ಈ ಎಂಟ್ರಿ ಲೆವೆಲ್ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!..ನೀವು ಖರೀದಿ ಮಾಡ್ತೀರಾ?
ಇನ್ಫಿನಿಕ್ಸ್ ಮೊಬೈಲ್ ಕಂಪನಿಯು ಅಗ್ಗದ ಹಾಗೂ ಬಜೆಟ್ ದರದ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ ಸಂಸ್ಥೆಯ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಎಂಟ್ರಿ ಲೆವೆಲ್‌ನ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ ಶೇ. 22% ರಷ್ಟು ನೇರ ಡಿಸ್ಕೌಂಟ್ ಪಡೆದಿದುಕೊಂಡಿದೆ. ಈ ಫೋನ್ 4 GB RAM + 128 GB ವೇರಿಯಂಟ್ 7,799ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹಾಗೆಯೇ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯ ಇರುವ ಇತರೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಪಡೆದುಕೊಂಡರೆ, ಇನ್ನಷ್ಟು ಅಗ್ಗದಲ್ಲಿ ಫೋನ್ ಲಭ್ಯ ಆಗಲಿದೆ.

ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಎಂಟ್ರಿ ಲೆವೆಲ್ ಫೋನ್ ಎನಿಸಿದರು, ಇದು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ - ಫೀಚರ್ಸ್
ಇನ್ಫಿನಿಕ್ಸ್ ಸಂಸ್ಥೆಯು ಈ ಮೊಬೈಲ್ 6.6 ಇಂಚಿನ ಐಪಿಎಸ್ LCD ಪ್ಯಾನಲ್ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 500 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಅನ್ನು ಒದಗಿಸಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಹಾಗೆಯೇ XOS 13 ಆಧಾರಿತ ಆಂಡ್ರಾಯ್ಡ್ 13 ಗೋ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇನ್ನು ಈ ಫೋನ್ 4GB + 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಆಯ್ಕೆ ಇದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದ್ದು, ಎಐ ಲೆನ್ಸ್ ಮತ್ತು ಕ್ವಾಡ್ ನೇತೃತ್ವದ ಫ್ಲ್ಯಾಷ್ ಅನ್ನು ಪಡೆದಿದೆ. ಹಾಗೆಯೇ ಈ ಫೋನಿನ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಈ ಮೊಬೈಲ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಸಪೋರ್ಟ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ವೈ-ಫೈ 802.11 ಎಸಿ, ಬ್ಲೂಟೂತ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಪಡೆದುಕೊಂಡಿದೆ. ಇದಲ್ಲದೆ ಮೊಬೈಲ್ ಸೈಡ್ ಫೇಸಿಂಗ್ ಫಿಂಗರ್ ಪ್ರಿಂಟ್ ಸೆನ್ಸಾರ್ ನಂತಹ ಆಯ್ಕೆಗಳನ್ನು ಇದು ಒಳಗೊಂಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ 4GB + 128GB ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇನ್ನು ಈ ಫೋನ್ ವೈಟ್, ಗೋಲ್ಡ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆ ಖರೀದಿ ಮಾಡಬಹುದಾಗಿದೆ. ಅಂದಹಾಗೆ ಫ್ಲಿಪ್‌ಕಾರ್ಟ್ ತಾಣದಲ್ಲಿ ಫೋನ್ ಲಭ್ಯ ಇದೆ.


Click it and Unblock the Notifications





