ಕೇವಲ 5,999ರೂ. ಬೆಲೆಯಲ್ಲಿ ಎಂಟ್ರಿ ಕೊಟ್ಟ ಪವರ್‌ಫುಲ್ ಸ್ಮಾರ್ಟ್‌ಫೋನ್!
ಇನ್ಫಿನಿಕ್ಸ್ ಕಂಪೆನಿ ಬಜೆಟ್ ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಎನಿಸಿಕೊಂಡಿದೆ. ಕೈಗೆಟಕುವ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಬಯಸೋರಿಗೆ ಇನ್ಫಿನಿಕ್ಸ್ ಮೊದಲ ಆಯ್ಕೆಯಾಗಿರುತ್ತದೆ. ಇಂತಹ ಇನ್ಫಿನಿಕ್ಸ್ ಕಂಪೆನಿ ಇದೀಗ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು AI-ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ.
ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 7 HD ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಯುನಿಸೋಕ್ SC9863A1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 7 HD ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 HD ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೋಕ್ SC9863A1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 (ಗೋ ಎಡಿಷನ್) ಆಧಾರಿತ XOS 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 4GB ವರೆಗೆ ವಿಸ್ತರಿಸಬಹುದು. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 7 HD ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ AI-ಬೆಂಬಲಿತ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿ ಪ್ರಿಯರಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.ಸೆಲ್ಫಿ ಕ್ಯಾಮೆರಾದ ಜೊತೆಗೆ ಎಲ್ಇಡಿ ಫ್ಲ್ಯಾಷ್ ಸಹ ಇದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 HD ಬ್ಯಾಟರಿ ಬ್ಯಾಕಪ್
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 39 ಗಂಟೆಗಳ ಕಾಲಿಂಗ್ ಟೈಂ, 50 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಟೈಂ ಮತ್ತು 30 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಹೇಳಲಾಗಿದೆ. ಇದರಲ್ಲಿ ಅಲ್ಟ್ರಾ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ನೀಡಲಾಗಿದ್ದು, ಇದರಿಂದ ಬ್ಯಾಟರಿಯು 5% ಗಿಂತ ಕಡಿಮೆ ಇದ್ದಾಗಲೂ ಸಹ 2 ಗಂಟೆಗಳ ಕಾಲ ಕಾಲ್ ಟೈಂ ಅನ್ನು ನೀಡಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 7 HD ಕನೆಕ್ಟಿವಿಟಿ ಫೀಚರ್ಸ್
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, USB ಟೈಪ್-C ಪೋರ್ಟ್, ಬ್ಲೂಟೂತ್ 4.2, OTG ಮತ್ತು Wi-Fi ಅನ್ನು ಬೆಂಬಲಿಸಲಿದೆ. ಜೊತೆಗೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ನೀಡಲಾಗಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 HD ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 7 HD ಸ್ಮಾರ್ಟ್‌ಫೋನ್ 2GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 5,999ರೂ. ಬೆಲೆಯನ್ನು ಹೊಂದಿದೆ. ಇದು ಇಂಕ್ ಬ್ಲ್ಯಾಕ್, ಜೇಡ್ ವೈಟ್ ಮತ್ತು ಸಿಲ್ಕ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ಸ್ಮಾರ್ಟ್‌ಫೋನ್ ಇದೇ ಮೇ 4 ರಂದು ಮಧ್ಯಾಹ್ನ 12:00 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಬರಲಿದೆ. ಸ್ಮಾರ್ಟ್‌ಫೋನ್ ಫಸ್ಟ್‌ಸೇಲ್ ಸಮಯದಲ್ಲಿ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 5% ಕ್ಯಾಶ್‌ಬ್ಯಾಕ್ ಸಿಗಲಿದೆ.


Click it and Unblock the Notifications








