ಭಾರತದಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಿದ ಇನ್ಫಿನಿಕ್ಸ್‌! 200MP ಕ್ಯಾಮೆರಾ ವಿಶೇಷ!

|

ಭಾರತದ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ಕಂಪೆನಿ ತನ್ನ ಬಹು ನಿರೀಕ್ಷಿತ ಇನ್ಫಿನಿಕ್ಸ್‌ ಜಿರೋ 20 ಮತ್ತು ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಫೋನ್‌ ಲಾಂಚ್‌ ಮಾಡಿದೆ. ಇದರಲ್ಲಿ ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 920 6nm ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಇನ್ಫಿನಿಕ್ಸ್‌ ಜಿರೋ 20 ಮತ್ತು ಜಿರೋ ಅಲ್ಟ್ರಾ ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಜಾಗತಿಕ ಆವೃತ್ತಿಗೆ ವಿಭಿನ್ನವಾದ ಹಾರ್ಡ್‌ವೇರ್‌ನೊಂದಿಗೆ ಭಾರತಕ್ಕೆ ಎಂಟ್ರಿ ನೀಡಿವೆ. ಇದರಲ್ಲಿ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ ಇನ್ಫಿನಿಕ್‌ಸ್‌ ಜಿರೋ 20 5G ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಜಿರೋ 20 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 900ನಿಟ್ಸ್‌ ಪೀಕ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ 460Hz ಟಚ್ ಸ್ಯಾಂಪ್ಲಿಂಗ್ ರೇಟ್ ಕೂಡ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 920 6nm ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12-ಆಧಾರಿತ XOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ನಲ್ ಸ್ಟೋರೇಜ್ ಹೊಂದಿದೆ.

ಕ್ಯಾಮೆರಾ ಎಷ್ಟಿದೆ? ಬ್ಯಾಟರಿ ಬ್ಯಾಕ್‌ಅಪ್‌ ಏನು?

ಕ್ಯಾಮೆರಾ ಎಷ್ಟಿದೆ? ಬ್ಯಾಟರಿ ಬ್ಯಾಕ್‌ಅಪ್‌ ಏನು?

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 13MP ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32MP ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 180W ಥಂಡರ್ ಚಾರ್ಜ್ ಸಿಸ್ಟಮ್‌ ಬೆಂಬಲಿಸಲಿದೆ.

ಇನ್ಫಿನಿಕ್ಸ್‌ ಜಿರೋ 20 ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಜಿರೋ 20 ಫೀಚರ್ಸ್‌ ಹೇಗಿದೆ?

ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು ಡ್ಯೂಡ್ರಾಪ್ ನಾಚ್‌ನೊಂದಿಗೆ ಬರಲಿದೆ. ಇದು ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಹಾಗೂ ಬ್ಯಾಟರಿ ಬ್ಯಾಕ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಹಾಗೂ ಬ್ಯಾಟರಿ ಬ್ಯಾಕ್‌ ಎಷ್ಟಿದೆ?

ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 13MP ಅಲ್ಟ್ರಾ-ವೈಡ್ ಯೂನಿಟ್ ಮತ್ತು ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 60MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೇಗದ ವೈರ್ಡ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್, GNSS, NFC ಮತ್ತು USB ಟೈಪ್-ಸಿ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ 8GB + 128GB ಮಾದರಿಗೆ 29,999ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇದೇ ಡಿಸೆಂಬರ್ 25 ರಿಂದ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ. ಈ ಫೋನ್ ಕಾಸ್ಲೈಟ್ ಸ್ಲಿವರ್ ಮತ್ತು ಜೆನೆಸಿಸ್ ನಾಯರ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.
ಇನ್ಫಿನಿಕ್ಸ್‌ ಜಿರೋ 20 ಸ್ಮಾರ್ಟ್‌ಪೋನ್‌ ಬೆಲೆ 15,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಗ್ರೀನ್ ಫ್ಯಾಂಟಸಿ, ಗ್ಲಿಟರ್ ಗೋಲ್ಡ್ ಮತ್ತು ಸ್ಪೇಸ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ಈ ಫೋನ್ ಇದೇ ಡಿಸೆಂಬರ್ 25 ರಿಂದ ಫ್ಲಿಪ್‌ಕಾರ್ಟ್ ಮೂಲಕ ಸೇಲ್‌ ಅಗಲಿದೆ.

Best Mobiles in India

English summary
Infinix Zero 20, Zero Ultra 5G launched in India: price, specs

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X