Home
ಸುದ್ದಿಜಾಲ

ಇಂದು ಭಾರತಕ್ಕೆ ಎಂಟ್ರಿ ಕೊಡಲಿದೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್‌!

ಇನ್ಫಿನಿಕ್ಸ್ ಮೊಬೈಲ್‌ ಕಂಪನಿಯ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಇಂದು (ಮಾರ್ಚ್ 1 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಎಂಟ್ರಿ ಲೆವೆಲ್‌ ಮಾದರಿಯಲ್ಲಿರುವ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ಸೌಲಭ್ಯ ಪಡೆದುಕೊಂಡಿದೆ.

ಹೌದು, ಇನ್ಫಿನಿಕ್ಸ್ ಕಂಪನಿಯು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಇದು ಎಂಟ್ರಿ ಲೆವೆಲ್‌ ಫೋನ್‌ ಆಗಿದ್ದರೂ, ಇದರ ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ.

ಇಂದು ಭಾರತಕ್ಕೆ ಎಂಟ್ರಿ ಕೊಡಲಿದೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್‌!

ಇದೇ ರೀತಿ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಇದಲ್ಲದೇ ಈ ಫೋನಿನ ಇನ್ನೊಂದು ಪ್ರಮುಖ ಹೈಲೈಟ್‌ ಎಂದರೆ ಇದು 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೀಚರ್ಸ್‌

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ 6.6 ಇಂಚಿನ ಐಪಿಎಸ್ ಎಲ್ಸಿಡಿ ಪ್ಯಾನಲ್ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 500 ನಿಟ್ಸ್‌ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ನೀಡಲಿದೆ.

ಇಂದು ಭಾರತಕ್ಕೆ ಎಂಟ್ರಿ ಕೊಡಲಿದೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್‌!

ಇನ್ಫಿನಿಕ್ಸ್ ಸಂಸ್ಥೆಯ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದು XOS 13 ಆಧಾರಿತ ಆಂಡ್ರಾಯ್ಡ್ 13 ಗೋ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಹಾಗೂ 4GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದೆ. ಇದಲ್ಲದೆ ಮೆಮೊರ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಆಯ್ಕೆ ಇರಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಎರಡು ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿರಲಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎಐ ಲೆನ್ಸ್ ಮತ್ತು ಕ್ವಾಡ್ ನೇತೃತ್ವದ ಫ್ಲ್ಯಾಷ್ ಅನ್ನು ಪಡೆದಿದೆ. ಇದಲ್ಲದೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನಿನ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಸಹ ಇರಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಸಹ ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G VoLTE, ವೈ-ಫೈ 802.11 ಎಸಿ, ಬ್ಲೂಟೂತ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್‌ ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಪೋನ್‌ ಸೈಡ್‌ ಫೇಸಿಂಗ್‌ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ನಂತಹ ಆಯ್ಕೆಗಳನ್ನು ಇದು ಒಳಗೊಂಡಿರಲಿದೆ.

Best Mobiles in India

English summary
Infinix Smart 8 Plus India launch today. check price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+