Home
ಸುದ್ದಿಜಾಲ

8GB RAM ಇರುವ ಈ ಮೊಬೈಲ್‌ಗೆ ಈಗ ಬಿಗ್‌ ಆಫರ್‌!..ಉಳಿತಾಯ ಪಕ್ಕಾ!

ಇನ್ಫಿನಿಕ್ಸ್‌ ಮೊಬೈಲ್‌ ಬ್ರ್ಯಾಂಡ್‌ ಅಗ್ಗದ ಬೆಲೆಯ ಜೊತೆಗೆ ಕೆಲವು ಪ್ರೀಮಿಯಂ ಮಾದರಿಯ ಫೋನ್‌ಗಳ ಮೂಲಕ ಸಹ ಮಾರುಕಟ್ಟೆಯಲ್ಲಿ ಜನಪ್ರಿಯತೆ ಗಳೆಸುವ ನಿಟ್ಟಿನಲ್ಲಿ ಸಾಗಿದೆ. ಸಂಸ್ಥೆಯ ಜನಪ್ರಿಯ ಫೋನ್‌ಗಳ ಲಿಸ್ಟ್‌ನಲ್ಲಿ ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ ಸ್ಥಾನ ಪಡೆದಿದ್ದು, ಆದರೆ ಈ ಫೋನ್‌ ಈಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಬಿಗ್ ಡಿಸ್ಕೌಂಟ್‌ನಲ್ಲಿ ಪಡೆದುಕೊಂಡಿದೆ.

ಹೌದು, ಇ ಕಾಮರ್ಸ್‌ ತಾಣದ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 40% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 24,999ರೂ. ಆಗಿದ್ದು, ಆದರೆ ಗ್ರಾಹಕರು ಕೊಡುಗೆಯಲ್ಲಿ ಈ ಮೊಬೈಲ್‌ ಅನ್ನು 14,999ರೂ. ಗಳ ವಿಶೇಷ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ.

8GB RAM ಇರುವ ಈ ಮೊಬೈಲ್‌ಗೆ ಈಗ ಬಿಗ್‌ ಆಫರ್‌!..ಉಳಿತಾಯ ಪಕ್ಕಾ!

ಇನ್ನು ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗಾದರೆ ಇನ್ಫಿನಿಕ್ಸ್‌ ಜಿರೋ 5G 2023 ಫೋನ್ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ಜಿರೋ 5G 2023 ಡಿಸ್‌ಪ್ಲೇ ರಚನೆ : ಇನ್ಫಿನಿಕ್ಸ್‌ ಜಿರೋ 5G 2023 ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2460 × 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 120Hz ರಿಫ್ರೆಶ್ ರೇಟ್‌, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 500ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇದು ಪಂಚ್-ಹೋಲ್ ನಾಚ್ ವಿನ್ಯಾಸ ಅನ್ನು ಹೊಂದಿದೆ.

ಇನ್ಫಿನಿಕ್ಸ್‌ ಜಿರೋ 5G 2023 ಪ್ರೊಸೆಸರ್‌ ಯಾವುದು : ಇನ್ಫಿನಿಕ್ಸ್‌ ಜಿರೋ 5G 2023 ಮೊಬೈಲ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದೆ. ಜೊತೆಗೆ ಇಂಟಿಗ್ರೇಟೆಡ್ ಮಾಲಿ ಜಿ68 ಜಿಪಿಯು ಸಪೋರ್ಟ್‌ ಪಡೆದಿದ್ದು, ಇನ್ನು ಆಂಡ್ರಾಯ್ಡ್‌ 12 ಸಪೋರ್ಟ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನು ಇದು 8GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಅನ್ನು ಪಡೆದಿದೆ.

ಇನ್ಫಿನಿಕ್ಸ್‌ ಜಿರೋ 5G 2023 ಕ್ಯಾಮೆರಾ ಸೆನ್ಸಾರ್ : ಇನ್ಫಿನಿಕ್ಸ್‌ ಜಿರೋ 5G 2023 ಮೊಬೈಲ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಇನ್ನು ಇದರ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದು ಸೂಪರ್ ನೈಟ್ ಮೋಡ್, ನೈಟ್ ಫಿಲ್ಟರ್, ಸ್ಕೈ ರಿಮ್ಯಾಪ್ ಮತ್ತು ಫಿಲ್ಮ್ ಮೋಡ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಜೊತೆಗೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಅನ್ನು ಸಹ ಒದಗಿಸಲಾಗಿದೆ.

ಇನ್ಫಿನಿಕ್ಸ್‌ ಜಿರೋ 5G 2023 ಬ್ಯಾಟರಿ ಬ್ಯಾಕ್‌ಅಪ್‌ : ಈ ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ ಕನೆಕ್ಟಿವಿಟ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಮತ್ತು ಟೈಪ್-ಸಿ ಪೋರ್ಟ್ ಸೌಲಭ್ಯಗಳನ್ನು ಇದು ಪಡೆದುಕೊಂಡಿದೆ.

ಇನ್ಫಿನಿಕ್ಸ್‌ ಜಿರೋ 5G 2023 ಕಲರ್ ಆಯ್ಕೆ ಹಾಗೂ ಮೆಮೊರಿ : ಇನ್ಫಿನಿಕ್ಸ್‌ ಜಿರೋ 5G 2023 ಫೋನ್‌ 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಆರೆಂಜ್‌, ವೈಟ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
Infinix Zero 5G 2023 big price drop on this flipkart website. details all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+