ಭಾರತದಲ್ಲಿ ಅಗ್ಗದ ಬೆಲೆಯ ಇನ್ಫಿನಿಕ್ಸ್ ಸ್ಮಾರ್ಟ್ 7 ಬಿಡುಗಡೆ!..6000mAh ಬ್ಯಾಟರಿ ವಿಶೇಷ!
ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಬೆಲೆ ಕಡಿಮೆಯಾದರೂ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳಿಗೆ ಇನ್ಫಿನಿಕ್ಸ್ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಸ್ಮಾರ್ಟ್ 7 ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಯುನಿಸೊಕ್ SC9863A1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಆಗಿದ್ದು, ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 7 ಡಿಸ್‌ಪ್ಲೇ ವಿನ್ಯಾಸ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ 6.6-ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 1612 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 500 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಯುನಿಸೊಕ್ SC9863A1 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಹ್ಯಾಂಡ್ಸೆಟ್ XOS 12ನಲ್ಲಿ ಕಾರ್ಯನಿರ್ವಹಿಸಲಿದೆ. ಇದಲ್ಲದೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಪಡೆದಿದೆ. ಇದರೊಂದಿಗೆ ವರ್ಚುವಲ್ RAM ಫೀಚರ್ಸ್ ಮೂಲಕ ಬಳಕೆದಾರರು 3GB ವರೆಗೆ ಮೆಮೊರಿಯನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 7 ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ ಸ್ಮಾರ್ಟ್ 7 ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡದಿದೆ. ಇದರ ಮುಖ್ಯ ಕ್ಯಾಮೆರಾ 13MP ಸೆನ್ಸಾರ್ ಮತ್ತು ಎರಡನೆ ಕ್ಯಾಮೆರಾ 2MP ಸೆನ್ಸಾರ್ ಹೊಂದಿದೆ. ಇನ್ನು ಹಿಂಬದಿಯಲ್ಲಿ ಡ್ಯುಯಲ್ LED ಫ್ಲ್ಯಾಷ್ ಸೆಟಪ್ ಅನ್ನು ಅಳವಡಿಸಲಾಗಿದೆ. ಇದಲ್ಲದೆ 5MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಸೆಲ್ಫಿ ಕ್ಯಾಮೆರಾದೊಂದಿಗೂ ಸಹ LED ಫ್ಲ್ಯಾಷ್ ಅನ್ನು ನೀಡಲಾಗಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 ಬ್ಯಾಟರಿ ಬ್ಯಾಕ್‌ಅಪ್
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು USB ಟೈಪ್-C ಪೋರ್ಟ್‌ನಲ್ಲಿ 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, ವೈಫೈ 802.11 b/g/n, ಹಾಟ್‌ಸ್ಪಾಟ್, ಬ್ಲೂಟೂತ್ 4.2, GPS, Glonass, ಮತ್ತು BeiDou ಅನ್ನು ಬೆಂಬಲಿಸಲಿದೆ. ಇದು ತರಂಗ ಮಾದರಿಯ ವಿನ್ಯಾಸ ಮತ್ತು ಬ್ಯಾಕ್ಟೀರಿಯಾ ವಿರೋಧಿ ಹಿಂಭಾಗದ ಫಲಕವನ್ನು ಒಳಗೊಂಡಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 7 ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಬೆಲೆ ಭಾರತದಲ್ಲಿ 7,299 ರೂ. ಆಗಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಪ್ರತ್ಯೇಕವಾಗಿ ಫೆಬ್ರವರಿ 27 ರಿಂದ ಸೇಲ್ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಅಜುರೆ ಬ್ಲೂ, ಎಮರಾಲ್ಡ್ ಗ್ರೀನ್ ಮತ್ತು ನೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








