ಅಗ್ಗದ ಬೆಲೆಯಲ್ಲಿ ಎಂಟ್ರಿಕೊಟ್ಟ ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್!
ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಇನ್ಫಿನಿಕ್ಸ್ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಬೆಲೆಯಲ್ಲಿ ಪರಿಚಯಿಸಿ ಜನಪ್ರಿಯತೆ ಪಡೆದಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 6 ಫೋನ್ ಬಿಡುಗಡೆ ಮಾಡಿದೆ. ಇದು ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದ್ದು, ಆಂಟಿ-ಬ್ಯಾಕ್ಟೀರಿಯಲ್ ಬ್ಯಾಕ್ ಪ್ಯಾನೆಲ್‌ನೊಂದಿಗೆ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ವಾಟರ್‌ಡ್ರಾಪ್ ಸನ್‌ಲೈಟ್ ಡಿಸ್‌ಪ್ಲೇಯನ್ನು ಹೊಂದಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾಟೆಕ್ ಹಿಲಿಯೋ A22 ಕ್ವಾಡ್-ಕೋರ್ SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ಫ್ಲ್ಯಾಷ್ ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ DTS ಆಡಿಯೊ ಪ್ರೊಸೆಸಿಂಗ್ ಮತ್ತು ಉತ್ತಮ ಆಡಿಯೊ ಅನುಭವಕ್ಕಾಗಿ Beez 2.0 ಅನ್ನು ಹೊಂದಿದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 266 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 500 ನಿಟ್ಸ್ ಬ್ರೈಟ್‌ನೆಸ್ ಮತ್ತು 89% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಇದು ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 (Go ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM + 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 2GB ವರ್ಚುವಲ್ RAM ಅನ್ನು ಕೂಡ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ ಡ್ಯುಯಲ್ AI ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇನ್ನು ರಿಯರ್ ಕ್ಯಾಮೆರಾ AI HDR, ಬ್ಯೂಟಿ ಮತ್ತು ಪೋರ್ಟ್ರೇಟ್‌ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಟಾಕ್ ಟೈಮ್ ಜೊತೆಗೆ 31 ಗಂಟೆಗಳ ಬ್ಯಾಟರಿ ಬಾಳಿಕೆ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಬ್ಯಾಟರಿ ಬಾಳಿಕೆಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್ v5.0 ಅನ್ನು ಬೆಂಬಲಿಸುತ್ತದೆ. ಇದಲ್ಲದೆ DTS-HD ಸರೌಂಡ್ ಸೌಂಡ್ ಮತ್ತು ವರ್ಧಿತ ಆಡಿಯೊ ಅನುಭವಕ್ಕಾಗಿ ಬೀಜ್ 2.0 ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್ 7,499ರೂ.ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೇ 6 ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹಾರ್ಟ್ ಆಫ್ ಓಷನ್, ಲೈಟ್ ಸೀ ಗ್ರೀನ್, ಪೋಲಾರ್ ಬ್ಲಾಕ್ ಮತ್ತು ಸ್ಟಾರಿ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








