ಈ ಫೋನ್ ಲಾಂಚ್‌ಗೆ ಇನ್ನೆರಡೇ ದಿನ ಬಾಕಿ!..ಬೆಲೆ 8000ರೂ. ಒಳಗೆ ಇರಲಿದೆ!
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾದ ಇನ್ಫಿನಿಕ್ಸ್ ಸಂಸ್ಥೆಯು ತನ್ನ ನೂತನ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಈಗ ಭಾರತದಲ್ಲಿ ಲಾಂಚ್ ಮಾಡಲು ಸಜ್ಜಾಗಿದೆ. ಸಂಸ್ಥೆಯು ಈ ಫೋನ್ ಅನ್ನು ಇದೇ ಮಾರ್ಚ್ 1 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಬಿಡುಗಡೆ ಮಾಡುವುದು ಕನ್ಫರ್ಮ್ ಆಗಿದೆ.
ಹೌದು, ಇನ್ಫಿನಿಕ್ಸ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಮಾರ್ಚ್ 1 ರಂದು ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಈ ಫೋನ್ ಈಗಾಗಲೇ ಅನಾವರಣ ಆಗಿದ್ದು, ಇದರ ಫೀಚರ್ಸ್‌ಗಳು ಮೊಬೈಲ್ ಪ್ರಿಯರನ್ನು ಸೆಳೆದಿವೆ. ಅಂದಹಾಗೆ ಇದು ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇದಲ್ಲದೇ ಈ ಫೋನಿನ ಇನ್ನೊಂದು ಪ್ರಮುಖ ಹೈಲೈಟ್ ಎಂದರೆ ಇದು 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೇ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ - ಫೀಚರ್ಸ್
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ 6.6 ಇಂಚಿನ ಐಪಿಎಸ್ ಎಲ್ಸಿಡಿ ಪ್ಯಾನಲ್ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 500 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಅನ್ನು ನೀಡಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದು XOS 13 ಆಧಾರಿತ ಆಂಡ್ರಾಯ್ಡ್ 13 ಗೋ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಹಾಗೂ 4GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದೆ. ಇದಲ್ಲದೆ ಮೆಮೊರ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವನ್ನು ಸಹ ವಿಸ್ತರಿಸುವುದಕ್ಕೆ ಅವಕಾಶ ಸಹ ಇರಲಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಎಐ ಲೆನ್ಸ್ ಮತ್ತು ಕ್ವಾಡ್ ನೇತೃತ್ವದ ಫ್ಲ್ಯಾಷ್ ಅನ್ನು ಪಡೆದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಸಹ ಹೊಂದಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G VoLTE, ವೈ-ಫೈ 802.11 ಎಸಿ, ಬ್ಲೂಟೂತ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಪೋನ್ ಸೈಡ್ ಫೇಸಿಂಗ್ ಫಿಂಗರ್ ಪ್ರಿಂಟ್ ಸೆನ್ಸಾರ್ ನಂತಹ ಆಯ್ಕೆಗಳನ್ನು ಇದು ಒಳಗೊಂಡಿರಲಿದೆ.


Click it and Unblock the Notifications








