ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ಅತೀ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್!
ಇನ್ಫಿನಿಕ್ಸ್ ಮೊಬೈಲ್ ಸಂಸ್ಥೆಯು ಅಗ್ಗದ ಬೆಲೆಯ ಫೋನ್‌ಗಳ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಸಂಸ್ಥೆಯ HD ಸರಣಿಯಲ್ಲಿ ಕೆಲವು ಫೋನ್‌ಗಳನ್ನು ಪರಿಚಯಿಸಿದ್ದು, ಅದರ ಮುಂದುವರಿದ ಭಾಗವಾಗಿ ಸಂಸ್ಥೆಯು ಈಗ ಭಾರತದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 8HD ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.
ಹೌದು, ಇನ್ಫಿನಿಕ್ಸ್ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ನೂತನವಾಗಿ ಇನ್ಫಿನಿಕ್ಸ್ ಸ್ಮಾರ್ಟ್ 8HD ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಯುನಿಸೊಕ್ T606 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ.

ಹಾಗೆಯೇ ಈ ಇನ್ಫಿನಿಕ್ಸ್ ಸ್ಮಾರ್ಟ್ 8HD ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಇನ್ನುಳಿದಂತೆ ಈ ಇನ್ಫಿನಿಕ್ಸ್ ಸ್ಮಾರ್ಟ್ 8HD ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ. ಮುಂದೆ ಓದಿರಿ.
ಡಿಸ್‌ಪ್ಲೇ ರಚನೆಯ ಮಾಹಿತಿ
ಇನ್ಫಿನಿಕ್ಸ್ ಸ್ಮಾರ್ಟ್ 8HD ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.

ಯಾವ ಪ್ರೊಸೆಸರ್ ಸೌಲಭ್ಯ ಇದೆ
ಇನ್ಫಿನಿಕ್ಸ್ ಸ್ಮಾರ್ಟ್ 8HD ಫೋನ್ ಯುನಿಸೊಕ್ T606 ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದು ಆಂಡ್ರಾಯ್ಡ್13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6 GB RAM ಮತ್ತು 64GB ಆಂತರೀಕ ಸ್ಟೊರೇಜ್ ಸಾಮರ್ಥ್ಯದ ಆಯ್ಕೆ ಕೂಡಾ ಪಡೆದುಕೊಂಡಿದೆ. ಇದಲ್ಲದೆ 4GB ವರ್ಚುವಲ್ RAM ಹಾಗೂ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 2TB ವರೆಗೂ ವಿಸ್ತರಿಸುವುದಕ್ಕೆ ಅವಕಾಶವನ್ನು ಪಡೆದಿದೆ.

ಡ್ಯುಯಲ್ ಕ್ಯಾಮೆರಾ ರಚನೆ
ಇನ್ಫಿನಿಕ್ಸ್ ಸ್ಮಾರ್ಟ್ 8HD ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ VGA ಕ್ಯಾಮೆರಾ ಸೆನ್ಸಾರ್ ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಬಿಗ್ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಇನ್ಫಿನಿಕ್ಸ್ ಸ್ಮಾರ್ಟ್ 8HD ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಸಾಮರ್ಥ್ಯದ ಸಪೋರ್ಟ್ ಅನ್ನು ಪಡೆದಿದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಅನ್ನು ಬೆಂಬಲ ನೀಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈಫೈ, ಬ್ಲೂಟೂತ್, ಹಾಟ್‌ಸ್ಪಾಟ್, UFS 2.2 ಸಂಗ್ರಹಣೆ ಮತ್ತು ಟೈಪ್-ಸಿ ಚಾರ್ಜಿಂಗ್ ಸ್ಲಾಟ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಇದೆ.
ಬೆಲೆ ಎಷ್ಟು ಮತ್ತು ಲಭ್ಯತೆ ಮಾಹಿತಿ
ಇನ್ಫಿನಿಕ್ಸ್ ಸ್ಮಾರ್ಟ್ 8HD ಮೊಬೈಲ್ ಬೇಸ್ ಮಾಡೆಲ್ ಬೆಲೆಯು 6,299 ರೂ. ಬೆಲೆಯನ್ನು ಪಡೆದಿದ್ದು, ಇದೇ ಡಿಸೆಂಬರ್ 13 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಫೋನ್ ಸ್ಟಲ್ ಗ್ರೀನ್, ಶೈನಿ ಗೋಲ್ಡ್, ಟಿಂಬರ್ ಬ್ಲಾಕ್ ಮತ್ತು ಗ್ಯಾಲಕ್ಸಿ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಫ್ಲಿಪ್‌ಕಾರ್ಟ್‌ನಲ್ಲಿ ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ, ಶೇ 10% ತ್ವರಿತ ರಿಯಾಯಿತಿ ಪಡೆಯಬಹುದಾಗಿದೆ.


Click it and Unblock the Notifications








