Home
ಸುದ್ದಿಜಾಲ

108ಎಂಪಿ ಕ್ಯಾಮೆರಾದ ಈ ಫೋನ್‌ ಇಂದಿನಿಂದ ಖರೀದಿಗೆ ಲಭ್ಯ!..ಬಿಗ್‌ ಬ್ಯಾಟರಿ ಇದೆ!

ಇನ್ಫಿನಿಕ್ಸ್‌ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಡಿ 28) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ಇನ್ಫಿನಿಕ್ಸ್‌ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಲಿದೆ. ಇನ್ನು ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 15,999 ರೂ. ಆಗಿದೆ.

ಜಿರೋ 20 ಸ್ಮಾರ್ಟ್‌ಫೋನಿನ

ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಇದು ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಹಾಗೆಯೇ 4500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೆ ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ಜಿರೋ 20: ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಇನ್ಫಿನಿಕ್ಸ್‌ ಜಿರೋ 20: ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು ಡ್ಯೂಡ್ರಾಪ್ ನಾಚ್‌ನೊಂದಿಗೆ ಬರಲಿದೆ. ಇದು ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್‌ ಜಿರೋ 20: ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್‌

ಇನ್ಫಿನಿಕ್ಸ್‌ ಜಿರೋ 20: ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್‌

ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 13MP ಅಲ್ಟ್ರಾ-ವೈಡ್ ಯೂನಿಟ್ ಮತ್ತು ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 60MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೇಗದ ವೈರ್ಡ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್, GNSS, NFC ಮತ್ತು USB ಟೈಪ್-ಸಿ ಅನ್ನು ಬೆಂಬಲಿಸಲಿದೆ.

ಮೆಮೊರಿ ಮತ್ತು ಕಲರ್‌ ಆಯ್ಕೆ

ಮೆಮೊರಿ ಮತ್ತು ಕಲರ್‌ ಆಯ್ಕೆ

ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇಂದಿನಿಂದ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಗ್ರೀನ್ ಫ್ಯಾಂಟಸಿ, ಗ್ಲಿಟರ್ ಗೋಲ್ಡ್ ಮತ್ತು ಸ್ಪೇಸ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಇನ್ಫಿನಿಕ್ಸ್‌ ಜಿರೋ 20 ಅಲ್ಟ್ರಾ ಸ್ಮಾರ್ಟ್‌ಫೋನ್‌ ಫೀಚರ್ಸ್‌

ಇನ್ಫಿನಿಕ್ಸ್‌ ಜಿರೋ 20 ಅಲ್ಟ್ರಾ ಸ್ಮಾರ್ಟ್‌ಫೋನ್‌ ಫೀಚರ್ಸ್‌

ಈ ಫೋನ್ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 900ನಿಟ್ಸ್‌ ಪೀಕ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ 460Hz ಟಚ್ ಸ್ಯಾಂಪ್ಲಿಂಗ್ ರೇಟ್ ಕೂಡ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 920 6nm ಪ್ರೊಸೆಸರ್ ಹೊಂದಿದೆ. ಹಾಗೆಯೇ ಇನ್ಫಿನಿಕ್ಸ್‌ ಜಿರೋ 20 ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ.

Best Mobiles in India

English summary
Infinix Zero 20 price in India is Rs 15,999 for the 8GB + 128GB configuration.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+