Home
ಸುದ್ದಿಜಾಲ

ಇಂದು 'ಇನ್ಫಿನಿಕ್ಸ್‌ ಸ್ಮಾರ್ಟ್‌ 8HD' ಫಸ್ಟ್‌ ಸೇಲ್‌!..ಭಾರೀ ಅಗ್ಗದ ಬೆಲೆಗೆ ಲಭ್ಯ!

ಕಡಿಮೆ ದರದ ಹಾಗೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ವಿಭಾಗದಲ್ಲಿ ಇನ್ಫಿನಿಕ್ಸ್‌ ಮೊಬೈಲ್‌ ಸಂಸ್ಥೆಯು ಗ್ರಾಹಕರ ಸೆಳೆದಿದೆ. ಈ ನಿಟ್ಟಿನಲ್ಲಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಅಗ್ಗದ ವಿಭಾಗದಲ್ಲಿ ಗುರುತಿಸಿಕೊಂಡಿದ್ದು, ಈ ಸ್ಮಾರ್ಟ್‌ಫೋನ್‌ ಇಂದು (ಡಿಸೆಂಬರ್ 13 ರಂದು) ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಫಸ್ಟ್‌ ಸೇಲ್‌ ಪ್ರಾರಂಭ ಮಾಡಲಿದೆ.

ಹೌದು, ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಮೊಬೈಲ್‌ ಇಂದು ಮಧ್ಯಾಹ್ನ 12 ರಿಂದ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟ ಪ್ರಾರಂಭ ಮಾಡಲಿದ್ದು, ಬೊಂಬಾಟ್‌ ಡಿಸ್ಕೌಂಟ್‌ ಕೂಡಾ ಸಿಗಲಿದೆ. ಈ ಫೋನ್‌ 3 GB RAM + 64 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಗ್ರಾಹಕರು ಫ್ಲಿಪ್‌ಕಾರ್ಟ್‌ನಲ್ಲಿ ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ, ಶೇ 10% ತ್ವರಿತ ರಿಯಾಯಿತಿ ಪಡೆಯಬಹುದಾಗಿದೆ.

ಇಂದು 'ಇನ್ಫಿನಿಕ್ಸ್‌ ಸ್ಮಾರ್ಟ್‌ 8HD' ಫಸ್ಟ್‌ ಸೇಲ್‌!..ಭಾರೀ ಅಗ್ಗದ ಬೆಲೆಗೆ ಲಭ್

ಅಂದಹಾಗೆ ಈ ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಇನ್ನುಳಿದಂತೆ ಈ ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಮೊಬೈಲ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಇಂದು 'ಇನ್ಫಿನಿಕ್ಸ್‌ ಸ್ಮಾರ್ಟ್‌ 8HD' ಫಸ್ಟ್‌ ಸೇಲ್‌!..ಭಾರೀ ಅಗ್ಗದ ಬೆಲೆಗೆ ಲಭ್

ಯಾವ ಪ್ರೊಸೆಸರ್‌ ಲಭ್ಯ

ಇನ್ಫಿನಿಕ್ಸ್‌ ಸಂಸ್ಥೆಯ ಈ ಮೊಬೈಲ್‌ ಯುನಿಸೊಕ್ T606 ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 6 GB RAM ಮತ್ತು 64GB ಆಂತರೀಕ ಸ್ಟೊರೇಜ್‌ ಸಾಮರ್ಥ್ಯದ ಆಯ್ಕೆ ಕೂಡಾ ಒಳಗೊಂಡಿದೆ. ಇದಲ್ಲದೆ 4GB ವರ್ಚುವಲ್ RAM ಹಾಗೂ ಮೈಕ್ರೊ SD ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು 2TB ವರೆಗೂ ವಿಸ್ತರಿಸುವುದಕ್ಕೆ ಅವಕಾಶ ಇದೆ.

ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13  ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾ VGA ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಇದು ಪಡೆದುಕೊಂಡಿದೆ.

ಇಂದು 'ಇನ್ಫಿನಿಕ್ಸ್‌ ಸ್ಮಾರ್ಟ್‌ 8HD' ಫಸ್ಟ್‌ ಸೇಲ್‌!..ಭಾರೀ ಅಗ್ಗದ ಬೆಲೆಗೆ ಲಭ್

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಮೊಬೈಲ್‌ 5,000mAh ಬ್ಯಾಟರಿ ಸಾಮರ್ಥ್ಯದ ಸಪೋರ್ಟ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈಫೈ, ಬ್ಲೂಟೂತ್‌, ಹಾಟ್‌ಸ್ಪಾಟ್‌, UFS 2.2 ಸಂಗ್ರಹಣೆ ಮತ್ತು ಟೈಪ್-ಸಿ ಚಾರ್ಜಿಂಗ್ ಸ್ಲಾಟ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೌಲಭ್ಯ ಕಾಣಬಹುದಾಗಿದೆ.

ಬೆಲೆ, ಆಫರ್‌ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಮೊಬೈಲ್‌ ಆರಂಭಿಕ ಮಾಡೆಲ್‌ ಬೆಲೆಯು 6,299 ರೂ. ಆಗಿದ್ದು, ಫ್ಲಿಪ್‌ಕಾರ್ಟ್‌ನಲ್ಲಿ ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ, ಶೇ 10% ತ್ವರಿತ ರಿಯಾಯಿತಿ ಲಭ್ಯ ಆಗಲಿದೆ. ಇನ್ನು ಈ ಫೋನ್‌ ಸ್ಟಲ್ ಗ್ರೀನ್, ಶೈನಿ ಗೋಲ್ಡ್, ಟಿಂಬರ್ ಬ್ಲಾಕ್ ಮತ್ತು ಗ್ಯಾಲಕ್ಸಿ ವೈಟ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಇಂದು (ಡಿಸೆಂಬರ್ 13 ರಿಂದ) ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟ ಶುರುವಾಗಲಿದೆ.

Best Mobiles in India

English summary
Infinix SMART 8 HD first sale today in India. where to buy, specifications, offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+