ಇನ್ಫಿನಿಕ್ಸ್ ಸ್ಮಾರ್ಟ್ ಹೆಚ್‌ಡಿ 2021 ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ 5,999 ರೂ.!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಇನ್ಫಿನಿಕ್ಸ್‌ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವಿಧಧ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಇನ್ಫಿನಿಕ್ಸ್‌ ಇದೀಗ ತನ್ನ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ ಹೆಚ್‌ಡಿ 2021 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಡಿಸೆಂಬರ್ 24 ರಿಂದ ಫ್ಲಿಪ್ಕಾರ್ಟ್ ಮೂಲಕ ಲಭ್ಯವಾಗಲಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ತನ್ನ ಇನ್ಫಿನಿಕ್ಸ್ ಸ್ಮಾರ್ಟ್ ಹೆಚ್‌ಡಿ 2021 ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಇದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿದ್ದು, 6.1 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಇನ್ಫಿನಿಕ್ಸ್ ಸ್ಮಾರ್ಟ್ ಹೆಚ್ಡಿ 2021 ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.1-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡ್ರಾಪ್-ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ ಅನ್ನು ನೀಡುತ್ತದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 (ಗೋ ಆವೃತ್ತಿ) ಬೆಂಬಲದೊಂದಿಗೆ XOS v6.2 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 2GB RAM ಮತ್ತು 32GB ಆನ್‌ಬೋರ್ಡ್ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ಫಿನಿಕ್ಸ್ ಸ್ಮಾರ್ಟ್ ಹೆಚ್‌ಡಿ 2021 ಡ್ಯುಯಲ್ ಫ್ಲ್ಯಾಷ್ ಹೊಂದಿರುವ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದು ಆಟೋ ಸೀನ್ ಡಿಟೆಕ್ಷನ್ ವೈಶಿಷ್ಟ್ಯವನ್ನು ಸಹ ಹೊಂದಿದೆ, ಜೊತೆಗೆ ಒಂಬತ್ತು ವಿಭಿನ್ನ ರೀತಿಯ ಹೊರಾಂಗಣ ಸನ್ನಿವೇಶಗಳನ್ನು ಕಂಡುಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗಿದೆ. 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಕಂಪನಿಯು 28 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ. ಇದು ಡಿಟಿಎಸ್-ಹೆಚ್‌ಡಿ ಸರೌಂಡ್ ಸೌಂಡ್ ಫೀಚರ್ಸ್‌ ಅನ್ನು ಹೊಂದಿದೆ. ಜೊತೆಗೆ ಡ್ಯುಯಲ್ ಎಲ್ಇಡಿ ಫ್ಲ್ಯಾಷ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್ ಸ್ಮಾರ್ಟ್ ಹೆಚ್‌ಡಿ 2021 ಸ್ಮಾರ್ಟಫೋನ್‌ ಬೆಲೆ 5,999 ರೂ. ಆಗಿದೆ. ಇದು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ನಲ್ಲಿ ಡಿಸೆಂಬರ್ 24 ರಂದು ಮಧ್ಯಾಹ್ನ 12 ಗಂಟೆಗೆ ಸೇಲ್‌ ಆಗಲಿದೆ. ಇದು ಟೋಪಾಜ್ ಬ್ಲೂ, ಕ್ವಾರ್ಟ್ಜ್ ಗ್ರೀನ್ ಮತ್ತು ಅಬ್ಸಿಡಿಯನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Infinix Smart HD 2021 smartphone has been launched in India and it will be available from December 24 via Flipkart.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X