Home
ಸುದ್ದಿಜಾಲ

ಇನ್ಫಿನಿಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌! ಬಜೆಟ್‌ ಬೆಲೆಯಲ್ಲಿ ಅದ್ದೂರಿ ಫೀಚರ್ಸ್!

ಇನ್ಫಿನಿಕ್ಸ್‌ ಸಂಸ್ಥೆ ತನ್ನ ಬಜೆಟ್‌ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ಧಿ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸಿಕ್ಕಾಪಟ್ಟೆ ಸದ್ದು ಕೂಡ ಮಾಡುತ್ತಿದೆ. ಇದೀಗ ತನ್ನ ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಗ್ರೇಡಿಯಂಟ್ ಬ್ಯಾಕ್ ಪ್ಯಾನೆಲ್ ಅನ್ನು ಹೊಂದಿದೆ.

ಹೌದು, ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಫೋನ್‌ ಗ್ಲೋಬಲ್‌ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಮೂಲಕ ಎಂಟ್ರಿ ನೀಡಿದ್ದು, ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಸ್ಕ್ವಾರಿಶ್ ಕ್ಯಾಮೆರಾ ಮಾಡ್ಯೂಲ್ ಹೊಂದಿರುವುದು ಮೇನ್‌ ಹೈಲೈಟ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್‌ನಿಂದ ಹೊಸ ಫೋನ್‌ ಲಾಂಚ್‌! ಬಜೆಟ್‌ ಬೆಲೆಯಲ್ಲಿ ಅದ್ದೂರಿ ಫೀಚರ್ಸ್!

ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 550 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದು ಮಧ್ಯದಲ್ಲಿ ಜೋಡಿಸಲಾದ ಪಂಚ್-ಹೋಲ್ ಕ್ಯಾಮೆರಾ ಕಟೌಟ್ ಅನ್ನು ಹೊಂದಿದೆ. ಇದನ್ನು ಇನ್ಫಿನಿಕ್ಸ್‌ ಕಂಪೆನಿ ಮ್ಯಾಜಿಕ್ ರಿಂಗ್ ಎಂದು ಉಲ್ಲೇಖಿಸಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಪ್ರೊಸೆಸರ್‌ ಯಾವುದು?
ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಸ್ಮಾರ್ಟ್‌ಫೋನ್‌ ಯುನಿಸಾಕ್ T606 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು XOS 13-ಆಧಾರಿತ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಜೊತೆಗೆ 4GB ವರ್ಚುವಲ್ RAM ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ಫಿನಿಕ್ಸ್‌ನಿಂದ ಹೊಸ ಫೋನ್‌ ಲಾಂಚ್‌! ಬಜೆಟ್‌ ಬೆಲೆಯಲ್ಲಿ ಅದ್ದೂರಿ ಫೀಚರ್ಸ್!

ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ 13 ಮೆಗಾಪಿಕ್ಸೆಲ್‌ ಮೇನ್‌ ಕ್ಯಾಮೆರಾ ಜೊತೆಗೆ VGA ಡೆಪ್ತ್ ಹೆಲ್ಪರ್‌ ಅನ್ನು ಹೊಂದಿದೆ. ಇದರೊಂದಿಗೆ LED ಫ್ಲ್ಯಾಷ್ ಅನ್ನು ಸಹ ನೀಡಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದ್ದು, ಯುಎಸ್‌ಬಿ ಟೈಪ್‌ ಸಿ ಮೂಲಕ ಚಾರ್ಜ್‌ ಮಾಡಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತಹ ಚಾರ್ಜಿಂಗ್ ಮತ್ತು ಸ್ಟೇಟಸ್‌ ಅಪ್ಡೇಟ್‌ಗಳನ್ನು ನೀಡಲಿದೆ. ಜೊತೆಗೆ ಪವರ್ ಬಟನ್‌ನಲ್ಲಿ ಎಂಬೆಡ್ ಮಾಡಲಾದ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.

ಇನ್ಫಿನಿಕ್ಸ್‌ನಿಂದ ಹೊಸ ಫೋನ್‌ ಲಾಂಚ್‌! ಬಜೆಟ್‌ ಬೆಲೆಯಲ್ಲಿ ಅದ್ದೂರಿ ಫೀಚರ್ಸ್!

ಇನ್ಫಿನಿಕ್ಸ್ ಸ್ಮಾರ್ಟ್ 8 ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 8 ಸ್ಮಾರ್ಟ್‌ಫೋನ್‌ ಪ್ರಸ್ತುತ ನೈಜೀರಿಯಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಆದರಿಂದ ನೈಜೀರಿಯಾದಲ್ಲಿ ಇದರ ಬೆಲೆ NGN 82,000 (ಅಂದಾಜು 8,501ರೂ)ಆಗಿದೆ. ಇದನ್ನು ಟಿಂಬರ್ ಬ್ಲಾಕ್, ಗ್ಯಾಲಕ್ಸಿ ವೈಟ್, ಕ್ರಿಸ್ಟಲ್ ಗ್ರೀನ್ ಮತ್ತು ಶೈನಿ ಗೋಲ್ಡ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ. ಇದು ಭಾರತದಲ್ಲಿ ಬಿಡುಗಡೆ ಆಗುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಇನ್ನು ಇತ್ತೀಚಿಗೆ ಇ-ಕಾಮರ್ಸ್‌ ಸೈಟ್‌ಗಳಲ್ಲಿ ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್‌ಗೆ ಬಿಗ್‌ ಆಫರ್‌ ನೀಡಲಾಗ್ತಿದೆ. ಈ ಫೋನ್‌ನ ಸಾಮಾನ್ಯ ದರ 27,999 ರೂ.ಗಳಾಗಿದ್ದು, ಇದನ್ನು ನೀವು ಈಗ 23,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಫ್ಲಿಪ್‌ಕಾರ್ಟ್‌ನಲ್ಲಿ 14% ರಿಯಾಯಿತಿಯಲ್ಲಿ ಲಭ್ಯ ಇದೆ. ಇಷ್ಟೇ ಅಲ್ಲದೆ ಇನ್ನೂ ವಿವಿಧ ಬ್ಯಾಂಕ್‌ ಆಫರ್ ಸಹ ಇದ್ದು, ಈ ಮೂಲಕ ಇನ್ನೂ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬಹುದಾಗಿದೆ. ಅದರಲ್ಲೂ ವಿನಿಮಯ ಆಫರ್‌ನಲ್ಲಿ 22,000 ರೂ.ವರೆಗೆ ಉಳಿತಾಯ ಮಾಡಬಹುದಾಗಿದೆ.

Best Mobiles in India

English summary
Infinix Smart 8 With squarish camera module Launched: Price Detail in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+