Home
ಸುದ್ದಿಜಾಲ

6000mAh ಬ್ಯಾಟರಿ ಇರುವ ಈ ಫೋನಿನ ಆಫರ್‌ ಬೆಲೆ 7,299ರೂ.!

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಇನ್ಫಿನಿಕ್ಸ್‌ ಸಂಸ್ಥೆಯ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಈಗ ಬೊಂಬಾಟ್‌ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ. ಬಜೆಟ್‌ ಮಾದರಿಯ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಫೋನ್‌ ಎಂಟ್ರಿ ಲೆವೆಲ್‌ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

ಹೌದು, ಇನ್ಫಿನಿಕ್ಸ್‌ ಸಂಸ್ಥೆಯ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಈಗ 27% ರಷ್ಟು ಡಿಸ್ಕೌಂಟ್‌ ದರದಲ್ಲಿ ಗುರುತಿಸಿಕೊಂಡಿದೆ. ಈ ಮೊಬೈಲ್‌ನ 4 GB RAM ಹಾಗೂ 64 GB ROM ಆಂತರೀಕ ಸಂಗ್ರಹದ ವೇರಿಯಂಟ್‌ ಬೆಲೆಯು 9,999. ಬೆಲೆಯಲ್ಲಿ ಹೊಂದಿದ್ದು, ಕೊಡುಗೆಯಲ್ಲಿ ಇದು 7,299ರೂ. ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಜತೆಗೆ ಕೆಲವು ಆಯ್ದ ಬ್ಯಾಂಕ್ ಗಳ ಕೊಡುಗೆ ಸಹ ಗ್ರಾಹಕರಿಗೆ ಖಚಿತವಾಗಿ ಸಿಗಲಿದೆ.

6000mAh ಬ್ಯಾಟರಿ ಇರುವ ಈ ಫೋನಿನ ಆಫರ್‌ ಬೆಲೆ 7,299ರೂ.!

ಈ ಮೊಬೈಲ್‌ ಎಂಟ್ರಿ ಲೆವೆಲ್ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಿದ್ದರೂ, ಬಜೆಟ್‌ ದರದ ಫೋನಿನ ಫೀಚರ್ಸ್‌ ಪಡೆದಿದೆ. ಇನ್ನು ಇದು ಯುನಿಸೊಕ್ SC9863A1 ಪ್ರೊಸೆಸರ್ ಪವರ್‌ ಅನ್ನು ಒಳಗೊಂಡಿದ್ದು, ಇದರೊಂದಿಗೆ 5000 mAh ಬ್ಯಾಟರಿ ಸಾಮರ್ಥ್ಯದ ಪವರ್‌ ಪಡೆದಿದೆ. ಇನ್ನುಳಿದಂತೆ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಫೋನ್‌ ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಡಿಸ್‌ಪ್ಲೇ ರಚನೆ ಹೇಗಿದೆ : ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ 6.6 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 1612 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 500 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಪ್ರೊಸೆಸರ್‌ ಪವರ್‌ ಯಾವುದು : ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಯುನಿಸೊಕ್ SC9863A1 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಹ್ಯಾಂಡ್ಸೆಟ್ XOS 12 ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಲ್ಲದೆ 4 GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದರೊಂದಿಗೆ ವರ್ಚುವಲ್ RAM ಫೀಚರ್ಸ್‌ ಮೂಲಕ ಬಳಕೆದಾರರು 3 GB ವರೆಗೆ ಮೆಮೊರಿಯನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಡ್ಯುಯಲ್‌ ಕ್ಯಾಮೆರಾ ರಚನೆ : ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡದಿದೆ. ಇದರ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಮತ್ತು ಎರಡನೆ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಇನ್ನು ಹಿಂಬದಿಯಲ್ಲಿ ಡ್ಯುಯಲ್ LED ಫ್ಲ್ಯಾಷ್ ಸೆಟಪ್ ಅನ್ನು ಅಳವಡಿಸಲಾಗಿದೆ. ಇದಲ್ಲದೆ 5 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒದಗಿಸಲಾಗಿದೆ. ಸೆಲ್ಫಿ ಕ್ಯಾಮೆರಾ ಜೊತೆಗೆ LED ಫ್ಲ್ಯಾಷ್ ಅನ್ನು ನೀಡಲಾಗಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಬ್ಯಾಟರಿ ಬ್ಯಾಕ್‌ಅಪ್‌ ಬಲ ಎಷ್ಟು : ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ರಚನೆ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 10W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಪಡೆದಿದ್ದು, USB ಟೈಪ್-C ಪೋರ್ಟ್‌ ಆಯ್ಕೆ ಒಳಗೊಂಡಿದೆ.

ಕನೆಕ್ಟಿವಿಟಿ ಸೌಲಭ್ಯಗಳು : ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, ವೈಫೈ 802.11 b/g/n, ಹಾಟ್‌ಸ್ಪಾಟ್‌, ಬ್ಲೂಟೂತ್ 4.2, GPS, Glonass, ಮತ್ತು BeiDou ಅನ್ನು ಬೆಂಬಲಿಸಲಿದೆ. ಇದು ತರಂಗ ಮಾದರಿಯ ವಿನ್ಯಾಸ ಮತ್ತು ಬ್ಯಾಕ್ಟೀರಿಯಾ ವಿರೋಧಿ ಹಿಂಭಾಗದ ಫಲಕವನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಮೆಮೊರಿ ಮತ್ತು ಕಲರ್‌ ಆಯ್ಕೆ : ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್‌ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ. ಈ ಫೋನ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಅಜುರೆ ಬ್ಲೂ, ಎಮರಾಲ್ಡ್ ಗ್ರೀನ್ ಮತ್ತು ನೈಟ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Infinix SMART 7 available at great Deals on Flipkart: Check offer Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+