ಇಂದು ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಮೊದಲ ಮಾರಾಟ! ಸೇಲ್ ಆಫರ್ ಏನಿದೆ?
ಇನ್ಫಿನಿಕ್ಸ್ ಕಂಪೆನಿ ಕೆಲ ದಿನಗಳ ಹಿಂದೆ ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಪರಿಚಯಿಸಿದ ಮೊದಲ 5G ಸ್ಮಾರ್ಟ್‌ಫೋನ್ ಎನಿಸಿಕೊಂಡಿದೆ. ತನ್ನ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿರುವ ಈ ಸ್ಮಾರ್ಟ್‌ಫೋನ್ ಇಂದು (ಫೆ.18) ಫ್ಲಿಪ್‌ಕಾರ್ಟ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಮೊದಲ ಮಾರಾಟವನ್ನು ನಡೆಸಲಿದೆ. ಇನ್ನು ಈ ಈ ಸ್ಮಾರ್ಟ್‌ಫೋನ್ ಕಾಸ್ಮಿಕ್ ಬ್ಲಾಕ್ ಮತ್ತು ಸ್ಕೈಲೈಟ್ ಆರೆಂಜ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಮೊದಲ ಸೇಲ್ ಇಂದು ನಡೆಯಲಿದೆ. ಫ್ಲಿಪ್‌ಕಾರ್ಟ್ ತಾಣದಲ್ಲಿ ತನ್ನ ಮೊದಲ ಸೇಲ್ ಅನ್ನು ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್ 19,999ರೂ.ಬೆಲೆಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಇನ್ಪಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS LTPS ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, 240Hz ಟಚ್ ಸ್ಯಾಂಪಲ್ ರೇಟ್ ಮತ್ತು 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ XOS 10 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ 5GB ವರ್ಚುವಲ್ RAM ಅನ್ನು ಸೇರಿಸುವ ಆಯ್ಕೆಯನ್ನು ನೀಡುತ್ತದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 256GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಪಡೆದಿದೆ.

ಕ್ಯಾಮೆರಾ ವಿಶೇಷ
ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಪೋರ್ಟ್ರೇಟ್ ಲೆನ್ಸ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಜೊತೆಗೆ 2x ಆಪ್ಟಿಕಲ್ ಜೂಮ್ ಮತ್ತು 30x ಡಿಜಿಟಲ್ ಜೂಮ್ ಅನ್ನು ಹೊಂದಿದೆ. ಇನ್ನು ಹಿಂಬದಿಯ ಕ್ಯಾಮೆರಾ ಸೆಟಪ್ ಕ್ವಾಡ್-ಎಲ್ಇಡಿ ಫ್ಲ್ಯಾಷ್ ಅನ್ನು ಕೂಡ ಹೊಂದಿದೆ. ಹಾಗೆಯೇ ಸ್ಲೋ ಮೋಷನ್, ಸೂಪರ್ ನೈಟ್ ಮೋಡ್ ಮತ್ತು 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಫೀಚರ್ಸ್ ಬೆಂಬಲಿಸುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ v5, GPS, OTG, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-ಸಿ ಪೋರ್ಟ್ ಸೇರಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಲೈಟ್ ಸೆನ್ಸಾರ್, ಗೈರೊಸ್ಕೋಪ್, ಜಿ-ಸೆನ್ಸರ್, ಇ-ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ DTS ಸರೌಂಡ್ ಸೌಂಡ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ತನ್ನ ಸಿಂಗಲ್ ವೇರಿಯೆಂಟ್ 8GB RAM ಮತ್ತು 128GB ಆಯ್ಕೆಗೆ 19,999ರೂ. ಬೆಲೆಯನ್ನು ಹೊಂದಿದೆ. ಇದು ಇಂದು ಫ್ಲಿಪ್‌ಕಾರ್ಟ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಾಸ್ಮಿಕ್ ಬ್ಲಾಕ್ ಮತ್ತು ಸ್ಕೈಲೈಟ್ ಆರೆಂಜ್ ಕಲರ್ ಆಯ್ಕೆಗಳಲ್ಲ ಲಭ್ಯವಾಗಲಿದೆ.

ಆಫರ್ ಏನಿದೆ?
ಇಂದು ನಡೆಯಲಿರುವ ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಫಸ್ಟ್ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಸ್ಮಾರ್ಟ್ ಅಪ್‌ಗ್ರೇಡ್ ಪ್ಲಾನ್ ಮೂಲಕ ವಿಶೇಷ ಆಫರ್ ಪಡೆಯಬಹುದು. ಸ್ಮಾರ್ಟ್ ಅಪ್‌ಗ್ರೇಡ್ ಪ್ಲಾನ್ ನಲ್ಲಿ ಬಳಕೆದಾರರು ಫೋನ್‌ನ ಬೆಲೆಯ 70% ಅಂದರೆ 14,098 ರೂ.ಗಳನ್ನು ಪಾವತಿಸಬಹುದು. ಒಂದು ವರ್ಷದ ನಂತರ, ನೀವು ಉಳಿದ 30% ಹಣವನ್ನು ಪಾವತಿಸಬಹುದು ಅಥವಾ ಫೋನ್ ಅನ್ನು ಹಿಂತಿರುಗಿಸಬಹುದು.


Click it and Unblock the Notifications








