ಈ 5G ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು OMG ಅನ್ನೋದು ಪಕ್ಕಾ!
ಲೀಡಿಂಗ್ ಇ ಕಾಮರ್ಸ್ ಎನಿಸಿರುವ ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಮೊಬೈಲ್‌ಗಳಿಗೆ ಭಾರೀ ರಿಯಾಯಿತಿ ಸೌಲಭ್ಯ ಲಭ್ಯ ಮಾಡಿರುತ್ತದೆ. ಈ ಪ್ಲಾಟ್‌ಫಾರ್ಮ್‌ನಲ್ಲಿ ಎಲ್ಲ ಮಾದರಿಯ ಫೋನ್‌ಗಳು ಕೂಡಾ ವಿಶೇಷ ಡಿಸ್ಕೌಂಟ್ ಪಡೆದಿರುತ್ತವೆ. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಇನ್ಫಿನಿಕ್ಸ್ ಜಿರೋ 30 5G ಫೋನ್ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರ ಗಮನ ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಇನ್ಫಿನಿಕ್ಸ್ ಕಂಪನಿಯ ಇನ್ಫಿನಿಕ್ಸ್ ಜಿರೋ 30 5G ಫೋನ್ ಶೇ. 14% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8 GB RAM + 256 GB ಸ್ಟೋರೇಜ್ ವೇರಿಯಂಟ್‌ನ ಆಫರ್ ಬೆಲೆಯು 23,999ರೂ. ಗಳು ಆಗಿದೆ. ಹಾಗೆಯೇ ಖರೀದಿದಾರರು ಲಭ್ಯ ಇರುವ ಎಕ್ಸ್‌ಚೆಂಜ್ ಆಫರ್ ಹಾಗೂ ಇತರೆ ರಿಯಾಯಿತಿ ಪಡೆದುಕೊಂಡರೆ, ಈ ಮೊಬೈಲ್ ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ.

ಇನ್ನು ಇನ್ಫಿನಿಕ್ಸ್‌ನ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದೆ. ಜೊತೆಗೆ ಈ ಫೋನಿನ ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಇನ್ನುಳಿದಂತೆ ಈ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಇನ್ಫಿನಿಕ್ಸ್ ಸಂಸ್ಥೆಯ ಈ ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಇದರ ಡಿಸ್‌ಪ್ಲೇ 60 ಡಿಗ್ರಿ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್ ಸಪೋರ್ಟ್ ನೀಡಲಿದೆ. ಇದಲ್ಲದೆ ಡಿಸ್‌ಪ್ಲೇ 950 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಪಡೆದಿದ್ದು, 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಇನ್ಫಿನಿಕ್ಸ್ ಜಿರೋ 30 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲ ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಆಂತರೀಕ ಸ್ಟೋರೇಜ್ ಸೌಲಭ್ಯ ಸಹ ಹೊಂದಿದ್ದು, Memfusion RAM ಫೀಚರ್ಸ್ ಮೂಲಕ ಆನ್‌ಬೋರ್ಡ್ ಮೆಮೊರಿಯನ್ನು 21GB ವರೆಗೆ ವಿಸ್ತರಿಸುವ ಚಾನ್ಸ್ ಇದೆ.
ಕ್ಯಾಮೆರಾ ಸೆನ್ಸಾರ್
ಇನ್ಫಿನಿಕ್ಸ್ ಜಿರೋ 30 5G ಫೋನ್ ಮೂರು ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾ ಪಡೆದುಕೊಂಡಿದೆ.
ಬ್ಯಾಟರಿ ಬ್ಯಾಕ್‌ಅಪ್
ಇನ್ನು ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದರ ಜತೆಗೆ 68W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದರಿಂದ ಫೋನ್ ಅನ್ನು ಕೇವಲ 30 ನಿಮಿಷಗಳಲ್ಲಿ ಶೂನ್ಯದಿಂದ 80% ವರೆಗೆ ಚಾರ್ಜಿಂಗ್ ಪಡೆದುಕೊಳ್ಳಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, NFC, GPS, USB ಟೈಪ್-C ಪೋರ್ಟ್, ಬ್ಲೂಟೂತ್ 5.3, ಮತ್ತು Wi-Fi 6 ಅನ್ನು ಪಡೆದುಕೊಂಡಿದೆ.


Click it and Unblock the Notifications








