Home
ಸುದ್ದಿಜಾಲ

ಇನ್ಫಿನಿಕ್ಸ್‌ನ ಈ ಅಗ್ಗದ ಫೋನ್‌ ಬೆಲೆಯಲ್ಲಿ ಈಗ ಸಖತ್ ಇಳಿಕೆ!

ಇನ್ಫಿನಿಕ್ಸ್‌ ಕಂಪೆನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಅಗ್ಗದ ಬೆಲೆಯಲ್ಲಿ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಸೇಲ್ ಆರಂಭಿಸಿದ್ದು, ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಅಗ್ಗದ ಫೋನ್‌ ಈಗ ಮತ್ತಷ್ಟು ಅಗ್ಗದ ಬೆಲೆಗೆ ಲಭ್ಯ.

ಹೌದು, ಇನ್ಫಿನಿಕ್ಸ್‌ ಕಂಪೆನಿಯ ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಫ್ಲಿಪ್‌ಕಾರ್ಟ್‌ನಲ್ಲಿ 22% ರಿಯಾಯಿತಿ ಪಡೆದಿದೆ. 2 GB RAM + 64GB ವೇರಿಯಂಟ್‌ 7,999ರೂ. ದರದಲ್ಲಿ ಕಾಣಸಿಕೊಂಡಿದ್ದು, ಆದ್ರೆ, ಗ್ರಾಹಕರು 6,199ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್‌ ಸಹ ದೊರೆಯುತ್ತದೆ. ಈ ಫೋನಿನ ಇತರೆ ಫೀಚರ್ಸ್‌ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ನ ಈ ಅಗ್ಗದ ಫೋನ್‌ ಬೆಲೆಯಲ್ಲಿ ಈಗ ಸಖತ್ ಇಳಿಕೆ!

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಡಿಸ್‌ಪ್ಲೇ ರಚನೆ : ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಜೊತೆಗೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಪ್ರೊಸೆಸರ್‌ ಪವರ್ : ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸೋಕ್‌ SC9863A1 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 12 (ಗೋ ಎಡಿಷನ್‌) ಆಧಾರಿತ XOS 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 4GB ವರೆಗೆ ವಿಸ್ತರಿಸಬಹುದು. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್‌ನ ಈ ಅಗ್ಗದ ಫೋನ್‌ ಬೆಲೆಯಲ್ಲಿ ಈಗ ಸಖತ್ ಇಳಿಕೆ!

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಕ್ಯಾಮೆರಾ ರಚನೆ : ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಸ್ಮಾರ್ಟ್‌ಫೋನ್‌ AI-ಬೆಂಬಲಿತ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿ ಪ್ರಿಯರಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.ಸೆಲ್ಫಿ ಕ್ಯಾಮೆರಾದ ಜೊತೆಗೆ ಎಲ್ಇಡಿ ಫ್ಲ್ಯಾಷ್ ಸಹ ಇದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಬ್ಯಾಟರಿ ಬ್ಯಾಕಪ್‌ : ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 39 ಗಂಟೆಗಳ ಕಾಲಿಂಗ್‌ ಟೈಂ, 50 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್‌ ಟೈಂ ಮತ್ತು 30 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಹೇಳಲಾಗಿದೆ. ಇದರಲ್ಲಿ ಅಲ್ಟ್ರಾ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ನೀಡಲಾಗಿದ್ದು, ಇದರಿಂದ ಬ್ಯಾಟರಿಯು 5% ಗಿಂತ ಕಡಿಮೆ ಇದ್ದಾಗಲೂ ಸಹ 2 ಗಂಟೆಗಳ ಕಾಲ ಕಾಲ್‌ ಟೈಂ ಅನ್ನು ನೀಡಲಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಕನೆಕ್ಟಿವಿಟಿ ಫೀಚರ್ಸ್‌ : ಇನ್ಫಿನಿಕ್ಸ್‌ ಸ್ಮಾರ್ಟ್‌ 7 HD ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, USB ಟೈಪ್-C ಪೋರ್ಟ್, ಬ್ಲೂಟೂತ್ 4.2, OTG ಮತ್ತು Wi-Fi ಅನ್ನು ಬೆಂಬಲಿಸಲಿದೆ. ಜೊತೆಗೆ ಆಂಬಿಯೆಂಟ್ ಲೈಟ್ ಸೆನ್ಸಾರ್‌, ಇ-ಕಂಪಾಸ್‌, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ನೀಡಲಾಗಿದೆ.

Best Mobiles in India

English summary
Infinix Smart 7 HD available at attractive Discount Price on Flipkart: Know more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+