Just In
- 10 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 12 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 12 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 14 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Sports
ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ಗೆ ಸೋಲು: ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ವಿರುದ್ಧ ಬೆನ್ ಸ್ಟೋಕ್ಸ್ ಟೀಕೆ
- Movies
ಸ್ಯಾಂಡಲ್ವುಡ್ ಜೋಡಿ ಹರಿಪ್ರಿಯಾ, ವಸಿಷ್ಠ ಸಿಂಹ ಅದ್ಧೂರಿ ಆರತಕ್ಷತೆ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- News
ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಇನ್ಫಿನಿಕ್ಸ್ ಜಿರೋ 2023 5G!
ಇನ್ಫಿನಿಕ್ಸ್ ಕಂಪೆನಿಯ ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಅದಕ್ಕೆ ಅನುಗುಣವಾಗಿ ಇನ್ಫಿನಿಕ್ಸ್ ಕಂಪೆನಿ ಕೂಡ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಇನ್ಫಿನಿಕ್ಸ್ ಕಂಪೆನಿ ಇದೇ ತಿಂಗಳು ಭಾರತದಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ಗಳನ್ನು ಇನ್ಫಿನಿಕ್ಸ್ ನೋಟ್ 12i 2022, ಇನ್ಫಿನಿಕ್ಸ್ ಜಿರೋ 5G 2023ಎಂದು ಹೆಸರಿಸಲಾಗಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಶೀಘ್ರದಲ್ಲೇ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಹೊಸ ಝೀರೋ ಬುಕ್ ಅಲ್ಟ್ರಾ ಲ್ಯಾಪ್‌ಟಾಪ್ ಅನ್ನು ಅನಾವರಣಗೊಳಿಸುವುದ ದೃಡಪಡಿಸಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಜಾಗತಿಕ ಮಾರುಕಟ್ಟೆಗಳಲ್ಲಿ ಲಾಂಚ್ ಆಗಿದ್ದು, ಇದೀಗ ಭಾರತಕ್ಕೆ ಎಂಟ್ರಿ ನೀಡುವುದಕ್ಕೆ ಸಿದ್ಧತೆ ನಡೆಸಿವೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಏನೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಇನ್ಫಿನಿಕ್ಸ್ ನೋಟ್ 12i 2022
ಇನ್ಫಿನಿಕ್ಸ್ ನೋಟ್ 12i 2022 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ಹೊಂದಿರಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 33W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಇನ್ಫಿನಿಕ್ಸ್ ಜಿರೋ 2023 5G
ಇನ್ಫಿನಿಕ್ಸ್ ಜಿರೋ 2023 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ.
ಇದಲ್ಲದೆ ಇನ್ಫಿನಿಕ್ಸ್ ಕಂಪೆನಿ ಇತ್ತೀಚಿಗೆ ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.82 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1640 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಪ್ಲಿಂಗ್ ರೇಟ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ 82.8% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ. ಇದು 263 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಇನ್ಫಿನಿಕ್ಸ್ ಹಾಟ್ 20 ಪ್ಲೇ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ G37 ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 OS ನಲ್ಲಿ ಕಾರ್ಯನಿರ್ವಹಿಸಲಿದೆ. ಇದು Infinix ನ XOS UI ನೊಂದಿಗೆ ಆವರಿಸಲ್ಪಟ್ಟಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ 3GB ವರ್ಚುವಲ್ RAM ಅನ್ನು ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470