Home
ಸುದ್ದಿಜಾಲ

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಎಂಟ್ರಿಗೆ ಮುಹೂರ್ತ ಫಿಕ್ಸ್‌! ಈ ಭಾರಿ ಧೂಳೆಬ್ಬಿಸೋದು ಗ್ಯಾರಂಟಿ!

ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಟ್ರೆಂಡ್‌ ಸೃಷ್ಟಿಸಿರುವ ಬ್ರ್ಯಾಂಡ್‌ಗಳಲ್ಲಿ ಇನ್ಫಿನಿಕ್ಸ್‌ ಮುಂಚೂಣಿಯಲ್ಲಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಇನ್ಫಿನಿಕ್ಸ್‌ ಮೊಬೈಲ್‌ ಪ್ರಿಯರ ಗಮನಸೆಳೆದಿದೆ. ಇದೀಗ ತನ್ನ ಮತ್ತೊಂದು ಬಜೆಟ್‌ ಸ್ಮಾರ್ಟ್‌ಫೋನ್‌ ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಬಿಡುಗಡೆಗೆ ಸಕಲ ತಯಾರಿಯನ್ನು ನಡೆಸಿದೆ.

ಹೌದು, ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಇನ್ಫಿನಿಕ್ಸ್‌ ಕಂಪೆನಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿರುವಂತೆ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಡಿಸೆಂಬರ್ 8 ರಂದು ಬಿಡುಗಡೆಯಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ ಯುನಿಸೊಕ್ T606 ಪ್ರೊಸೆಸರ್‌ನೊಂದಿಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಎಂಟ್ರಿಗೆ ಮುಹೂರ್ತ ಫಿಕ್ಸ್‌!

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಡಿಸ್‌ಪ್ಲೇ ರಚನೆ ಸಾಧ್ಯತೆ
ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಜೊತೆಗೆ ಡಿಸ್‌ಪ್ಲೇ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಪ್ರೊಸೆಸರ್‌ ಯಾವುದು?
ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಯುನಿಸೊಕ್ T606 ಪ್ರೊಸೆಸರ್‌ನೊಂದಿಗೆ ಬರಬಹುದು ಎಂದು ವರದಿಯಾಗಿದೆ. ಇದು ಆಂಡ್ರಾಯ್ಡ್‌13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ 4GB ವರ್ಚುವಲ್ RAM ಹಾಗೂ ಮೈಕ್ರೊ SD ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಪಡೆದಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಎಂಟ್ರಿಗೆ ಮುಹೂರ್ತ ಫಿಕ್ಸ್‌!

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?
ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಡ್ಯುಯಲ್‌ ರಿಯರ್‌ ಕ್ಯಾಮೆರಾ ದೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13  ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ VGA ಕ್ಯಾಮೆರಾ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿರಲಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಬ್ಯಾಟರಿ ಮತ್ತು ಇತರೆ ಸೌಲಭ್ಯ
ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯದ ಬೆಂಬಲದೊಂದಿಗೆ ಬರಲಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುವ ನಿರೀಕ್ಷೆಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್‌, ಹಾಟ್‌ಸ್ಪಾಟ್‌, UFS 2.2 ಸಂಗ್ರಹಣೆ ಮತ್ತು ಟೈಪ್-ಸಿ ಚಾರ್ಜಿಂಗ್ ಸ್ಲಾಟ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿರಲಿದೆ.

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಎಂಟ್ರಿಗೆ ಮುಹೂರ್ತ ಫಿಕ್ಸ್‌!

ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಬೆಲೆ ಮತ್ತು ಲಭ್ಯತೆ ನಿರೀಕ್ಷೆ?
ಇನ್ಫಿನಿಕ್ಸ್‌ ಸ್ಮಾರ್ಟ್‌ 8HD ಸ್ಮಾರ್ಟ್‌ಫೋನ್‌ ಡಿಸೆಂಬರ್ 8 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಇದರ ಬೇಸ್‌ ಮಾಡೆಲ್‌ 5,999ರೂ. ಬೆಲೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಸ್ಟಲ್ ಗ್ರೀನ್, ಶೈನಿ ಗೋಲ್ಡ್, ಟಿಂಬರ್ ಬ್ಲಾಕ್ ಮತ್ತು ಗ್ಯಾಲಕ್ಸಿ ವೈಟ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

ಇದಲ್ಲದೆ ಇನ್ಫಿನಿಕ್ಸ್‌ ಕಂಪೆನಿ ಇತ್ತೀಚಿಗೆ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಫೋನ್‌ ಅನ್ನು ಗ್ಲೋಬಲ್‌ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿತ್ತು. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಮೂಲಕ ಎಂಟ್ರಿ ನೀಡಿದ್ದು, ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಸ್ಕ್ವಾರಿಶ್ ಕ್ಯಾಮೆರಾ ಮಾಡ್ಯೂಲ್ ಹೊಂದಿರುವುದು ಮೇನ್‌ ಹೈಲೈಟ್‌ ಆಗಿದೆ.

Best Mobiles in India

English summary
Infinix Smart 8HD Smartphone To Launch In India On December 6
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+