ಬಿಡುಗಡೆಗೂ ಮುನ್ನವೇ ಧೂಳೆಬ್ಬಿಸಿದ ಇನ್ಫಿನಿಕ್ಸ್ ಸ್ಮಾರ್ಟ್ 7 HD! ಲಾಂಚ್ ಯಾವಾಗ!
ಇನ್ಫಿನಿಕ್ಸ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಅಗ್ಗದ ಬೆಲೆಯಲ್ಲಿ ಪವರ್‌ಫುಲ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಪ್ರಾಬಲ್ಯವನ್ನು ಸಾಧಿಸಿದೆ. ಇದೀಗ ತನ್ನ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಫೋನ್ ಲಾಂಚ್ ಡೇಟ್ ಇದೀಗ ಬಹಿರಂಗವಾಗಿದೆ.
ಹೌದು, ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಏಪ್ರಿಲ್ 28 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಯುನಿಸೋಕ್ SC9863A1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 7 HD ಡಿಸ್‌ಪ್ಲೇ ಹೇಗಿದೆ?
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,612x720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇದು 60Hz ರಿಫ್ರೆಶ್ ರೇಟ್ ಮತ್ತು 500 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲಿಸಲಿದೆ ಎಂದು ಹೇಳಲಾಗಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 HD ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಸ್ಮಾರ್ಟ್ 7 HD ಯುನಿಸೋಕ್ SC9863A1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇದಲ್ಲದೆ 3GB ವಿಸ್ತೃತ ವರ್ಚುವಲ್ RAM ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 7 HD ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಜೊತೆಗೆ ಡ್ಯುಯಲ್ LED ಫ್ಲಾಷ್ ಘಟಕದೊಂದಿಗೆ ಬರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರಲಿದೆ ಎಂದು ಇನ್ಫಿನಿಕ್ಸ್ ಕಂಪೆನಿ ಹೇಳಿಕೊಂಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 HD ಬ್ಯಾಟರಿ ಬ್ಯಾಕ್‌ಅಪ್
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನಯ ಹೊಂದಿರಲಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಜೊತೆಗೆ ಸಾಫ್ಟ್‌ವೇರ್ ಆಧಾರಿತ ಫೇಸ್ ಅನ್‌ಲಾಕ್ ವೈಶಿಷ್ಟ್ಯವನ್ನು ಹೊಂದಿರಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 7 HD ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಭಾರತದಲ್ಲಿ ಬೆಲೆ ಎಷ್ಟಿರಲಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 28 ರಂದು ಬಿಡುಗಡೆಯಾಗಲಿದೆ. ಇನ್ನು ಸ್ಮಾರ್ಟ್‌ಫೋನ್ ಆಂಟಿ-ಬ್ಯಾಕ್ಟೀರಿಯಲ್ ಬ್ಯಾಕ್ ಪ್ಯಾನೆಲ್ ಅನ್ನು ಪಡೆದಿರಲಿದೆ. ಇದು ಎಮರಾಲ್ಡ್ ಗ್ರೀನ್, ನೈಟ್ ಬ್ಲ್ಯಾಕ್ ಮತ್ತು ಅಜುರೆ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ಹೇಳಲಾಗಿದೆ. ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಇದರ ಬೆಲೆ ವಿವರಗಳು ಬಹಿರಂಗವಾಗಲಿದೆ ಎಂದು ಹೇಳಲಾಗಿದೆ.


Click it and Unblock the Notifications








