ಇನ್ಫಿನಿಕ್ಸ್ ಜಿರೋ 30 5G ಇಂದು ಖರೀದಿಗೆ ಲಭ್ಯ..ಬೆಲೆ ಎಷ್ಟು? ಫೀಚರ್ಸ್ ಏನು?
ಇನ್ಫಿನಿಕ್ಸ್ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ಇನ್ಫಿನಿಕ್ಸ್ ಜಿರೋ 30 5G ಸ್ಮಾರ್ಟ್‌ಫೋನ್ ಇಂದು (ಸೆ. 05) ಫ್ಲಿಪ್‌ಕಾರ್ಟ್ ತಾಣದಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್ ಪಡೆದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಇನ್ಫಿನಿಕ್ಸ್ ಜಿರೋ 30 5G ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಪ್ರಾರಂಭವಾಗಲಿದೆ. ಈ ಫೋನ್ 12GB RAM ಮತ್ತು 256GB ಹಾಗೂ 12GB + 256GB ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಈ ಫೋನಿನ ಆರಂಭಿಕ ಬೆಲೆಯು 23999ರೂ. ಆಗಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್ ಜಿರೋ 30 5G ಡಿಸ್‌ಪ್ಲೇ ರಚನೆ ಹೇಗಿದೆ :
ಇನ್ಫಿನಿಕ್ಸ್ ಜಿರೋ 30 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿರುವ ಜೊತೆಗೆ ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 144Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡುತ್ತದೆ. ಅಲ್ಲದೇ ಡಿಸ್‌ಪ್ಲೇ 950 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಹಾಗೆಯೇ 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು DCI-P3 ಬಣ್ಣದ ಹರವು 100 ಪ್ರತಿಶತ ಕವರೇಜ್ ಅನ್ನು ತಲುಪಿಸಲು ರೇಟ್ ಮಾಡಲಾಗಿದೆ.
ಇನ್ಫಿನಿಕ್ಸ್ ಜಿರೋ 30 5G ಪ್ರೊಸೆಸರ್ ಮಾಹಿತಿ :
ಇನ್ಫಿನಿಕ್ಸ್ ಜಿರೋ 30 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್ ಪವರ್ ವೇಗ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ XOS 13 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಹಾಗೂ 12GB + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.
ಇನ್ಫಿನಿಕ್ಸ್ ಜಿರೋ 30 5G ಕ್ಯಾಮೆರಾ ಸೆನ್ಸಾರ್ ಮಾಹಿತಿ :
ಇನ್ಫಿನಿಕ್ಸ್ ಜಿರೋ 30 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾವನ್ನು ಸಹ ಹೊಂದಿದ್ದು, ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಲಭ್ಯ.
ಇನ್ಫಿನಿಕ್ಸ್ ಜಿರೋ 30 5G ಬ್ಯಾಟರಿ ಮತ್ತು ಇತರೆ ಆಯ್ಕೆಗಳು
ಇನ್ಫಿನಿಕ್ಸ್ ಜಿರೋ 30 5G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಮೊಬೈಲ್ ಅನ್ನು ಕೇವಲ 30 ನಿಮಿಷಗಳಲ್ಲಿ ಶೂನ್ಯದಿಂದ 80% ವರೆಗೆ ಚಾರ್ಜಿಂಗ್ ಮಾಡಬಹುದಾಗಿದೆ.
ಕನೆಕ್ಟಿವಿಟಿ ಆಯ್ಕೆಗಳು :
ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, NFC, GPS, USB ಟೈಪ್-C ಪೋರ್ಟ್, ಬ್ಲೂಟೂತ್ 5.3, ಮತ್ತು Wi-Fi 6 ಅನ್ನು ಪಡೆದುಕೊಂಡಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ, G-ಸೆನ್ಸರ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ನೊಂದಿಗೆ ಲಭ್ಯ.


Click it and Unblock the Notifications








