Home
ಸುದ್ದಿಜಾಲ

6000mAh ಬ್ಯಾಟರಿಯ ಈ ಸ್ಮಾರ್ಟ್‌ಫೋನ್‌ 30% ಡಿಸ್ಕೌಂಟ್‌ ಪಡೆದಿದೆ! ಮಿಸ್‌ ಮಾಡ್ಕೋಬೇಡಿ!

ಇನ್ಫಿನಿಕ್ಸ್‌ ಕಂಪೆನಿಯ ಫೋನ್‌ಗಳು ಅಗ್ಗದ ಬೆಲೆಗೆ ಹೆಸರುವಾಸಿಯಾಗಿವೆ. ಅಗ್ಗದ ಬೆಲೆಯನ್ನು ಹೊಂದಿದ್ದರೂ ಕೂಡ ಜಬರ್ದಸ್ತ್‌ ಫೀಚರ್ಸ್‌ನಿಂದಾಗಿ ಸದ್ದು ಮಾಡುತ್ತಿವೆ. ಇದರಲ್ಲಿ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಕೈ ಗೆಟಕುವ ಬೆಲೆಯಲ್ಲಿ ಎಂಟ್ರಿ ನೀಡಿದ್ದ ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿದೆ.

ಹೌದು, ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್‌ ಮೊಬೈಲ್ಸ್‌ ಬೊನಾನ್ಜಾ ಸೇಲ್‌ನಲ್ಲಿ ಬಿಗ್‌ ಆಫರ್‌ ಪಡೆದಿದೆ. ಇದರಿಂದ ಈ ಫೋನ್‌ ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯಲಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಮೇಲೆ ಲಭ್ಯವಾಗುತ್ತಿರುವ ಡಿಸ್ಕೌಂಟ್‌ ಪ್ರೈಸ್‌ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

6000mAh ಬ್ಯಾಟರಿಯ ಈ ಸ್ಮಾರ್ಟ್‌ಫೋನ್‌  30% ಡಿಸ್ಕೌಂಟ್‌ ಪಡೆದಿದೆ!

ಡಿಸ್ಕೌಂಟ್‌ ಆಫರ್‌ ಎಷ್ಟು?
ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 9,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಇದರ ಮೇಲೆ ಪ್ರಸ್ತುತ 30% ಡಿಸ್ಕೌಂಟ್‌ ನೀಡಲಾಗ್ತಿದೆ. ಆದರಿಂದ ಸ್ಮಾರ್ಟ್‌ಫೋನ್‌ ಬೆಲೆ ಇದೀಗ 6,999ರೂ ಗಳಿಗೆ ಇಳಿದಿದೆ. ಇದರೊಂದಿಗೆ ಬ್ಯಾಂಕ್‌ ಆಫರ್‌ಗಳನ್ನು ಸಹ ನೀಡಲಾಗ್ತಿದ್ದು, ವಿಶೇಷ ಕ್ಯಾಶ್‌ಬ್ಯಾಕ್‌ ಆಫರ್‌ ಲಭ್ಯವಾಗಲಿದೆ. ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಇನ್ನಷ್ಟು ಬೆಲೆ ಕಡಿಮೆ ಆಗಲಿದೆ ಎಂದು ಫ್ಲಿಪ್‌ಕಾರ್ಟ್‌ನಲ್ಲಿ ತಿಳಿಸಲಾಗಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಫೀಚರ್ಸ್‌ ಹೇಗಿದೆ?
ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ 6.6 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 60Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 500 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಪ್ರೊಸೆಸರ್‌ ಯಾವುದು?
ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಯುನಿಸೊಕ್ SC9863A1 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಹ್ಯಾಂಡ್ಸೆಟ್ XOS 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಇದರೊಂದಿಗೆ ವರ್ಚುವಲ್ RAM ಫೀಚರ್ಸ್‌ ಮೂಲಕ ಬಳಕೆದಾರರು 3GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳುವುದಕ್ಕೆ ಸಹ ಸಾಧ್ಯವಾಗಲಿದೆ.

6000mAh ಬ್ಯಾಟರಿಯ ಈ ಸ್ಮಾರ್ಟ್‌ಫೋನ್‌  30% ಡಿಸ್ಕೌಂಟ್‌ ಪಡೆದಿದೆ!

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 13ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು ಹಿಂಬದಿಯಲ್ಲಿ ಡ್ಯುಯಲ್ LED ಫ್ಲ್ಯಾಷ್ ಸೆಟಪ್ ಅನ್ನು ಅಳವಡಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಸೆಲ್ಫಿ ಕ್ಯಾಮೆರಾದೊಂದಿಗೂ ಸಹ LED ಫ್ಲ್ಯಾಷ್ ಅನ್ನು ನೀಡಲಾಗಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, ವೈಫೈ 802.11 b/g/n, ಹಾಟ್‌ಸ್ಪಾಟ್‌, ಬ್ಲೂಟೂತ್ 4.2, GPS, Glonass, ಮತ್ತು BeiDou ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬ್ಯಾಕ್ಟೀರಿಯಾ ವಿರೋಧಿ ರಿಯರ್‌ ಪ್ಯಾನಲ್‌ ಅನ್ನು ಒಳಗೊಂಡಿದೆ. ಇದನ್ನು ಅಜುರೆ ಬ್ಲೂ, ಎಮರಾಲ್ಡ್ ಗ್ರೀನ್ ಮತ್ತು ನೈಟ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Infinix Smart 7 Smartphone Price Slashed on flipkart! Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+