Home
ಸುದ್ದಿಜಾಲ

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ ಅನಾವರಣ! ಹೇಗಿದೆ ಫೀಚರ್ಸ್!

ಇನ್ಫಿನಿಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸ್ಟೈಲಿಶ್‌ ಲುಕ್‌ ಮತ್ತು ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆಯುತ್ತಾ ಬಂದಿವೆ. ಅಲ್ಲದೆ ಬಜೆಟ್‌ ಸ್ನೇಹಿ ಸ್ಮಾರ್ಟ್‌ಫೋನ್‌ಗಳಿಗೆ ಇನ್ಫಿನಿಕ್ಸ್‌ ಅದ್ಯತೆ ನೀಡುತ್ತಾ ಬಂದಿದೆ. ಸದ್ಯ ಇದೀಗ ತನ್ನ ಹೊಸ 5G ಸ್ಮಾರ್ಟ್‌ಫೋನ್‌ ಇನ್ಫಿನಿಕ್ಸ್‌ ಜಿರೋ 5G 2023 ಅನ್ನು ಅನಾವರಣಗೊಳಿಸಿದೆ. ಇದು ಇನ್ಫಿನಿಕ್ಸ್‌ ಕಂಪೆನಿಯ ಮೊದಲ 5G ಫೋನ್‌ ಇನ್ಫಿನಿಕ್ಸ್‌ ಜಿರೋ 5Gಯ ಉತ್ತರಾಧಿಕಾರಿಯಾಗಿದೆ. ಈ ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 1080 5G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಹೊಸ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್‌ ರೇಟ್‌ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 6.78 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2460 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 500 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌ ಸಾಮರ್ಥ್ಯ ಏನಿದೆ?

ಪ್ರೊಸೆಸರ್‌ ಸಾಮರ್ಥ್ಯ ಏನಿದೆ?

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 1080 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆರ್ಮ್ ಮಾಲಿ-G68 MC4 GPU ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ RAM ಅನ್ನು ಇನ್‌ಬಿಲ್ಟ್‌ ಸ್ಟೋರೇಜ್‌ ಬಳಸಿಕೊಂಡು ವಾಸ್ತವಿಕವಾಗಿ 5GB ವರೆಗೆ ವಿಸ್ತರಿಸಬಹುದಾಗಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಮೂರು ಕ್ಯಾಮೆರಾಗಳನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ ಪ್ರತಿ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ (fps) 4K ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಹೇಳಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಫೀಚರ್ಸ್‌

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, 5G, FM ರೇಡಿಯೋ, ಬ್ಲೂಟೂತ್, GPS, OTG, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಇ-ಕಂಪಾಸ್‌, ಲೈಟ್‌ ಸೆನ್ಸಾರ್‌, ಗೈರೊಸ್ಕೋಪ್, ಜಿ-ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್‌ಫೋನ್‌ ಅಧಿಕೃತವಾಗಿ ಅನಾವರಣಗೊಂಡಿದೆ. ಆದರೆ ಇದರ ಬೆಲೆ ಹಾಗೂ ಲಭ್ಯತೆಯ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಪರ್ಲ್ ವೈಟ್, ಕೋರಲ್ ಆರೆಂಜ್ ಮತ್ತು ಸಬ್‌ಮೆರಿನರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ತೋರಿಸಲಾಗಿದೆ.

Best Mobiles in India

English summary
Infinix ZERO 5G 2023 with Dimensity 1080 SoC Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+