Home
ಸುದ್ದಿಜಾಲ

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಪ್ರೊ: 2TB ಸ್ಟೋರೇಜ್‌ ಆಯ್ಕೆ!

ಇನ್ಫಿನಿಕ್ಸ್‌ ಕಂಪೆನಿ ಮೊಬೈಲ್‌ ಮಾರುಕಟ್ಟೆಗೆ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಸೈಲೆಂಟ್‌ ಆಗಿಯೇ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಪ್ರೊ ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, Infinix Smart 8 Pro ಸ್ಮಾರ್ಟ್‌ಫೋನ್‌ ಸದ್ದಿಲ್ಲದೆ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 128GB ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಪ್ರೊ

Infinix Smart 8 Pro ಡಿಸ್‌ಪ್ಲೇ ರಚನೆ ಏನಿದೆ?
Infinix Smart 8 Pro ಸ್ಮಾರ್ಟ್‌ಫೋನ್‌ 6.66-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720x1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದ್ದು, 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 267 ppi ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದುಕೊಂಡಿದೆ.

Infinix Smart 8 Pro ಪ್ರೊಸೆಸರ್‌ ಯಾವುದು?
Infinix Smart 8 Pro ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 (ಗೋ ಎಡಿಷನ್) ನಲ್ಲಿ ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 64GB ಅಥವಾ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಅಯ್ಕೆಯನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಪ್ರೊ

Infinix Smart 8 Pro ಕ್ಯಾಮೆರಾ ಸೆಟಪ್‌ ಏನಿದೆ?
Infinix Smart 8 Pro ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ನಲ್ಲಿದೆ. ಇದರ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ AI ಲೆನ್ಸ್ ಜೊತೆಗೆ ಬರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Infinix Smart 8 Pro ಬ್ಯಾಟರಿ ಮತ್ತು ಇತರೆ
Infinix Smart 8 Pro ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 5, ಬ್ಲೂಟೂತ್ 5, USB ಟೈಪ್-C ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಗೈರೊಸ್ಕೋಪ್, ಇ-ದಿಕ್ಸೂಚಿ, ವೇಗವರ್ಧಕ, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಸಹ ಪಡೆದಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಪ್ರೊ

Infinix Smart 8 Pro ಬೆಲೆ ಮತ್ತು ಲಭ್ಯತೆ
Infinix Smart 8 Pro ಸ್ಮಾರ್ಟ್‌ಫೋನ್‌ ಬೆಲೆಯನ್ನು ಕಂಪನಿಯು ಇನ್ನೂ ಬಹಿರಂಗಪಡಿಸಿಲ್ಲ. ಆದರೆ ಇದು ಗ್ಯಾಲಕ್ಸಿ ವೈಟ್, ರೇನ್ಬೋ ಬ್ಲೂ, ಶೈನಿ ಗೋಲ್ಡ್ ಮತ್ತು ಟಿಂಬರ್ ಬ್ಲಾಕ್ ಬಣ್ಣಗಳ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಮುಂಬರುವ ದಿನಗಳಲ್ಲಿ ಹ್ಯಾಂಡ್‌ಸೆಟ್‌ನ ಬೆಲೆ ಮತ್ತು ಲಭ್ಯತೆಯ ಬಗ್ಗೆ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

Best Mobiles in India

English summary
Infinix Smart 8 Pro With 5,000mAh Battery Launched: Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+