Home
ಸುದ್ದಿಜಾಲ

ಅಗ್ಗದ ಬೆಲೆಗೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್‌ ಲಾಂಚ್‌!..ಬಿಗ್‌ ಬ್ಯಾಟರಿ ಸೌಲಭ್ಯ!

ಇನ್ಫಿನಿಕ್ಸ್ ಸಂಸ್ಥೆಯ ಬಹುನಿರೀಕ್ಷಿತ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಇಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಫೋನ್‌ ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಇದ್ದು, 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ನೊಂದಿಗೆ ಲಗ್ಗೆ ಇಟ್ಟಿದೆ.

ಹೌದು, ಇನ್ಫಿನಿಕ್ಸ್ ಕಂಪನಿಯು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ.

ಅಗ್ಗದ ಬೆಲೆಗೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್‌ ಲಾಂಚ್‌!..ಬಿಗ್‌ ಬ್ಯಾಟರಿ

ಹಾಗೆಯೇ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೌಲಭ್ಯ ಪಡೆದಿದ್ದು, 4GB + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ವೈಟ್‌, ಗೋಲ್ಡ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆ ಪಡೆದಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೀಚರ್ಸ್‌ ಹೀಗಿವೆ

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ 6.6 ಇಂಚಿನ ಐಪಿಎಸ್ LCD ಪ್ಯಾನಲ್ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 500 ನಿಟ್ಸ್‌ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ನೀಡಲಿದೆ.

ಇನ್ಫಿನಿಕ್ಸ್ ಸಂಸ್ಥೆಯ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದು XOS 13 ಆಧಾರಿತ ಆಂಡ್ರಾಯ್ಡ್ 13 ಗೋ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 4GB + 128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯ. ಇದಲ್ಲದೆ ಮೆಮೊರ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಆಯ್ಕೆ ಇದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ ಎರಡು ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎಐ ಲೆನ್ಸ್ ಮತ್ತು ಕ್ವಾಡ್ ನೇತೃತ್ವದ ಫ್ಲ್ಯಾಷ್ ಅನ್ನು ಪಡೆದಿದೆ. ಇದಲ್ಲದೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನಿನ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಸಹ ಇದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಸಹ ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G VoLTE, ವೈ-ಫೈ 802.11 ಎಸಿ, ಬ್ಲೂಟೂತ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್‌ ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಪೋನ್‌ ಸೈಡ್‌ ಫೇಸಿಂಗ್‌ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ನಂತಹ ಆಯ್ಕೆಗಳನ್ನು ಇದು ಒಳಗೊಂಡಿದೆ.

ಬೆಲೆ ಹಾಗೂ ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್‌ 4GB + 128GB ವೇರಿಯಂಟ್‌ ಬೆಲೆ 7,799ರೂ. ಆಗಿದೆ. ಆದರೆ ಲಾಂಚ್‌ ಕೊಡುಗೆಯಾಗಿ 800ರೂ. ರಿಯಾಯಿತಿ ಇದ್ದು, ಗ್ರಾಹಕರು 6,999ರೂ. ಗಳಿಗೆ ಪಡೆಯಬಹುದಾಗಿದೆ. ಇನ್ನು ಈ ಫೋನ್‌ ವೈಟ್‌, ಗೋಲ್ಡ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆ ಪಡೆದಿದ್ದು, ಇದೇ ಮಾರ್ಚ್‌ 9 ರಂದು ಸೇಲ್ ಆರಂಭಿಸಲಿದೆ.

Best Mobiles in India

English summary
Infinix Smart 8 Plus launched in India at Rs 6,999. check price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+