ಇನ್ಫಿನಿಕ್ಸ್ ಜೀರೋ 30 5G ಬಿಡುಗಡೆಗೂ ಮುನ್ನವೇ ಫೀಚರ್ಸ್ ಬಹಿರಂಗ!
ಬಹು ನಿರೀಕ್ಷಿತ ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲು ತುದಿಗಾಲಿನಲ್ಲಿ ನಿಂತಿರುವ ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್‌ನ ಫೀಚರ್ಸ್ ಇದೀಗ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ನಲ್ಲಿ ಬರಲಿದೆ.
ಹೌದು, ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್ ಆಗಮನಕ್ಕೂ ಮುನ್ನವೇ ಫೀಚರ್ಸ್ ಅಧಿಕೃತವಾಗಿದೆ. ಈ ಸ್ಮಾರ್ಟ್‌ಫೋನ್ 68W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಲ್ಲದೆ 'ವರ್ಚುವಲ್ RAM' ಮೂಲಕ RAM ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಜೀರೋ 30 5G ಡಿಸ್‌ಪ್ಲೇ
ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್ 6.78-ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಕೂಡ ಹೊಂದಿದೆ. ಇದು 950 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಹೊಂದಿದೆ ಎಂದು ಕಂಪೆನಿ ದೃಢಪಡಿಸಿದೆ. ಜೊತೆಗೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಸಹ ಹೊಂದಿರಲಿದೆ.
ಇನ್ಫಿನಿಕ್ಸ್ ಜೀರೋ 30 5G ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 13 ಔಟ್-ಆಫ್-ಬಾಕ್ಸ್‌ನಲ್ಲಿ ರನ್ ಆಗಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ 'ವರ್ಚುವಲ್ RAM' ಮೂಲಕ RAM ಅನ್ನು ವಿಸ್ತರಿಸಬಹುದಾಗಿದೆ.
ಇನ್ಫಿನಿಕ್ಸ್ ಜೀರೋ 30 5G ಕ್ಯಾಮೆರಾ
ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಲ್ಯಾಂಡಿಂಗ್ ಪೇಜ್‌ನಲ್ಲಿರುವ ಮಾಹಿತಿಯ ಪ್ರಕಾರ ಇದು 60fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ.
ಇನ್ಫಿನಿಕ್ಸ್ ಜೀರೋ 30 5G ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್ 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರಿಂದ ನೀವು ಕೇವಲ 30 ನಿಮಿಷಗಳ ಚಾರ್ಜಿಂಗ್‌ನಲ್ಲಿ 80% ಚಾರ್ಜ್ ಮಾಡಬಹುದು ಎಂದು ಕಂಪನಿ ತಿಳಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಫೇಸ್ ಅನ್‌ಲಾಕಿಂಗ್‌ಗೆ ಬೆಂಬಲವಿದೆ. ಫೋನ್ ಡ್ಯುಯಲ್ ಸ್ಪೀಕರ್ ಸೆಟಪ್ ಅನ್ನು ಸಹ ಹೊಂದಿದೆ.
ಇನ್ಫಿನಿಕ್ಸ್ ಜೀರೋ 30 5G ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್‌ಫೋನ್ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಸೆಪ್ಟೆಂಬರ್ ಒಂದರಂದು ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಇನ್ನು ಸ್ಮಾರ್ಟ್‌ಫೋನ್ ಗೋಲ್ಡನ್ ಅವರ್ ಮತ್ತು ರೋಮ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇದು 5G, Wi-Fi 6 ಮತ್ತು NFC ಸಂಪರ್ಕವನ್ನು ನೀಡುತ್ತದೆ ಎಂದು ಹೇಳಲಾಗಿದೆ.


Click it and Unblock the Notifications








