲಯದಲ್ಲಿ ಇನ್ಫಿನಿಕ್ಸ್‌ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಇನ್ಪಿನಿಕ್ಸ್‌ ಸ್ಮಾರ್ಟ್‌ 6 ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.6-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಯುನಿಸಾಕ್ SC9863A ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

ಇನ್ಪಿನಿಕ್ಸ್‌

ಹೌದು, ಇನ್ಪಿನಿಕ್ಸ್‌ ಕಂಪೆನಿ ಹೊಸ ಇನ್ಪಿನಿಕ್ಸ್‌ ಸ್ಮಾರ್ಟ್‌ 6 ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಇನ್ಪಿನಿಕ್ಸ್‌ ಸ್ಮಾರ್ಟ್‌ 6 ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ LCD IPS ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್‌ ಅನ್ನು ಹೊಂದಿದೆ. ಇದು 266ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. 16 ಮಿಲಿಯನ್ ಕಲರ್‌ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ ಯುನಿಸಾಕ್ SC9863A ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 (ಗೋ ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 0.08 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿಯು 31 ಗಂಟೆಗಳ ಟಾಕ್ ಟೈಮ್ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಮೈಕ್ರೋ-USB ಪೋರ್ಟ್, 3.5 ಹೆಡ್‌ಫೋನ್ ಜ್ಯಾಕ್ ಮತ್ತು ಬ್ಲೂಟೂತ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇದು ಫೇಸ್ ಐಡಿಗೆ ಬೆಂಬಲವನ್ನು ನೀಡುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ ಏಕೈಕ 2GB + 32GB ಸ್ಟೋರೇಜ್ ಮಾದರಿಯ ಬೆಲೆ $120 (ಅಂದಾಜು 9,000)ಬೆಲೆಯನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅನ್ನು ಸೀಮಿತ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದೆ. ಸದ್ಯ ಅಧಿಕೃತ ವೆಬ್‌ಸೈಟ್ ಯಾವುದೇ ಬೆಲೆ ವಿವರಗಳನ್ನು ಬಹಿರಂಗಪಡಿಸಿಲ್ಲ. ಇದು ಹಾರ್ಟ್ ಆಫ್ ಓಷನ್, ಲೈಟ್ ಸೀ ಗ್ರೀನ್, ಪೋಲಾರ್ ಬ್ಲ್ಯಾಕ್ ಮತ್ತು ಸ್ಟಾರ್ರಿ ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಈ ಫೋನ್‌ ಭಾರತದಲ್ಲಿ ಬಿಡುಗಡೆ ಯಾವಾಗ ಅನ್ನೊದರ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಇನ್ಫಿನಿಕ್ಸ್‌

ಇನ್ನು ಕಳೆದ ವರ್ಷ ಇನ್ಫಿನಿಕ್ಸ್‌ ಕಂಪೆನಿ ತನ್ನ ಇನ್ಫಿನಿಕ್ಸ್‌ ಸ್ಮಾರ್ಟ್‌ 5 ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ 6.6-ಇಂಚಿನ IPS ಎಲ್ಸಿಡಿ ಪ್ಯಾನಲ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ನಿಯಂತ್ರಿಸಲ್ಪಡುತ್ತದೆ. ಅಲ್ಲದೆ ಆಂಡ್ರಾಯ್ಡ್‌ 10ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM+64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಫೋನ್‌ 5000mAh ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಬೆಂಬಲದೊಂದಿಗೆ ಡ್ಯುಯಲ್ ಸಿಮ್, ಡ್ಯುಯಲ್-ಬ್ಯಾಂಡ್ ವೈ-ಫೈ ಎಸಿ, ಬ್ಲೂಟೂತ್, ಜಿಪಿಎಸ್ ಅನ್ನು ಒಳಗೊಂಡಿದೆ.

Best Mobiles in India

English summary
Infinix Smart 6 has been launched. The latest budget-friendly phone from Infinix comes in four colour options.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+