ನಾಳೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಲಾಂಚ್!..ಅಗ್ಗದ ಬೆಲೆ, ಆಕರ್ಷಕ ಫೀಚರ್ಸ್!
ಇನ್ಫಿನಿಕ್ಸ್ ಸಂಸ್ಥೆಯ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 1 ರಂದು) ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಅಂದಹಾಗೆ ಸಂಸ್ಥೆಯು ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಮಾದರಿಯಲ್ಲಿ ಇದ್ದು, 8000ರೂ. ಗಳ ಒಳಗೆ ಬಿಡುಗಡೆ ಆಗುವ ಸೂಚನೆ ನೀಡಿದೆ.
ಹೌದು, ಇನ್ಫಿನಿಕ್ಸ್ ಕಂಪನಿಯು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ ಅನ್ನು ನಾಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಎಂಟ್ರಿ ಲೆವೆಲ್ ಫೋನ್ ಆಗಿದ್ದರೂ, ಇದರ ಕೆಲವು ಫೀಚರ್ಸ್‌ಗಳು ಗ್ರಾಹಕರ ಗಮನ ಸೆಳೆಯುವಂತಿವೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೌಲಭ್ಯ ಪಡೆದಿರುವ ಈ ಫೋನಿನ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇದಲ್ಲದೇ ಈ ಫೋನಿನ ಇನ್ನೊಂದು ಪ್ರಮುಖ ಹೈಲೈಟ್ ಎಂದರೆ ಇದು 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗೆಯೇ 4GB RAM ಮತ್ತು 64 GB ಹಾಗೂ 4GB RAM ಮತ್ತು 128 GB ಆಂತರೀಕ ಸ್ಟೋರೇಜ್ ಆಯ್ಕೆ ಇರಲಿದೆ. ಇನ್ನುಳಿದಂತೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೀಚರ್ಸ್ ಮಾಹಿತಿ
ಇನ್ಫಿನಿಕ್ಸ್ ಈ ಮೊಬೈಲ್ 6.6 ಇಂಚಿನ ಐಪಿಎಸ್ ಎಲ್ಸಿಡಿ ಪ್ಯಾನಲ್ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತ ವನ್ನು ಒಳಗೊಂಡಿದ್ದು, ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 500 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಅನ್ನು ಒದಗಿಸಲಿದೆ.

ಇನ್ಫಿನಿಕ್ಸ್ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದು XOS 13 ಆಧಾರಿತ ಆಂಡ್ರಾಯ್ಡ್ 13 ಗೋ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಹಾಗೂ 4GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದೆ. ಇದಲ್ಲದೆ ಮೆಮೊರ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಆಯ್ಕೆ ಇರಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಎಐ ಲೆನ್ಸ್ ಮತ್ತು ಕ್ವಾಡ್ ನೇತೃತ್ವದ ಫ್ಲ್ಯಾಷ್ ಅನ್ನು ಪಡೆದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಸಹ ಇರಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G VoLTE, ವೈ ಫೈ 802.11 ಎಸಿ, ಬ್ಲೂಟೂತ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಪೋನ್ ಸೈಡ್ ಫೇಸಿಂಗ್ ಫಿಂಗರ್ ಪ್ರಿಂಟ್ ಸೆನ್ಸಾರ್ ನಂತಹ ಆಯ್ಕೆಗಳನ್ನು ಇದು ಪಡೆದಿರಲಿದೆ.


Click it and Unblock the Notifications








