Home
ಸುದ್ದಿಜಾಲ

Infinix:ಇನ್ಫಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ ಫೋನ್‌ ಬಿಡುಗಡೆ: ಸಖತ್‌ ಸ್ಟೈಲಿಶ್‌ ಲುಕ್‌!

ಈಗಾಗಲೇ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಸರಣಿ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡಿವೆ. ಇದೀಗ ಈ ಸರಣಿಗೆ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಸೇರ್ಪಡೆ ಆಗಿದೆ. ಇದನ್ನು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಎಂದು ಗುರುತಿಸಲಾಗಿದ್ದು, ಮೀಡಿಯಾಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಇನ್ಫಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ (Infinix Smart 8 Plus) ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ ಫೋನ್‌ ಬಿಡುಗಡೆ: ಸಖತ್‌ ಸ್ಟೈಲಿಶ್‌ ಲುಕ್‌!

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಐಪಿಎಸ್ ಎಲ್ಸಿಡಿ ಪ್ಯಾನಲ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 500 ನಿಟ್ಸ್‌ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ನೀಡಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಪ್ರೊಸೆಸರ್‌ ಯಾವುದು?
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು XOS 13 ಆಧಾರಿತ ಆಂಡ್ರಾಯ್ಡ್ 13 GO ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಹಾಗೂ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ ಫೋನ್‌ ಬಿಡುಗಡೆ: ಸಖತ್‌ ಸ್ಟೈಲಿಶ್‌ ಲುಕ್‌!

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಕ್ಯಾಮೆರಾ ಸೆಟಪ್‌ ಏನಿದೆ?
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎಐ ಲೆನ್ಸ್ ಮತ್ತು ಕ್ವಾಡ್ ನೇತೃತ್ವದ ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ವೈ-ಫೈ 802.11 ಎಸಿ, ಬ್ಲೂಟೂತ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್‌ ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಪೋನ್‌ ಸೈಡ್‌ ಫೇಸಿಂಗ್‌ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಸಹ ಬೆಂಬಲಿಸಲಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ ಫೋನ್‌ ಬಿಡುಗಡೆ: ಸಖತ್‌ ಸ್ಟೈಲಿಶ್‌ ಲುಕ್‌!

ಇನ್ಫಿನಿಕ್ಸ್ ಸ್ಮಾರ್ಟ್ 8 ಬೆಲೆ ಮತ್ತು ಲಭ್ಯತೆ
ಇನ್ಪಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ ಸ್ಮಾರ್ಟ್‌ಫೋನ್‌ನ ಬೆಲೆ ಮತ್ತು ಲಭ್ಯತೆಯನ್ನು ಇನ್ಫಿನಿಕ್ಸ್ ಕಂಪೆನಿ ಇನ್ನೂ ಕೂಡ ದೃಡೀಕರಿಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಟಿಂಬರ್ ಬ್ಲ್ಯಾಕ್, ಗ್ಯಾಲಕ್ಸಿ ವೈಟ್ ಮತ್ತು ಹೊಳೆಯುವ ಚಿನ್ನದಂತಹ ನಾಲ್ಕು ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ. ಇದು ಭಾರತದಲ್ಲಿಯೂ ಕೂಡ ಲಭ್ಯವಿದೆಯಾ, ಇಲ್ಲ ಕೆಲವು ಆಯ್ದ ಮಾರುಕಟ್ಟೆಗಳಲ್ಲಿ ಮಾತ್ರ ಬರಲಿದೆಯಾ ಎಂಬುದರ ಬಗ್ಗೆ ಯಾವುದೆ ಖಚಿತ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Infinix Smart 8 Plus with 6,000mAh battery launched: Specs Details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+