Home
ಸುದ್ದಿಜಾಲ

ಅಗ್ಗದ ಈ ಫೋನ್‌ ಈಗ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ!..ಒಳ್ಳೆಯ ಚಾನ್ಸ್‌!

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ವೆಬ್‌ಸೈಟ್‌ನಲ್ಲಿ ( Flipkart ) ಸ್ಮಾರ್ಟ್‌ಫೋನ್‌ಗಳು ಒಂದಿಲ್ಲೊಂದು ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುತ್ತವೆ. ಇದೀಗ ಅಗ್ಗದ ಇನ್ಫಿನಿಕ್ಸ್ ಸ್ಮಾರ್ಟ್ 8 ( Infinix SMART 8 ) ಸ್ಮಾರ್ಟ್‌ಫೋನ್‌ ಸಖತ್ ಡಿಸ್ಕೌಂಟ್‌ ಪಡೆದಿದ್ದು, ಮತ್ತಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಹೀಗಾಗಿ ಗ್ರಾಹಕರು OMG ಎಂದು ಹುಬ್ಬೇರಿಸುವಂತೆ ಆಗಿದೆ.

ಹೌದು, ಫ್ಲಿಪ್‌ಕಾರ್ಟ್‌ (Flipkart) ತಾಣದಲ್ಲಿ ಇದೀಗ ಇನ್ಫಿನಿಕ್ಸ್ ಸ್ಮಾರ್ಟ್ 8 ( Infinix SMART 8 ) ಸ್ಮಾರ್ಟ್‌ಫೋನ್‌ ಶೇ. 27% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 4GB RAM + 64GB ವೇರಿಯಂಟ್‌ 7,999ರೂ. ಗಳ ಬೊಂಬಾಟ್‌ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಎಕ್ಸ್‌ಚೇಂಜ್ ಆಫರ್‌ ಸಹ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿ ಮಾಡಬಹುದು.

ಅಗ್ಗದ ಈ ಫೋನ್‌ ಈಗ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ!..ಒಳ್ಳೆಯ ಚಾನ್ಸ್

ಅಂದಹಾಗೆ ಈ ಫೋನಿನ ಮೊದಲ ಕ್ಯಾಮೆರಾವು 32 ಮೆಗಾಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಅಲ್ಲದೇ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗೆಯೇ ಇದು 8GB RAM ಮತ್ತು 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಹಾಗಾದರೇ ಇನ್ಫಿನಿಕ್ಸ್ ಸ್ಮಾರ್ಟ್ 8 ( Infinix SMART 8 ) ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 8 - ಫೀಚರ್ಸ್‌ ಮಾಹಿತಿ

ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್ 1612 x 720 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ನ HD+ ರೆಸಲ್ಯೂಶನ್ ಮತ್ತು 90Hz ರಿಫ್ರೆಶ್ ರೇಟ್ ಆಯ್ಕೆ ಹಾಗೂ 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿರುವ 6.6 ಇಂಚಿನ IPS LCD ಡಿಸ್‌ಪ್ಲೆ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಸೆಲ್ಫಿ ಉದ್ದೇಶಕ್ಕೆ ಪಂಚ್ ಹೋಲ್ ಆಯ್ಕೆ ನೀಡಲಾಗಿದೆ. ಅಲ್ಲದೆ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ನೀಡಲಾಗಿದ್ದು, ಉತ್ತಮ ವೀಕ್ಷಣೆ ಅನುಭವ ನೀಡಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಫೋನ್ ಮೀಡಿಯಾ ಟೆಕ್ ಹಿಲಿಯೋ G36 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, 4GB LPDDR4x RAM ಮತ್ತು 64GB ಆಂತರೀಕ ಸ್ಟೋರೇಜ್‌ನೊಂದಿಗೆ ಲಭ್ಯ ಇದೆ. ಈ ಫೋನ್‌ ನಲ್ಲಿ ನೀವು 2TB ವರೆಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು ಸ್ಟೋರೇಜ್‌ ಅನ್ನು ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಡ್ಯುಯಲ್ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 50 ಮೆಗಾ ಪಿಕ್ಸೆಲ್ ಎಫ್/1.8 ಅಪರ್ಚರ್ ಪ್ರೈಮರಿ ಕ್ಯಾಮೆರಾ ಸೆನ್ಸಾರ್ ಹಾಗೂ ಎಫ್/2.0 ಅಪರ್ಚರ್ ಹೊಂದಿರುವ ಎಐ ಲೆನ್ಸ್ ಹೊಂದಿದೆ. ಅಲ್ಲದೇ LED ಫ್ಲ್ಯಾಶ್ ಮಾಡ್ಯೂಲ್ ಸಹ ಇದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾ ಪಿಕ್ಸೆಲ್ f/2.0 ಅಪರ್ಚರ್ ಕ್ಯಾಮೆರಾ ಪಡೆದಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, 10W ಚಾರ್ಜಿಂಗ್‌ ಬೆಂಬಲ ಪಡೆದಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಎಐ ಫೇಸ್ ಅನ್‌ಲಾಕ್‌ಗೆ ಸಪೋರ್ಟ್‌ ಅನ್ನು ನೀಡಲಿದ್ದು, ವೈ-ಫೈ 5, ಜಿಪಿಎಸ್‌, ಬ್ಲೂಟೂತ್ ಆವೃತ್ತಿ v5.0, ಯುಎಸ್‌ಬಿ ಟೈಪ್‌ - ಸಿ ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಕನೆಕ್ಟಿವಿಟಿ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಇದು ಟಿಂಬರ್ ಬ್ಲಾಕ್, ಶೈನಿ ಗೋಲ್ಡ್, ರೇನ್‌ಬೋ ಬ್ಲೂ ಮತ್ತು ಗ್ಯಾಲಕ್ಸಿ ವೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
Infinix SMART 8 received price cut in India. Check offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+