ಇನ್ಫಿನಿಕ್ಸ್ ಜಿರೋ 5G 2023 ಸ್ಮಾರ್ಟ್‌ಫೋನ್ ಲಾಂಚ್! 29 ದಿನಗಳ ಬ್ಯಾಟರಿ ಬಾಳಿಕೆ ವಿಶೇಷ!
ಮಾರುಕಟ್ಟೆಯಲ್ಲಿ ಲಭ್ಯವಿರುವ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಇನ್ಫಿನಿಕ್ಸ್ ಬ್ರ್ಯಾಂಡ್ ಕೂಡ ಒಂದಾಗಿದೆ. ಇನ್ಫಿನಿಕ್ಸ್ ಸಂಸ್ಥೆಯ ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಇನ್ಫಿನಿಕ್ಸ್ ಕಂಪೆನಿ ಹೊಸ ಹೊಸ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಇನ್ಫಿನಿಕ್ಸ್ ಜಿರೋ ಸರಣಿಯಲ್ಲಿ ಹೊಸ ಇನ್ಫಿನಿಕ್ಸ್ ಜಿರೋ 5G 2023 ಬಿಡುಗಡೆ ಮಾಡಿದೆ. ಇದು ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಇನ್ಫಿನಿಕ್ಸ್ ಜಿರೋ 5G ಯ ವರ್ಧಿತ ಆವೃತ್ತಿಯಾಗಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಜಿರೋ 5G 2023 ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ವೇಗವನ್ನು ಪಡೆದಿದೆ. ಡೈಮೆನ್ಸಿಟಿ 900 ಗಿಂತ ಸುಮಾರು 10% ಅಪ್ಡೇಟ್‌ಗಳನ್ನು ನೀಡಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆಲ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ಇನ್ಫಿನಿಕ್ಸ್ ಜಿರೋ 5G 2023 ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2460 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 500ನಿಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಇದು ಪಂಚ್-ಹೋಲ್ ನಾಚ್ ವಿನ್ಯಾಸವನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ಜಿರೋ 5G 2023 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಇಂಟಿಗ್ರೇಟೆಡ್ ಮಾಲಿ ಜಿ68 ಜಿಪಿಯು ಸಪೋರ್ಟ್ ಪಡೆಇದೆ. ಇನ್ನು ಆಂಡ್ರಾಯ್ಡ್ 12 ಆಧಾರಿತ XOS 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಪಡೆದಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಇನ್ಫಿನಿಕ್ಸ್ ಜಿರೋ 5G 2023 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದು ಸೂಪರ್ ನೈಟ್ ಮೋಡ್, ನೈಟ್ ಫಿಲ್ಟರ್, ಸ್ಕೈ ರಿಮ್ಯಾಪ್ ಮತ್ತು ಫಿಲ್ಮ್ ಮೋಡ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದಲ್ಲದೆ 16ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ಸ್ಮಾರ್ಟ್‌ಫೋನ್ ಸುಮಾರು 29 ದಿನಗಳ ಬ್ಯಾಟರಿ ಬಾಳಿಕೆ ನೀಡಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಮತ್ತು ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಜಿರೋ 5G 2023 ಸ್ಮಾರ್ಟ್‌ಫೋನ್ ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂದಿದೆ. ಇದರ ಬೆಲೆ $239 (ಅಂದಾಜು 19,404ರೂ) ಆಗಿದೆ. ಇದನ್ನು ಪರ್ಲಿ ವೈಟ್, ಕೋರಲ್ ಆರೆಂಜ್ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








