infinix: ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಇನ್ಫಿನಿಕ್ಸ್ ಸ್ಮಾರ್ಟ್ 8:.ಫೀಚರ್ಸ್ ಮಾತ್ರ ಬೆಂಕಿ
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್ ಫೋನ್‌ಗಳಿಗೆ ವಿಶೇಷ ಸ್ಥಾನವಿದೆ. ಬೆಲೆ ಕಡಿಮೆಯಾದರೂ ಅದ್ದೂರಿ ಫೀಚರ್ಸ್‌ಗಳಿಗೆ ಇನ್ಫಿನಿಕ್ಸ್ ಫೋನ್‌ಗಳು ಹೆಸರುವಾಸಿಯಾಗಿವೆ. ಇದೀಗ ಅದೇ ಹಾದಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಸ್ಮಾರ್ಟ್ 8 ಅನ್ನು ಪರಿಚಯಿಸಲು ತಯಾರಿ ನಡೆಸಿದೆ. ಈ ಫೋನ್ ಜನವರಿಯಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ.
ಹೌದು, ಇನ್ಫಿನಿಕ್ಸ್ (infinix) ಕಂಪೆನಿ ಭಾರತದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಸ್ಮಾರ್ಟ್‌ಫೋನ್ 2024ರ ಜನವರಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್ನು ಈ ಡಿವೈಸ್ ಮರದ ಟೆಕ್ಸ್ಚರ್ಡ್ ಬ್ಯಾಕ್ ಪ್ಯಾನೆಲ್‌ನೊಂದಿಗೆ ವಿಶೇಷ ಆವೃತ್ತಿಯಲ್ಲಿ ಪ್ರಾರಂಭವಾಗಲಿದೆ. ಇದರ ಭಾರತೀಯ ರೂಪಾಂತರವು 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 8 ಡಿಸ್‌ಪ್ಲೇ ರಚನೆ ನಿರೀಕ್ಷೆ?
ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್ 6.6 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದು 90% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 500 ನಿಟ್ಸ್ ಬ್ರೈಟ್‌ನೆಸ್ ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್ ಯುನಿಸೋಕ್ T606 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ARM ಮಾಲಿ-G57 MP1 GPU ಸಪೋರ್ಟ್ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್13 Go ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಹಾಗೂ 4GB RAM ಮತ್ತು 128GB ಸ್ಟೋರೇಜ್ ವೇರಿಯೆಂಟ್ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾದ ವಿವರಗಳು ಬಹಿರಂಗವಾಗಿಲ್ಲ. ಇನ್ನು ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ 5.0, GPS, USB ಟೈಪ್ C 2.0 ಅನ್ನು ಒಳಗೊಂಡಿದೆ. ಇದಲ್ಲದೆ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ಅನ್ನು ಪಡೆದುಕೊಂಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 8 ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್ ಭಾರತದಲ್ಲಿ ಯಾವ ಬೆಲೆಗೆ ಬರಲಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಆದರೆ ಇದು ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ನಿರೀಕ್ಷೆಯನ್ನು ಇಡಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಟಿಂಬರ್ ಬ್ಲಾಕ್, ಶೈನಿ ಗೋಲ್ಡ್, ಕ್ರಿಸ್ಟಲ್ ಗ್ರೀನ್, ಗ್ಯಾಲಕ್ಸಿ ವೈಟ್ ಕಲರ್ ಆಯ್ಕೆಗಳಲ್ಲಿ ದೊರೆಯಲಿದೆ. ಇನ್ನು ಸ್ಮಾರ್ಟ್‌ಫೋನ್ ಜನವರಿ ತಿಂಗಳ ಮಧ್ಯಭಾಗದಲ್ಲಿ ಬಿಡುಗಡೆ ಆಗುವ ಸಾಧ್ಯತೆಯಿದೆ.


Click it and Unblock the Notifications








